ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 05 : ನಗರದ ಜಿ.ಹೆಚ್.ಆರ್. ಕಾಂಪೌಂಡ್ ನಿವಾಸಿ, ನಗರದ ಹೊಳಲ್ಕೆರೆ ರಸ್ತೆಯ ಶ್ರೀಮತಿ ಶಾರದಮ್ಮ ರುದ್ರಪ್ಪ ಕಲ್ಯಾಣ ಮಂಟಪ ಮಾಲೀಕರು ಹಾಗೂ ವಾಣಿಜೋದ್ಯಮಿಗಳು ಆರ್.ಎಸ್.ರುದ್ರಪ್ಪ (85 ವರ್ಷ) ಇಂದು ಬೆಳಿಗ್ಗೆ 8 ಗಂಟೆ ಸುಮಾರಿಗೆ ಅನಾರೋಗ್ಯದಿಂದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಮೃತರು ಪತ್ನಿ, ಡಾ.ವಾಗೀಶ್ ಸೇರಿದಂತೆ ನಾಲ್ವರು ಪುತ್ರರು ಸೇರಿದಂತೆ ಅಪಾರ ಬಂದು ಬಳಗದವರನ್ನು ಅಗಲಿದ್ದಾರೆ. ಅಂತ್ಯಕ್ರಿಯೆಯನ್ನು ಸಿದ್ದಾಪುರ ಮೃತರ ಜಮೀನಿನಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ.


