ವರದಿ ಮತ್ತು ಫೋಟೋ ಕೃಪೆ
ಕೆ.ಎಂ. ಮುತ್ತುಸ್ವಾಮಿ ಕಣ್ಣನ್,
ಮೊ : 78998 64552
ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 14 : ಅಗಸರಹಳ್ಳಿಯಲ್ಲಿ ಏಳು ದಿನಗಳ ಹಿಂದೆ ಮೂರನೆ ತರಗತಿ ಬಾಲಕಿ ಮೇಲೆ ಸಾಧಿಕ್ ಎಂಬುವನು ಅತ್ಯಾಚಾರವೆಸಗಿರುವುದನ್ನು ಖಂಡಿಸಿ ಕರುನಾಡ ವಿಜಯಸೇನೆಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಶುಕ್ರವಾರ ಪ್ರತಿಭಟನೆ ನಡೆಸಿ ಕಚೇರಿ ಸಹಾಯಕರಿಗೆ ಮನವಿ ಸಲ್ಲಿಸಲಾಯಿತು.
ಸಂಜೆ ಆಟವಾಡುತ್ತಿದ್ದ ಬಾಲಕಿಗೆ ಚಾಕಲೇಟ್, ಐಸ್‍ಕ್ರೀಂ ಆಸೆ ತೋರಿಸಿ ಗುಡ್ಡದ ಮೇಲೆ ಕರೆದುಕೊಂಡು ಹೋಗಿ ಅತ್ಯಾಚಾರವೆಸಗಿರುವ ಸಂಬಂಧ ಎಫ್.ಐ.ಆರ್.ದಾಖಲಾಗಿದ್ದರೂ ಇದುವರೆವಿಗೂ ಅತ್ಯಾಚಾರಿಯನ್ನು ಪೊಲೀಸರು ಬಂಧಿಸಿಲ್ಲ. ಅತ್ಯಾಚಾರ ಪ್ರಕರಣಗಳು ಪದೇ ಪದೇ ಮರುಕಳಿಸುತ್ತಿದ್ದರು ರಾಜ್ಯ ಸರ್ಕಾರವಾಗಲಿ, ಪೊಲೀಸ್ ಇಲಾಖೆಯಾಗಲಿ ಎಚ್ಚೆತ್ತುಕೊಳ್ಳುತ್ತಿಲ್ಲ. ಪೋಕ್ಸೋ ಕಾಯಿದೆಯಡಿ ಕಠಿಣ ಶಿಕ್ಷೆ ವಿಧಿಸುವಂತೆ ಪ್ರತಿಭಟನೆ ನೇತೃತ್ವ ವಹಿಸಿದ್ದ ಕರುನಾಡ ವಿಜಯಸೇನೆ ಜಿಲ್ಲಾಧ್ಯಕ್ಷ ಕೆ.ಟಿ.ಶಿವಕುಮಾರ್ ಒತ್ತಾಯಿಸಿದರು.
ಕರುನಾಡ ವಿಜಯಸೇನೆ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ವೀಣಗೌರಣ್ಣ, ಪ್ರಧಾನ ಕಾರ್ಯದರ್ಶಿ ಗೋಪಿನಾಥ್, ನಿಸಾರ್ ಅಹಮದ್, ಮುಜಾಹಿದ್, ನಾಗೇಶ್, ಅಖಿಲೇಶ್
ಶಶಿ, ಯರ್ರಿಸ್ವಾಮಿ, ವಿಜಯ್‍ಬಾಬು, ಮಹಮದ್ ರಫಿ, ಅವಿನಾಶ್ ಇವರುಗಳು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.


















