ಚಿತ್ರದುರ್ಗ. ಮಾ.06: ಜಿಲ್ಲಾ ಪೊಲೀಸ್ ಮತ್ತು ಎಸ್‍ಬಿಐ ಬ್ಯಾಂಕ್ ಅವರ ಸಹಯೋಗದಲ್ಲಿ “ನಮ್ಮ ಪೊಲೀಸ್ ನಮ್ಮ ಹೆಮ್ಮೆ” Fitness for all” & “Drugs Free Karnataka” ಎಂಬ ಘೋಷವಾಕ್ಯಗಳೊಂದಿಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಇದೇ ಮಾರ್ಚ್ 09ರಂದು ಬೆಳಿಗ್ಗೆ 7ಕ್ಕೆ ಚಿತ್ರದುರ್ಗ ನಗರದ ಡಿಎಆರ್ ಪರೇಡ್ ಮೈದಾನದಿಂದ ಸಾರ್ವಜನಿಕರಿಗೆ 5 & 10 ಕಿಲೋಮೀಟರ್‍ಗಳ ಮ್ಯಾರಥಾನ್ ಓಟ ಆಯೋಜಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು ತಿಳಿಸಿದ್ದಾರೆ.
ಈ ಮ್ಯಾರಥಾನ್ ಚಿತ್ರದುರ್ಗ ನಗರದ ಡಿ.ಎ.ಆರ್ ಪರೇಡ್ ಮೈದಾನದಿಂದ ಪ್ರಾರಂಭವಾಗಿ ನಗರದ ಪ್ರಮುಖ ರಸ್ತೆಗಳಲ್ಲಿ 5 ಕಿ.ಮೀ ಮತ್ತು 10ಕಿ.ಮೀ ಗಳ ಅಂತರ ಕ್ರಮಿಸಿದ ನಂತರ ಡಿ.ಎ.ಆರ್ ಪರೇಡ್ ಮೈದಾನದಲ್ಲಿಯೇ ಮುಕ್ತಾಯವಾಗಲಿದ್ದು, ಈ ಮ್ಯಾರಥಾನ್‍ನಲ್ಲಿ ವಿಜೇತರಾದವರಿಗೆ ಬಹುಮಾನ ನೀಡಲಾಗುವುದು.
ಮ್ಯಾರಥಾನ್‍ನಲ್ಲಿ ಪಾಲ್ಗೊಂಡ ಪ್ರತಿಯೊಬ್ಬರಿಗೂ ಸಹ ಪೊಲೀಸ್ ಇಲಾಖೆಯಿಂದ ಟೀ-ಶರ್ಟ್ ನೀಡಲಾಗುವುದು ಹಾಗೂ ಲಘು ಉಪಹಾರದ ವ್ಯವಸ್ಥೆ ಮಾಡಲಾಗಿರುತ್ತದೆ.
ಜಿಲ್ಲೆಯ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಈ ಮ್ಯಾರಥಾನ್‍ನಲ್ಲಿ ಪಾಲ್ಗೊಳ್ಳುವುದರ ಮೂಲಕ “Fitness for all” & “Drugs Free Karnataka” ಎಂಬ ಘೋಷಣೆಗಳೊಂದಿಗೆ ಪೊಲೀಸ್ ಇಲಾಖೆಯೊಂದಿಗೆ ಕೈಜೋಡಿಸಿ ಸ್ವಾಸ್ಥ್ಯ ಸಮಾಜದ ನಿರ್ಮಾಣಕ್ಕೆ ಸಹಕರಿಸಬೇಕಾಗಿ ಕೋರಿದೆ. ಮ್ಯಾರಥಾನ್‍ನಲ್ಲಿ ಪಾಲ್ಗೊಳ್ಳುವವರು ಕ್ಯೂಆರ್ ಕೋಡ್‍ನ್ನು ಸ್ಕ್ಯಾನ್ ಮಾಡುವ ಮೂಲಕ ಆನ್‍ಲೈನ್ ರಿಜಿಸ್ಟರ್ ಮಾಡಿಕೊಳ್ಳಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.


















