ಬೆಂಗಳೂರು: ಸೇನಾ ಮುಖ್ಯಸ್ಥ ಬಿಪಿನ್ ರಾವತ್ ನಿಧನ ದೇಶಕ್ಕೆ ತುಂಬಲಾರದ ನಷ್ಟವಾಗಿದೆ. ಅವರ ಸಾವಿನ ನೋವನ್ನೇ ಸಹಿಸಿಕೊಳ್ಳಲಾಗ್ತಿಲ್ಲ. ಹೀಗಿರುವಾಗ ಸೋಷಿಯಲ್ ಮೀಡಿಯಾದಲ್ಲಿ ಕೆಲವರು ವಿಕೃತಿ ಮೆರೆಯುತ್ತಿದ್ದಾರೆ. ಅವರ ಸಾವನ್ನ ಸಂಭ್ರಮಿಸುತ್ತಿದ್ದಾರೆ. ಅಂತವರಿಗೆ ತಕ್ಕ ಶಿಕ್ಷೆಯಾಗಬೇಕೆಂದು ಗೃಹ ಸಚಿವ ಆರಗ ಜ್ಞಾನೇಂದ್ರ ಆಜ್ಞೆ ಮಾಡಿದ್ದಾರೆ.

ಈ ಸಂಬಂಧ ಫೋನ್ ಮೂಲಕ ಡಿಜಿಪಿಗೆ ಸೂಚನೆ ನೀಡಿರುವ ಸಚಿವ ಆರಗ ಜ್ಞಾನೇಂದ್ರ, ಬಿಪಿನ್ ರಾವತ್ ನಿಧನ ದೇಶಕ್ಕೆ ತುಂಬಲಾರದ ನಷ್ಟ. ಅವರ ಬಗ್ಗೆ ವಿಕೃತ ಪೋಸ್ಟ್ ಮಾಡಿದ್ದಾರೆ. ಅಂತ ದೇಶ ವಿರೋಧಿಗಳನ್ನ ಕೂಡಲೇ ಪತ್ತೆ ಹಚ್ಚಿ ಶಿಕ್ಷೆ ನೀಡಬೇಕು. ಅಂತ ದುಷ್ಕರ್ಮಿಗಳ ವಿಳಾಸ ಪತ್ತೆ ಹಚ್ಚಿ ಶಿಕ್ಷೆ ನೀಡಬೇಕು ಎಂದು ಸೂಚಿಸಿದ್ದಾರೆ.

ನಿನ್ನೆಯಷ್ಟೇ ಸಿಎಂ ಬಸವರಾಜ್ ಬೊಮ್ಮಾಯಿ ಅವರು ಕೂಡ ಈ ಬಗ್ಗೆ ಮಾತನಾಡಿದ್ದರು. ಸಿಡಿಎಸ್ ಬಿಪಿನ್ ರಾವತ್ ಅವರ ಸಾವನ್ನು ಸಂಭ್ರಮಿಸುವವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಇಡಿ ದೇಶವೇ ಅವರ ಸಾವಿಗೆ ಕಂಬನಿ ಮಿಡಿಯುವಾಗ ಕೆಲವರು ಅವರ ಸಾವನ್ನ ಸಂಭ್ರಮಿಸುತ್ತಿದ್ದಾರೆ. ಅದು ಖಂಡನೀಯ ಅಂಥವರಿಗೆ ಶಿಕ್ಷೆಯಾಗಬೇಕು ಎಂದಿದ್ದರು.

