ಬೆಂಗಳೂರು; ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಮತ್ತೆ ಅನಾರೋಗ್ಯ ಕಾಡುತ್ತಿದೆ. ಈ ಹಿನ್ನೆಲೆಯಲ್ಲಿ ಇಂದಿನ ಎಲ್ಲಾ ಪ್ರಯಾಣದ ಪ್ಲ್ಯಾನ್ ಗಳನ್ನು ರದ್ದು ಮಾಡಿದ್ದಾರೆ. ಇಂದಿನ ಸಂಸತ್ ಅಧಿವೇಶನದಲ್ಲೂ ಭಾಗಿಯಾಗಬೇಕಿತ್ತು. ಆದರೆ ಅನಾರೋಗ್ಯದ ಹಿನ್ನೆಲೆ ಎಲ್ಲಾ ಕಾರ್ಯಕ್ರಮಗಳನ್ನು ರದ್ದು ಮಾಡಿಕೊಂಡಿದ್ದಾರೆ. ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ತೀವ್ರ ಕಫ ಹಾಗೀ ಕೆಮ್ಮು ಹೆಚ್ಚಾಗಿದೆ. ಹೀಗಾಗಿ ಆಸ್ಪತ್ರೆಗೆ ಚಿಕಿತ್ಸೆಗೆಂದು ದಾಖಲಾಗಿದ್ದಾರೆ.

ಕಳೆದ ಮೂರ್ನಾಲ್ಕು ದಿನದಿಂದ ತುಮಕೂರು ರಸ್ತೆಯಲ್ಲಿರುವ ಜಿಂದಾಲ್ ಪ್ರಕೃತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ತೀವ್ರ ಕಫ ಹಾಗೂ ಕೆಮ್ಮಿನಿಂದ ಬಳಲುತ್ತಿದ್ದರು. ಸದ್ಯ ಚಿಕಿತ್ಸೆಯ ಬಳಿಕ ಅವರ ಆರೋಗ್ಯದಲ್ಲಿ ಸ್ವಲ್ಪ ಸುಧಾರಣೆಯಾಗಿದೆ ಎಂದೇ ಹೇಳಲಾಗುತ್ತಿದೆ. ಕಫ, ಕೆಮ್ಮು ವಿಚಾರಕ್ಕೆ ಕುಮಾರಸ್ವಾಮಿ ಅವರು ಚೆನ್ನೈಗೆ ತೆರಳಿ ಚಿಕಿತ್ಸೆಯನ್ನ ಪಡೆದುಕೊಂಡಿದ್ದರು. ಆದರೆ ಅಲ್ಲಿ ಅಷ್ಟಾಗಿ ಆರೋಗ್ಯ ಸುಧಾರಣೆಯಾಗಿಲ್ಲ. ಜೊತೆಗೆ ಕಫ, ಕೆಮ್ಮು ಕೂಡ ಕಡಿಮೆಯಾಗಿಲ್ಲ. ಹೀಗಾಗಿ ಜಿಂದಾಲ್ ನ ಪ್ರಕೃತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.

ಮಹಿಳಾ ದಿನಾಚರಣೆಯ ಕಾರ್ಯಕ್ರಮಕ್ಕೂ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಗೈರಾಗಿದ್ದರು. ಹಾಗೇ ಇಂದು ದೆಹಲಿಗೆ ಪ್ರಯಾಣ ಬೆಳೆಸುವುದಕ್ಕೆ ಕಾರ್ಯಕ್ರಮ ಸಿದ್ಧವಾಗಿತ್ತು. ಆದರೆ ಪ್ರಯಾಣವನ್ನು ರದ್ದು ಮಾಡಿಕೊಂಡಿದ್ದರು. ಈಗ ಕೊಂಚ ಆರೋಗ್ಯದಲ್ಲಿ ಸುಧಾರಣೆ ಕಂಡಿರೊ ಕಾರಣ ನಾಳೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಮತ್ತೆ ದೆಹಲಿಗೆ ಹೋಗುವ ಸಾಧ್ಯತೆ ಇದೆ. ಇನ್ನು ಕೇಂದ್ರ ಸಚುವರಾದ ಮೇಲೆ ಹೆಚ್.ಡಿ.ಕುಮಾರಸ್ವಾಮಿ ಅವರು ಸಿಕ್ಕಾಪಟ್ಟೆ ಓಡಾಟ ನಡೆಸಿದ್ದರು. ರಾಜ್ಯದ ಎಲ್ಲಾ ಜಿಲ್ಲೆಗಳಿಗೂ ಪ್ರತ್ಯೇಕ ಭೇಟಿ ನೀಡಿ ಜನರ ಸಮಸ್ಯೆಗಳ ಬಗ್ಗೆ ಕೇಳುತ್ತಿದ್ದರು. ವಿಶ್ರಾಂತಿಯೇ ಪಡೆಯದೆ ಓಡಾಡುತ್ತಿದ್ದದ್ದು ಅವರ ಅನಾರೋಗ್ಯಕ್ಕೆ ಕಾರಣವಾಗಿತ್ತು.

