Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಸರ್ಕಾರಿ ಗುತ್ತಿಗೆಯಲ್ಲಿ ಮುಸ್ಲಿಂರಿಗೆ ಮೀಸಲಾತಿ ; ಇಂದು ಸಂಜೆ ಸಭೆಯಲ್ಲಿ ನಿರ್ಧಾರ

---Advertisement---

ಬೆಂಗಳೂರು; ಸರ್ಕಾರಿ ಗುತ್ತಿಗೆಯಲ್ಲಿ ಮುಸ್ಲಿಂರಿಗೆ ಮೀಸಲಾತಿ ವಿಚಾರಕ್ಕೆ ಸಂಬಂಧಿಸಿದಂತೆ ಇಂದಿನ ಸಚಿವ ಸಂಪುಟ ಸಭೆಯಲ್ಲಿ ಈ ವಿಷಯ ಚರ್ಚೆಯಾಗುವ ಸಾಧ್ಯತೆ ಇದೆ. ಉಪಚುನಾವಣೆಯ ವೇಳೆ ಇದನ್ನ ಜಾರಿಗೆ ತರುವುದಕ್ಕೆ ಸರ್ಕಾರ ಮುಂದಾಗಿತ್ತು. ಆದರೆ ಇದಕ್ಕೆ ವಿರೋಧ ವ್ಯಕ್ತವಾದ ಹಿನ್ನೆಲೆ ಯೋಜನೆಯನ್ನ ಮುಂದೂಡಿಕೆ ಮಾಡಿತ್ತು. ಈಗ ಮಸೂದೆ ರೂಪದಲ್ಲಿ ಮುಸ್ಲಿಂರಿಗೆ ಮೀಸಲಾತಿ ತರೋದಕ್ಕೆ ಚಿಂತನೆ ನಡೆಸಿದೆ ಎನ್ನಲಾಗಿದೆ.

ಸರ್ಕಾರಿ ಕಾಮಗಾರಿಗಳ ಗುತ್ತಿಗೆಯಲ್ಲಿ ಶೇಕಡ 4ರಷ್ಟು ಮೀಸಲಾತಿಯನ್ನು ನೀಡಬೇಕೆಂದು ಆ ವಿಧೇಯಕದಲ್ಲಿ ಮಂಡಿಸಲಾಗುತ್ತಿದೆ. ಈ ವಿಧೇಯಕದ ಬಗ್ಗೆ ಇಂದು ಸಂಜೆ 7 ಗಂಟೆಗೆ ನಡೆಯುವ ಸಂಪುಟದಲ್ಲಿ ಚರ್ಚೆಯಾಗುವ ಸಾಧ್ಯತೆ ಇದೆ. ಸರ್ಕಾರಿ ಕಾಮಗಾರಿಗಳ ಗುತ್ತಿಗೆಯಲ್ಲಿ ಮುಸ್ಲಿಂರಿಗೆ 4% ಮೀಸಲಾತಿ ನೀಡುವಂತ ವಿಧೇಯಕ ಇದಾಗಿದೆ. ಮಸೂದೆ ರೂಪದಲ್ಲಿ ತರೋದಕ್ಕೆ ಯೋಜನೆ ರೂಪಿಸಿದ್ದಾರೆ. ವಿಧಾನಮಂಡಲ ಅಧಿವೇಶನ ಮುಗಿದ ಮೇಲೆ ಸಂಜೆ ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಈ ಸಭೆ ನಡೆಯಲಿದೆ.

ಈ ಬಾರಿಯ ಅಧಿವೇಶನದಲ್ಲಿಯೇ ಈ ವಿಧೇಯಕವನ್ನ ಮಂಡನೆ ಮಾಡುವ ಸಾಧ್ಯತೆ ಇದೆ. ಅಲ್ಪಸಂಖ್ಯಾತ ಶಾಸಕ, ಸಚಿವರೆಲ್ಲರು ಈಗಾಗಲೇ ಎಸ್ಸಿ/ಎಸ್ಟಿ ಸಮುದಾಯ ಹಾಗೂ ಪ್ರವರ್ಗ 1,2,Aಗೆ ಮೀಸಲಾತಿಯನ್ನು ಸರ್ಕಾರಿ ಕಾಮಗಾರಿಗಳಲ್ಲಿ ನೀಡಲಾಗ್ತಾ ಇದೆ. ಒಂದು ಕೋಟಿಯಷ್ಟು ಸರ್ಕಾರಿ ಕಾಮಗಾರಿಗಳಲ್ಲಿ ಶೇಕಡ 15% ರಷ್ಟು ಮೀಸಲಾತಿಯನ್ನ ಎಸ್ಸಿ/ಎಸ್ಟಿ ಹಾಗೂ ಉಳಿದ ಸಮುದಾಯಗಳಿಗೂ ನೀಡಲಾಗ್ತಾ ಇದೆ. ಇದೇ ಮಾದರಿಯಲ್ಲಿ ಮುಸ್ಲಿಂರಿಗೂ ಪ್ರತ್ಯೇಕವಾದ ಮೀಸಲಾತಿಯನ್ನ ಸರ್ಕಾರಿ ಕಾಮಗಾರಿಯಲ್ಲಿ ನೀಡಬೇಕು ಎಂಬ ಮನವಿಯನ್ನ ಸಲ್ಲಿಸಲಾಗಿತ್ತು. ಆದರೆ ಅಂದು ಉಪಚುನಾವಣೆ ಇದ್ದ ಕಾರಣ ಟೀಕೆಗಳು ವ್ಯಕ್ತವಾದ ಹಿನ್ನೆಲೆ ಸರ್ಕಾರ ಮುಂದೂಡಿತ್ತು. ಈಗ ಮತ್ತೆ ಆ ವಿಚಾರವನ್ನು ಮುನ್ನಲೆಗೆ ತಂದಿದೆ‌. ಸಂಜೆ ನಡೆಯುವ ಸಂಪುಟ ಸಭೆಯಲ್ಲಿ ಈ ವಿಚಾರವನ್ನ ಚರ್ಚೆಗೆ ತರಲಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...