ಸುದ್ದಿಒನ್ ನ್ಯೂಸ್ ಡೆಸ್ಕ್
ನವದೆಹಲಿ, (ಡಿ.08) : ಚೀಫ್ ಆಫ್ ಡಿಫೆನ್ಸ್ ಸ್ಟಾಫ್ ಜನರಲ್ ಬಿಪಿನ್ ರಾವತ್ ಅವರಿದ್ದ ಭಾರತೀಯ ವಾಯುಪಡೆಯ ಹೆಲಿಕಾಪ್ಟರ್ ತಮಿಳುನಾಡಿನ ಕುನೂರ್ ಬಳಿ ಗುಡ್ಡಗಾಡು ಪ್ರದೇಶದಲ್ಲಿ ನೀಲಗಿರಿ ಜಿಲ್ಲೆಯ ಕೂನೂರು ಬಳಿಯ ಕಟ್ಟೇರಿ-ನಂಚಪ್ಪಂಚತ್ರಂ ಪ್ರದೇಶದಲ್ಲಿ ಹೆಲಿಕಾಪ್ಟರ್ ಬುಧವಾರ ಪತನಗೊಂಡಿದೆ.
ಅಪಘಾತದಲ್ಲಿ 14 ಮಂದಿ ಪೈಕಿ 13 ಮಂದಿ ಸಾವನ್ನಪ್ಪಿದ್ದಾರೆ. ಜನರಲ್ ರಾವತ್ ಪ್ರಸ್ತುತ ವೆಲ್ಲಿಂಗ್ಟನ್‌ನ ಸೇನಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಶೇಕಡಾ 90 ರಷ್ಟು ಸುಟ್ಟಿರುವ ಬಿಪಿನ್ ರಾವತ್ ಅವರಿಗೆ ಮೂವರು ವೈದ್ಯರು ತುರ್ತಾಗಿ ಚಿಕಿತ್ಸೆ ನೀಡುತ್ತಿದ್ದಾರೆ. ಸೇನಾ ಅಧಿಕಾರಿಗಳು ಚಿಕಿತ್ಸೆಯ ವಿವರಗಳನ್ನು ಗೌಪ್ಯವಾಗಿಟ್ಟಿದ್ದಾರೆ. ಅಪಘಾತದಲ್ಲಿ ಪತ್ನಿ ಮಧುಲಿಕಾ ಸೇರಿದಂತೆ 13 ಮಂದಿ ಸಾವನ್ನಪ್ಪಿದ್ದಾರೆ. ಮೃತದೇಹಗಳು ಗುರುತು ಸಿಗದ ಸ್ಥಿತಿಯಲ್ಲಿರುವುದರಿಂದ ಡಿಎನ್‌ಎ ಪರೀಕ್ಷೆ ಮೂಲಕ ಗುರುತಿಸಲಾಗುವುದು.
ಪಿಟಿಐ ವರದಿಯ ಪ್ರಕಾರ, ಭಾರೀ ಮಂಜಿನ ಕಾರಣ ಹವಾಮಾನ ವೈಪರೀತ್ಯಗಳಿಂದ ಹೆಲಿಕಾಪ್ಟರ್ ಅರಣ್ಯ ಪ್ರದೇಶದಲ್ಲಿ ಪತನಗೊಂಡಿದೆ ಎಂದು ವರದಿಯಾಗಿದೆ.
ಕೆಲವು ಹಿರಿಯ ಅಧಿಕಾರಿಗಳನ್ನು ಹೊತ್ತ ಹೆಲಿಕಾಪ್ಟರ್ ಕೊಯಮತ್ತೂರಿನ ಸೂಲೂರಿನಿಂದ ವೆಲ್ಲಿಂಗ್‌ಟನ್‌ನ ಡಿಫೆನ್ಸ್ ಸ್ಟಾಫ್ ಕಾಲೇಜಿಗೆ ತೆರಳುತ್ತಿತ್ತು, ಅಲ್ಲಿ ಜನರಲ್ ರಾವತ್, ಸೇನಾ ಮುಖ್ಯಸ್ಥ ಎಂಎಂ ನರವಾಣೆ ಅವರೊಂದಿಗೆ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ನಿರ್ಧರಿಸಲಾಗಿತ್ತು. ಅಪಘಾತದ ಕುರಿತು ನ್ಯಾಯಾಲಯದ ವಿಚಾರಣೆಗೆ ಆದೇಶಿಸಲಾಗಿದೆ ಎಂದು ಐಎಎಫ್ ಹೇಳಿದೆ.