Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಆರೋಗ್ಯ ಕ್ಷೇತ್ರಕ್ಕೆ ಸಿಕ್ಕಿದ್ದೇನು..? ಇಲ್ಲಿದೆ ಹೈಲೇಟ್ಸ್ ಪಾಯಿಂಟ್

---Advertisement---

ಬೆಂಗಳೂರು; ಸಿಎಂ ಸಿದ್ದರಾಮಯ್ಯ ಅವರ ಇಂದಿ ಬಜೆಟ್ ನಲ್ಲಿ ಆರೋಗ್ಯ ಕ್ಷೇತ್ರಕ್ಕೆ ಹಲವು ಯೋಜನೆಗಳನ್ನ ಘೋಷಿಸಿದ್ದಾರೆ.

* ರಾಜ್ಯದಲ್ಲಿ ತಡೆಗಟ್ಟಬಹುದಾದ ತಾಯಿ ಮರಣ ಪ್ರಮಾಣವನ್ನು ಶೂನ್ಯಕ್ಕೆ ಇಳಿಸಲು ಅಭಿಯಾನ ರೂಪದಲ್ಲಿ ಕ್ರಮ. ಅದಕ್ಕಾಗಿ 320 ಕೋಟಿ ರೂ. ಅನುದಾನ.

* ರಾಜ್ಯದಲ್ಲಿ 50 ಹಾಸಿಗೆ ಸಾಮರ್ಥ್ಯದ 14 Critical Care Block ಹಾಗೂ ಬೆಂಗಳೂರು ನಗರದಲ್ಲಿ 100 ಹಾಸಿಗೆ ಸಾಮರ್ಥ್ಯದ ಒಂದು Critical Care Block ಕಟ್ಟಡವನ್ನು ನಿರ್ಮಾಣ.

* ಅಥಣಿ, ಹುನಗುಂದ ಮತ್ತು ಮುಧೋಳದಲ್ಲಿ 50 ಹಾಸಿಗೆ ಸಾಮರ್ಥ್ಯದ ತಾಯಿ ಮತ್ತು ಮಕ್ಕಳ ಆಸ್ಪತ್ರೆಗಳನ್ನು ಸ್ಥಾಪನೆ ಮಾಡಲು ಅನುಮೋದನೆ ನೀಡಲಾಗಿದೆ.

* ಆಶಾಕಿರಣ ರಾಷ್ಟ್ರೀಯ ಅಂಧತ್ವ ನಿವಾರಣಾ ಕಾರ್ಯಕ್ರಮದಡಿ 1.4 ಕೋಟಿ ಜನರಿಗೆ ಕಣ್ಣಿನ ತಪಾಸಣೆ; 3.3 ಲಕ್ಷ ಜನರಿಗೆ ಉಚಿತ ಕನ್ನಡಕ ವಿತರಣೆ ಮತ್ತು 93,800 ಜನರಿಗೆ ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆ ಕೈಗೊಳ್ಳಲಾಗಿದೆ.

* ನರವೈಜ್ಞಾನಿಕ ಖಾಯಿಲೆಗಳಿಗೆ ಕರ್ನಾಟಕ ಮೆದುಳು ಆರೋಗ್ಯ ಉಪಕ್ರಮದಡಿ (KaBHI) ನಿಮ್ಹಾನ್ಸ್‌ ಸಹಯೋಗದೊಂದಿಗೆ ಒಟ್ಟು 2.61 ಲಕ್ಷ ತಪಾಸಣೆ ಮಾಡಿ  32,630 ನರರೋಗಿಗಳಿಗೆ ಚಿಕಿತ್ಸೆ ನೀಡಲಾಗಿದೆ. ಈ ಯೋಜನೆಯನ್ನು ಈ ವರ್ಷ ಎಲ್ಲಾ ಹಂತದ ಆರೋಗ್ಯ ಕೇಂದ್ರಗಳಿಗೆ ವಿಸ್ತರಿಸಲು 20 ಕೋಟಿ ರೂ. ಒದಗಿಸಲಾಗಿದೆ. ಅಲ್ಲದೇ, ಮಾನಸಿಕ ಅಸ್ವಸ್ಥರ ಆರೈಕೆಗೆ ಜಿಲ್ಲಾ ಮಟ್ಟದ ಆಸ್ಪತ್ರೆಗಳಲ್ಲಿ ಸರ್ಕಾರೇತರ ಸಂಸ್ಥೆಗಳ ಸಹಯೋಗದೊಂದಿಗೆ ಆರೈಕೆ ಕೇಂದ್ರಗಳ ಸ್ಥಾಪನೆ

* 2025-26 ನೇ ಸಾಲಿನಲ್ಲಿ ಈ ಕೆಳಗಿನಂತೆ ಆರೋಗ್ಯ ಮೂಲ ಸೌಕರ್ಯ ಅಭಿವೃದ್ಧಿ ಕಾರ್ಯ ಯೋಜನೆಗಳ ಅನುಷ್ಠಾನ

* ಬೆಂಗಳೂರು ಉತ್ತರ ತಾಲ್ಲೂಕಿನ ವ್ಯಾಪ್ತಿಯಲ್ಲಿ 200 ಹಾಸಿಗೆಯ ಅತ್ಯಾಧುನಿಕ ಮತ್ತು ಸುಸಜ್ಜಿತ ಆಸ್ಪತ್ರೆಯನ್ನು 150 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣ

* ಮಾಲೂರು, ಮಾಗಡಿ, ಕುಶಾಲನಗರ, ಕೊರಟಗೆರೆ, ಜಗಳೂರು, ಸವಣೂರು, ರಾಮದುರ್ಗ ಮತ್ತು ಸವದತ್ತಿ ತಾಲ್ಲೂಕು ಮಟ್ಟದ ಆಸ್ಪತ್ರೆಗಳನ್ನು ಹಾಗೂ ದಾವಣಗೆರೆ ಜಿಲ್ಲಾ ಆಸ್ಪತ್ರೆ ಮತ್ತು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗಳನ್ನು ಒಟ್ಟು 650 ಕೋಟಿ ರೂ. ವೆಚ್ಚದಲ್ಲಿ ನವೀಕರಣ ಮಾಡಲಾಗುವುದು.

* ಪುತ್ತೂರಿನಲ್ಲಿ ಹೊಸ ವೈದ್ಯಕೀಯ ಕಾಲೇಜನ್ನು ಸ್ಥಾಪಿಸಲು ಉದ್ದೇಶಿಸಲಾಗಿದೆ. ಇದಕ್ಕಾಗಿ ಈಗಿರುವ 100 ಹಾಸಿಗೆ ಸಾಮರ್ಥ್ಯದ ತಾಲ್ಲೂಕು ಆಸ್ಪತ್ರೆಯನ್ನು ಉನ್ನತೀಕರಿಸಲು ಪ್ರಸಕ್ತ ವರ್ಷದಲ್ಲಿ ಕ್ರಮವಹಿಸಲಾಗುವುದು.

* ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರಿನಲ್ಲಿ 200 ಹಾಸಿಗೆ ಹಾಗೂ ಕೊಡಗು ಜಿಲ್ಲೆಯ ವಿರಾಜಪೇಟೆಯಲ್ಲಿ 400 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆಗಳನ್ನು ಸ್ಥಾಪನೆ.

* 20 ತಾಲ್ಲೂಕುಗಳಲ್ಲಿ 9 ಕೋಟಿ ರೂ. ವೆಚ್ಚದಲ್ಲಿ 14 ವರ್ಷದ ಹೆಣ್ಣುಮಕ್ಕಳಿಗೆ HPV ಲಸಿಕೆಯನ್ನು ನೀಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment