ಬೆಂಗಳೂರು; ಕಾಂಗ್ರೆಸ್ ಸರ್ಕಾರದಲ್ಲಿ ಸಿಎಂ ಬದಲಾವಣೆಯ ಚರ್ಚೆ ಇಂದು ನಿನ್ನೆಯದಲ್ಲ. ಕಾಂಗ್ರೆಸ್ ಪಾಳಯದಲ್ಲೂ ಈ ಬಗ್ಗೆ ಚರ್ಚೆ ಜೋರಾಗಿದೆ. ಅದರಲ್ಲೂ ಡಿಸಿಎಂ ಡಿಕೆಶಿ ಬಣ ಸಿಎಂ ಸ್ಥಾನವನ್ನ ಡಿಕೆ ಶಿವಕುಮಾರ್ ಅವರಿಗೆ ಬಿಟ್ಟುಕೊಡಲಿ ಎಂದೇ ಹೇಳುತ್ತಾರೆ. ಇದರ ನಡುವೆ ಬಿಜೆಪಿ ನಾಯಕ ಆರ್.ಅಶೋಕ್ ಸಹ ಇಂದು ಸದನದಲ್ಲಿ ಈ ಬಗ್ಗೆ ಪ್ರಶ್ನೆ ಮಾಡಿದ್ದಾರೆ. ಸಿಎಂ ಆಗಿ ನೀವೇ ಇರುತ್ತೀರಾ ಎಂದು ಪ್ರಶ್ನೆ ಮಾಡಿದ್ದು, ಅದಕ್ಕೆ ಸಿಎಂ ಸಿದ್ದರಾಮಯ್ಯ ಕೂಡ ಉತ್ತರ ನೀಡಿದ್ದಾರೆ.

ಐದು ವರ್ಷಗಳ ಕಾಲ ನಾನೇ ಮುಖ್ಯಮಂತ್ರಿಯಾಗಿರುತ್ತೇನೆ. ನಾವೇ ಮತ್ತೆ ಗೆಲ್ಲುತ್ತೇವೆ. ಐದು ವರ್ಷ ಪೂರ್ಣಗೊಳಿಸುತ್ತೇವೆ ಎಂದಿದ್ದಾರೆ. ಆರ್.ಅಶೋಕ್ ಅವರ ಪವರ್ ಶೇರಿಂಗ್ ವಿಚಾರಕ್ಕೆ ಸಿಎಂ ಸಿದ್ದರಾಮಯ್ಯ ಅವರು ವಿಶ್ವಾಸದಿಂದ ಹೇಳಿದ್ದಾರೆ. ಈಗಾಗಲೇ ಸಿಎಂ ಸಿದ್ದರಾಮಯ್ಯ ಅವರು 16ನೇ ಬಾರಿಗೆ ಬಜೆಟ್ ಮಂಡನೆ ಮಾಡಿದ್ದಾರೆ. ಮುಂದಿನ ಬಜೆಟ್ ಅನ್ನು ಕೂಡ ಸಿದ್ದರಾಮಯ್ಯ ಅವರೇ ಮಂಡನೆ ಮಾಡಲಿದ್ದಾರೆ ಎಂಬ ಮಾತನ್ನು ಈಗಾಗಲೇ ಯತೀಂದ್ರ ತಿಳಿಸಿದ್ದಾರೆ.

ಆದರೆ ಇದರ ನಡುವೆ ಸಿಎಂ ಸ್ಥಾನವನ್ನ ಡಿಸಿಎಂ ಡಿಕೆ ಶಿವಕುಮಾರ್ ಅವರಿಗೆ ಬಿಟ್ಟುಕೊಡಲಿದ್ದಾರೆ ಎಂಬ ಚರ್ಚೆಗಳು ನಡೆಯುತ್ತಿವೆ. ಈ ವಿಚಾರ ಸಾಕಷ್ಟು ಬಾರೀ ಚರ್ಚೆಯಾದರೂ ಡಿಸಿಎಂ ಡಿಕೆ ಶಿವಕುಮಾರ್, ಸಿದ್ದರಾಮಯ್ಯ ಅವರ ಪರವಾಗಿಯೇ ಮಾತನಾಡಿದ್ದಾರೆ. ಅವರೇ ನಮ್ಮ ನಾಯಕರಾಗಿ ಮುಂದುವರೆಯುತ್ತಾರೆ. ಅವರ ನೇತೃತ್ವದಲ್ಲಿಯೇ ನಾವೂ ನಡೆಯುತ್ತೇವೆ ಎಂದು. ಈಗ ಸದನದಲ್ಲಿ ವಿಪಕ್ಷ ನಾಯಕ ಆರ್ ಅಶೋಕ್, ಈ ವಿಚಾರ ಪ್ರಸ್ತಾಪ ಮಾಡಿದ್ದಾರೆ. ನೀವೇ ಸಿಎಂ ಆಗಿ ಮುಂದುವರೆದರೆ ತುಂಬಾನೇ ಖುಷಿ ಆದರೆ ಪವರ್ ಶೇರಿಂಗ್ ಚರ್ಚೆಯಾಗ್ತಾ ಇದೆಯಲ್ಲ ಎಂಬ ಪ್ರಶ್ನೆಯನ್ನ ಹಾಕಿದ್ದಾರೆ.

