ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿದ್ದ ಮೂರು ಕೃಷಿ ಕಾನೂನುಗಳನ್ನ ವಿರೋಧಿಸಿ ರೈತರು ಪ್ರತಿಭಟನೆ ನಡೆಸಿದ್ದರು. ಸುಮಾರು 15 ತಿಂಗಳುಗಳ ಕಾಲ ಈ ಪ್ರತಿಭಟನೆ ನಡೆದಿತ್ತು. ಇದೀಗ ರೈತರು ಪ್ರತಿಭಟನೆ ಬಿಟ್ಟು ಊರುಗಳಿಗೆ ತೆರಳಲು ನಿರ್ಧರಿಸಿದ್ದಾರೆ.
ಕೇಂದ್ರ ಸರ್ಕಾರ ಈ ಮೂರು ಕಾಯ್ದೆಗಳನ್ನ ವಾಪಾಸ್ ಪಡೆದಿದೆ. ಜೊತೆಗೆ ಪ್ರತಿಭಟನೆ ನಡೆಸುತ್ತಿದ್ದ ರೈತರ ವಿರುದ್ಧ ದಾಖಲಾಗಿದ್ದ ಅಪರಾಧ ಪ್ರಕರಣಗಳನ್ನು ವಾಪಾಸ್ ಪಡೆಯುವಂತೆ ಆಗ್ರಹಿಸಿದ್ದರು. ಅದಕ್ಕೂ ಮೋದಿ ಸರ್ಕಾರ ಒಪ್ಪಿಗೆ ಸೂಚಿಸಿದೆ. ಈ ಬೆನ್ನಲ್ಲೇ ರೈತರು ಪ್ರತಿಭಟನೆ ಬಿಟ್ಟು ಡಿಸೆಂಬರ್ 11 ತಮ್ಮ ತಮ್ಮ ಊರುಗಳಿಗೆ ತೆರಳಲು ನಿರ್ಧರಿಸಿದ್ದಾರೆ.
15 ತಿಂಗಳ ರೈತರ ಸುದೀರ್ಘ ಹೋರಾಟಕ್ಕೆ ಕಡೆಗೂ ಜಯ ಲಭಿಸಿದೆ. ಹೀಗಾಗಿ ಇಂದು ವಿಜಯದ ಪ್ರಾರ್ಥನೆ ಸಲ್ಲಿಸಿ, ಹೋಗಲು ಎಲ್ಲಾ ಸಿದ್ಧತೆ ಮಾಡಿಕೊಳ್ಳಲಿದ್ದಾರೆ. ಡಿಸೆಂಬರ್ 11 ರಂದು ಟಿಕ್ರಿ ಮತ್ತು ಸಿಂಘು ಗಡಿಗಳಲ್ಲಿ ಮೆರವಣಿಗೆ ನಡೆಸಿ ಹಾಗೇ ತಮ್ಮ ತಮ್ಮ ಊರುಗಳಿಗೆ ಹೊರಡಲಿದ್ದಾರೆ.