Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಶಿಕ್ಷಣದಿಂದ ಮಾತ್ರ ಹೆಣ್ಣಿನ ಸಬಲೀಕರಣ ಸಾಧ್ಯ : ಡಾ.ಕೆ.ಸೌಮ್ಯ ಮಂಜುನಾಥ್

---Advertisement---

 

ವರದಿ ಮತ್ತು ಫೋಟೋ ಕೃಪೆ
ಕೆ.ಎಂ. ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 11 : ನೆಹರು ಯುವ ಕೇಂದ್ರ, ರಂಗ ಭಂಡಾರ ಕಲಾ ಸಂಘದ ಸಹಯೋಗದೊಂದಿಗೆ ಮೆಟ್ರಿಕ್ ಬಾಲಕಿಯರ ವಿದ್ಯಾರ್ಥಿ ನಿಲಯದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ನಡೆಯಿತು.

ಸಂಜೀವಿನಿ ಜೀವ ರಕ್ಷಕ ಟ್ರಸ್ಟ್ ರಾಜ್ಯ ಪ್ರಧಾನ ಕಾರ್ಯದರ್ಶಿ ಡಾ.ಕೆ.ಸೌಮ್ಯ ಮಂಜುನಾಥ್ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಉದ್ಗಾಟಿಸಿ ಮಾತನಾಡುತ್ತ ಶಿಕ್ಷಣದಿಂದ ಮಾತ್ರ ಹೆಣ್ಣಿನ ಸಬಲೀಕರಣ ಸಾಧ್ಯ. ನಿರಂತರವಾಗಿ ಹೆಣ್ಣಿನ ಮೇಲೆ ಶೋಷಣೆ, ದೌರ್ಜನ್ಯ, ದಬ್ಬಾಳಿಕೆ, ಅತ್ಯಾಚಾರ ನಡೆಯುತ್ತಿದೆ. ಇವೆಲ್ಲವನ್ನು ಧೈರ್ಯದಿಂದ ಎದುರಿಸಿ

ಸ್ವಾವಲಂಭಿಯಾಗಿ ಬದುಕಬೇಕಾದರೆ ಶಿಕ್ಷಣವಂತಳಾಗಿ ಕಾನೂನು ಅರಿವು ಮೂಡಿಸಿಕೊಳ್ಳುವಂತೆ ತಿಳಿಸಿದರು.
ಬಡಾವಣೆ ಪೊಲೀಸ್ ಠಾಣೆ ಸಬ್‍ಇನ್ಸ್‍ಪೆಕ್ಟರ್ ಜಿ.ಯಶೋಧ, ಎಸ್.ಜೆ.ಎಂ.ಕಾನೂನು ಕಾಲೇಜಿನ ಸಹಾಯಕ ಪ್ರಾಧ್ಯಾಪಕಿ ಸುಮನ ಎಸ್.ಅಂಗಡಿ, ನ್ಯಾಯವಾದಿ ಸೌಮ್ಯ ಸುಮ ರಾಜಶೇಖರ್, ಸಂಜೀವಿನಿ ಜೀವ ರಕ್ಷಕ ಟ್ರಸ್ಟ್ ರಾಜ್ಯ ಸಂಘಟನಾ ಕಾರ್ಯದರ್ಶಿ ಶಶಿಧರ ಸಿ. ರಂಗ ಭಂಡಾರ ಕಲಾ ಸಂಘದ ಅಧ್ಯಕ್ಷೆ ಬಿ.ನಿರ್ಮಲ ಈ ಸಂದರ್ಭದಲ್ಲಿ ಹಾಜರಿದ್ದರು.

 

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...