Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಅಮಿತ್ ಶಾ ಭೇಟಿ ; ಜನಾರ್ದನ ರೆಡ್ಡಿಗೆ ಅವಕಾಶ.. ಶ್ರೀರಾಮುಲುಗೆ ಮಿಸ್ ; ಬಳ್ಳಾರಿಯಲ್ಲಿ ಬಾರೀ ಚರ್ಚೆ

---Advertisement---

ಬೆಂಗಳೂರು; ಬಳ್ಳಾರಿ ರಾಜಕಾರಣದಲ್ಲಿ ಆಗಾಗ ಶ್ರೀರಾಮುಲು ವರ್ಸಸ್ ಜನಾರ್ದನ ರೆಡ್ಡಿ ಎಂಬುದು ಚರ್ಚೆಯಾಗುತ್ತಲೇ ಇರುತ್ತದೆ. ಇದೀಗ ಅಮಿತ್ ವಿಚಾರಕ್ಕೆ ಬಳ್ಳಾರಿ ರಾಜಕಾರಣದಲ್ಲಿ ಚರ್ಚೆ ಜೋರಾಗಿದೆ. ಯಾಕಂದ್ರೆ ಕೇಂದ್ರ ಸಚಿವ ಅಮಿತ್ ಶಾ, ಜನಾರ್ದನ ರೆಡ್ಡಿಗೆ ಭೇಟಿಗೆ ಅವಕಾಶ ನೀಡಿದ್ದು, ಶ್ರೀರಾಮುಲುಗೆ ನೀಡಿಲ್ಲದೆ ಇರುವುದು ಶಾಕಿಂಗ್ ವಿಚಾರವಾಗಿದೆ.

ಸಹೋದರರಂತೆ ಇದ್ದ ರಾಮುಲು ಹಾಗೂ ರೆಡ್ಡಿ ನಡುವೆ ಎಲ್ಲವೂ ಸರಿ ಇಲ್ಲ ಅನ್ನೋದನ್ನ ಬಿಡಿಸಿ ಹೇಳಬೇಕಿಲ್ಲ. ಆದ್ರೆ ರಾಜ್ಯ ನಾಯಕರ ಮುನಿಸಿನ ಬಗ್ಗೆ ಮಾತನಾಡುವುದಕ್ಕೇನೆ ಶ್ರೀರಾಮುಲು ಅವರು ಅಮಿತ್ ಶಾ ಅವರನ್ನು ಭೇಟಿ ಮಾಡಲು ಹೋಗಿದ್ದರು. ಆದರೆ ಅವರ ಭೇಟಿ ಸಾಧ್ಯವಾಗಿಲ್ಲ. ರಾಮುಲು ಹಾಗೂ ರೆಡ್ಡಿ ಸಾರ್ವಜನಿಕವಾಗಿ ಕಿತ್ತಾಡಿದ್ದನ್ನು ಕಂಡು ಹೈಕಮಾಂಡ್ ನಾಯಕರೇ ಶ್ರೀರಾಮುಲು ಅವರಿಗೆ ದೆಹಲಿಗೆ ಬರುವಂತೆ ಅವಕಾಶ ನೀಡಿದ್ದರು. ಆದರೆ ಸದ್ಯಕ್ಕೆ ಬರುವುದು ಬೇಡ ಅಂತಾನೂ ಹೇಳಿದ್ದರು. ಸರಿ ಅಂತ ಸುಮ್ಮನಾಗಿದ್ದ ರಾಮುಲು, ಅಮಿತ್ ಶಾ ಬೆಂಗಳೂರಿಗೆ ಬಂದ ಮೇಲೆ ಇಲ್ಲಿಯೇ ಭೇಟಿ ಮಾಡೋಣಾ‌ ಅಂತ ಸುಮ್ಮನಾಗಿದ್ದರು.

ಆದರೆ ರೆಡ್ಡಿಗಿಂತ ಮೊದಲೇ ಅಮಿತ್ ಶಾ ಅವರನ್ನ ಭೇಟಿ ಮಾಡುವ ಅವಕಾಶ ಜನಾರ್ದನ ರೆಡ್ಡಿ ಅವರಿಗೆ ಸಿಕ್ಕಿದೆ. ಗಂಗಾವತಿ ಶಾಸಕರಾಗಿರುವ ಜನಾರ್ದನ ರೆಡ್ಡಿ, ಕರ್ನಾಟಕ ಬಿಜೆಪಿ ಸಹ ಉಸ್ತುವಾಗಿಯಾಗಿರುವ ಸುಧಾಕರ್ ರೆಡ್ಡಿ ಜೊತೆಗೆ ಹೋಗಿ ಅಮಿತ್ ಶಾ ಅವರನ್ನ ಭೇಟಿಯಾಗಿದ್ದಾರೆ. ಶುಕ್ರವಾರ ಬೆಂಗಳೂರಿಗೆ ಆಗಮಿಸಿದ್ದ ಅಮಿತ್ ಶಾ, ಮಾರತ್ತ​​ಹಳ್ಳಿಯಲ್ಲಿ ನಡೆಯಲಿರುವ ‘‘ವಿಶ್ವೇಶತೀರ್ಥ ಸ್ಮಾರಕ ಆಸ್ಪತ್ರೆ’’ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಮಾಜಿ ಸಿಎಂ ಬಿಎಸ್​ ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ‌, ಮಾಜಿ ಸಚಿವ ಅರವಿಂದ ಲಿಂಬಾವಳಿ ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡಿದ್ದರು. ಅಮಿತ್ ಶಾ ಭೇಟಿ ವೇಳೆ ರಾಜ್ಯ ರಾಜಕೀಯ ನಾಯಕರ ಭೇಟಿ, ಚರ್ಚೆ ನಿಗದಿಯಾಗಿರಲಿಲ್ಲ. ಆದಾಗ್ಯೂ ರಾಮುಲು ಭೇಟಿಗೆ ಅವಕಾಶ ದೊರೆಯದೆ, ರೆಡ್ಡಿ ಜತೆ ಶಾ ಮಾತುಕತೆ ನಡೆಸಿದ್ದು ಕುತೂಹಲ ಹೆಚ್ಚಿಸಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment