Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಸಿಎಂ ಸಿದ್ದರಾಮಯ್ಯ ಈ ಬಾರಿಯ ಬಜೆಟ್ ನಲ್ಲಿ ಯಾವ ಕ್ಷೇತ್ರಕ್ಕೆ ಏನು ಕೊಟ್ರು..?

---Advertisement---

ಬೆಂಗಳೂರು; 2025-26ನೇ ಸಾಲಿನ ಬಜೆಟ್ ಅನ್ನು ಸಿಎಂ ಸಿದ್ದರಾಮಯ್ಯ ಇಂದು‌ ಮಂಡನೆ ಮಾಡಿದ್ದಾರೆ. ಇಂದು 4 ಲಕ್ಷದ 9 ಸಾವಿರದ 549 ಕೋಟಿ ಗಾತ್ರದ ಬಜೆಟ್ ಅನ್ನ ಮಂಡಿಸುತ್ತಿದ್ದಾರೆ. ಹಲವಾರು ಯೋಜನೆಗಳಿಗೆ ಕೋಟ್ಯಾಂತರ ರೂಪಾಯಿ ಅನುದಾನ ನೀಡಿದ್ದಾರೆ. ಹಾಗಾದ್ರೆ ಯಾವ್ಯಾವ ಇಲಾಖೆಗೆ ಎಷ್ಟು ಕೋಟಿ ಕೊಟ್ಟಿದ್ದಾರೆಂಬ ಮಾಹಿತಿ ಇಲ್ಲಿದೆ.

* ಪಶು ಸಂಗೋಪನೆ ಹಾಗೂ ಮೀನುಗಾರಿಕೆ ಇಲಾಖೆಗೆ 3,977 ಕೋಟಿ

* ಕೃಷಿ ಮತ್ತು ತೋಟಗಾರಿಕೆ ಇಲಾಖೆಗೆ 7,145 ಕೋಟಿ

* ಆಹಾರ ನಾಗರಿಕ ಸರಬರಾಜು ಇಲಾಖೆಗೆ 8,275 ಕೋಟಿ

* ಸಮಾಜ ಕಲ್ಯಾಣ ಇಲಾಖೆಗೆ 11,841 ಕೋಟಿ

* ಕಂದಾಯ ಇಲಾಖೆಗೆ 17,201 ಕೋಟಿ

* ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ 17,475 ಕೋಟಿ

* ಶಿಕ್ಷಣ ಇಲಾಖೆಗೆ 45,286 ಕೋಟಿ

* ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ 34,955 ಕೋಟಿ

* ಇಂಧನ ಇಲಾಖೆಗೆ 26,896 ಕೋಟಿ

* ನೀರಾವರಿ ಇಲಾಖೆಗೆ 22,181 ಕೋಟಿ

* ಗ್ರಾಮೀಣಾಭಿವೃದ್ಧಿ ಇಲಾಖೆಗೆ 26,735 ಕೋಟಿ

* ನಗರಾಭಿವೃದ್ಧಿ ಹಾಗೂ ವಸತಿ ಇಲಾಖೆಗೆ 21,405 ಕೋಟಿ

* ಒಳಾಡಳಿತ ಮತ್ತು ಸಾರಿಗೆ ಇಲಾಖೆಗೆ 20,265 ಕೋಟಿ

* ಲೋಕೋಪಯೋಗಿ ಇಲಾಖೆಗೆ 11,841 ಕೋಟಿಯನ್ನು ನೀಡಲಾಗಿದೆ.

ಸಿಎಂ ಸಿದ್ದರಾಮಯ್ಯ ಅವರು ಈ ಬಾರಿ ದಾಖಲೆ‌ಮಟ್ಟದ ಬಜೆಟ್ ಅನ್ನ ಮಂಡನೆ ಮಾಡುತ್ತಿದ್ದಾರೆ. ಇದು ಸಿದ್ದರಾಮಯ್ಯ ಅವರಿಗೆ 16ನೇ ಬಜೆಟ್ ಕೂಡ. ಎಲ್ಲಾ ಕ್ಷೇತ್ರಗಳಿಗೂ ಸಮಾಧಾನವಾಗುವಂತ ಬಜೆಟ್ ಕೊಡುವ ಪ್ರಯತ್ನ ಮಾಡುತ್ತಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...