Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಮುಖ್ಯಮಂತ್ರಿ ಸಿದ್ದರಾಮಯ್ಯ ವಿನಾ ಕಾರಣ ಕಾಲಹರಣ ಮಾಡುತ್ತ ದಲಿತರನ್ನು ಯಾಮಾರಿಸುತ್ತಿದ್ದಾರೆ : ಭಾಸ್ಕರ್ ಪ್ರಸಾದ್

---Advertisement---

 

ವರದಿ ಮತ್ತು ಫೋಟೋ ಕೃಪೆ
ಕೆ.ಎಂ. ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 11 :  ಒಳ ಮೀಸಲಾತಿ ಜಾರಿಗಾಗಿ ಒತ್ತಾಯಿಸಿ ಕಳೆದ 5 ರಂದು ಪ್ರೊ.ಬಿ.ಕೃಷ್ಣಪ್ಪ ಸಮಾಧಿಯಿಂದ ಹೊರಟ ಒಳ ಮೀಸಲಾತಿ ಹೋರಾಟ ಸಮಿತಿ  ಪಾದಯಾತ್ರೆ ಸೋಮವಾರ ಚಿತ್ರದುರ್ಗದ ಒನಕೆ ಓಬವ್ವ ವೃತ್ತಕ್ಕೆ ಆಗಮಿಸಿತು.

ಸುಪ್ರೀಂಕೋರ್ಟ್ ತೀರ್ಪಿನಂತೆ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಇಷ್ಟೊತ್ತಿಗಾಗಲೆ ಒಳ ಮೀಸಲಾತಿಯನ್ನು ಜಾರಿಗೊಳಿಸಬೇಕಿತ್ತು. ವಿನಾ ಕಾರಣ ಕಾಲಹರಣ ಮಾಡುತ್ತ ದಲಿತರನ್ನು ಯಾಮಾರಿಸುತ್ತಿದ್ದಾರೆ. ಒಳ ಮೀಸಲಾತಿ ಜಾರಿಯಾಗುವತನಕ ನಮ್ಮ ಹೋರಾಟ ನಿಲ್ಲುವುದಿಲ್ಲ. ಇದೇ ತಿಂಗಳ 22 ರಂದು ನಮ್ಮ ಯಾತ್ರೆ ಬೆಂಗಳೂರು ತಲುಪಲಿದ್ದು, ಒಳ ಮೀಸಲಾತಿ ಅನುಷ್ಠಾನಕ್ಕೆ ತರುವವರೆಗೂ ಹೋರಾಟದಿಂದ ಹಿಂದೆ ಸರಿಯುವುದಿಲ್ಲವೆಂದು ರಾಜ್ಯ ಸರ್ಕಾರಕ್ಕೆ ಅಂತಿಮ ಗಡುವು ನೀಡುತ್ತೇವೆಂದು ಬಿ.ಕೆ.ಭಾಸ್ಕರ್‍ಪ್ರಸಾದ್ ಎಚ್ಚರಿಸಿದರು.

ಬಾಳೆಕಾಯಿ ಶ್ರೀನಿವಾಸ್ ಮಾತನಾಡಿ ದಲಿತ ಸಚಿವ, ಶಾಸಕರುಗಳ ಅಣಕು ಗೊಂಬೆಗಳನ್ನು ತಯಾರಿಸಿ ರಕ್ತದ ಮೂಲಕ ಅಭಿಷೇಕ ಮಾಡಿ ಒಳ ಮೀಸಲಾತಿ ಜಾರಿಗೆ ರಾಜ್ಯ ಸರ್ಕಾರವನ್ನು ಆಗ್ರಹಿಸಲಾಗುವುದು. ಅಧಿಕಾರಕ್ಕಾಗಿ ಅಂಟಿಕೊಂಡಿರುವ ದಲಿತ ಸಚಿವ ಶಾಸಕರುಗಳು ಒಳ ಮೀಸಲಾತಿ ಬಗ್ಗೆ ಧ್ವನಿ ಎತ್ತುತ್ತಿಲ್ಲ. ಹಾಗಾಗಿ ನಮ್ಮ ಹೋರಾಟ ಉಗ್ರವಾಗಿರುತ್ತದೆಂದು ಹೇಳಿದರು.

ಪಾದಯಾತ್ರೆ ಹೊರಟವರಲ್ಲಿ ಕೆಲವರು ರಕ್ತದಾನದ ಮೂಲಕ ಸರ್ಕಾರದ ಗಮನ ಸೆಳೆದರು. ಕುಂಚಿನಗಹಾಳ್ ಮಹಲಿಂಗಪ್ಪ, ಶಿವಣ್ಣ, ದಲಿತ ಮುಖಂಡ ಬಿ.ರಾಜಪ್ಪ, ಲೇಖಕ ಹೆಚ್.ಆನಂದ್‍ಕುಮಾರ್, ಶಿವರಾಜ್, ಪ್ರಭುರಾಜ್ ಕೊಡ್ಲಿ, ಬಿ.ಆರ್.ಸುರೇಶ್ ಇನ್ನು ಅನೇಕರು ಪಾದಯಾತ್ರೆಯಲ್ಲಿದ್ದರು.

 

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...