Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಮಹಿಳಾ ಸಬಲೀಕರಣಕ್ಕೆ ಒತ್ತು ; ಅಕ್ಕ ಕ್ಯಾಂಟೀನ್, ಅಕ್ಕ ಸಹಕಾರಿ ಸಂಘ ಸ್ಥಾಪನೆ

---Advertisement---

ಬೆಂಗಳೂರು; ಇಂದು ಸಿಎಂ ಸಿದ್ದರಾಮಯ್ಯ ಅವರು ಇಂದು ರಾಜ್ಯ ಬಜೆಟ್ ಮಂಡನೆ ಮಾಡಿದ್ದು, ಈ ಬಜೆಟ್ ನಲ್ಲಿ ಮಹಿಳಾ ಸಬಲೀಕರಣಕ್ಕೆ ಹೆಚ್ಚು ಒತ್ತು ನೀಡಲಾಗಿದೆ. ಅಕ್ಕ ಕ್ಯಾಂಟೀನ್, ಅಕ್ಕ ಸಹಕಾರಿ ಸಂಘಗಳಿಗೆ ಒತ್ತು ನೀಡಲಾಗಿದೆ. ಈಗಾಗಲೇ ಗ್ಯಾರಂಟಿ ಯೋಜನೆಗಳಲ್ಲಿ ಗೃಹಲಕ್ಷ್ಮೀ ಯೋಜನೆ ನೀಡಿದೆ

ಆ ಯೋಜನೆಗೆ 2025-26ನೇ ಸಾಲಿನಲ್ಲಿ ಗೃಹಲಕ್ಷ್ಮೀ ಯೋಜನೆಗೆ 28,608 ಕೋಟಿ ರೂಪಾಯಿ ಮೀಸಲಿಡಲಾಗಿದೆ.

ಮಹಿಳಾ ಸಬಲೀಕರಣಕ್ಕಾಗಿಯೇ ಇನ್ನು ಹಲವು ಯೋಜನೆಗಳನ್ನ ನೀಡಲಾಗಿದೆ. ಅದರಲ್ಲಿ ಅಕ್ಕ ಕೋ ಆಪರೇಟಿವ್ ಸಿಸೈಟಿ, ಅಕ್ಕ ಕ್ಯಾಂಟಿನ್ ಸ್ಥಾಪಿಸಲಾಗುವುದು ಎಂದು ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ. ರಾಜ್ಯಾದ್ಯಂತ ಜಿಲ್ಲಾ ಪಂಚಾಯತ್ ಹಾಗೂ ತಾಲೂಕು ಪಂಚಾಯತ್ ಕಚೇರಿಗಳಲ್ಲಿ ಅಕ್ಕ ಕೆಫೆ ಕ್ಯಾಂಟಿನ್ ಗಳನ್ನ ತೆರೆಯಲಾಗುವುದು ಎಂದು ತಿಳಿಸಿದ್ದಾರೆ.

ರಾಜ್ಯವ್ಯಾಪಿ ಅಕ್ಕ ಕ್ಯಾಂಟಿನ್ ಗಳನ್ನು ಸ್ಥಾಪಿಅಉವ ಯೋಜನೆ ಹಾಕಿಕೊಂಡಿದ್ದಾರೆ. ರಾಜ್ಯ ಸರ್ಕಾರದ 2025-26ನೇ ಸಾಲಿನ ಬಜೆಟ್​ನ ಗಾತ್ರ 4 ಲಕ್ಷ ಕೋಟಿ ರೂಗಿಂತ ತುಸು ಹೆಚ್ಚಿನದ್ದಾಗಿದೆ. 2024-25ರ ಬಜೆಟ್ 3,71,383 ಕೋಟಿ ರೂ ಗಾತ್ರದ್ದಾಗಿತ್ತು. ಈ ಬಾರಿ ಅದು 4,09,549 ಕೋಟಿ ರೂನಷ್ಟಿದೆ. ಕಳೆದ ಬಾರಿಗಿಂತ ಈ ಬಾರಿಯ ಬಜೆಟ್ ಗಾತ್ರ 38,166 ಕೋಟಿ ರೂನಷ್ಟು ಹೆಚ್ಚಳವಾಗಿದೆ. ಗೃಹಲಕ್ಷ್ಮೀ ಯೋಜನೆಗೆ 28,608 ಕೋಟಿ ರೂ ಮೀಸಲಿರಿಸಲಾಗಿದೆ. ಗೃಹಜ್ಯೋತಿ ಯೋಜನೆಗೆ 10,100 ಕೋಟಿ ರೂ ನೀಡಲಾಗುತ್ತಿದೆ. ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಇವೆರಡು ಯೋಜನೆಗಳು ಮುಖ್ಯವಾಗಿದ್ದು ಹೆಚ್ಚಿನ ಅನುದಾನ ಬೇಡುತ್ತವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...