Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗದ ಅನ್ವರ್ ಪಾಷಾಗೆ ವಕ್ಫ್ ಬೋರ್ಡ್ ಅಧ್ಯಕ್ಷ ಸ್ಥಾನ ಮಿಸ್ ; ರಾಜೀನಾಮೆ ಕೊಡ್ತಾರಾ ಜಮೀರ್ ಖಾನ್..?

---Advertisement---

 

ಬೆಂಗಳೂರು, ಮಾರ್ಚ್. 16 : ಕರ್ನಾಟಕ ವಕ್ಫ್ ಬೋರ್ಡ್ ಗೆ ನೂತನವಾಗಿ ಅಧ್ಯಕ್ಷರ ನೇಮಕವಾಗಿದೆ. ಅಧ್ಯಕ್ಷ ಸ್ಥಾನಕ್ಕೆ ಇಬ್ಬರ ನಡುವೆ ಜಟಾಪಟಿ ಇತ್ತು. ಕಾಂಗ್ರೆಸ್ ಹೈಕಮಾಂಡ್ ಅಳೆದು ತೂಗಿ ವಕ್ಫ್ ಅಧ್ಯಕ್ಷರನ್ನು ಆಯ್ಕೆ ಮಾಡಿದೆ. ಸೈಯದ್ ಉಲ್ ಹುಸೇನಿಯವರು ನೂತನವಾಗಿ ಆಯ್ಕೆಯಾದ ಅಧ್ಯಕ್ಷರಾಗಿದ್ದಾರೆ. ಇವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ರಾಜ್ಯಸಭಾ ಸದಸ್ಯ ನಾಸಿರ್ ಹುಸೇನ್ ಅವರ ಬೆಂಬಲಿಗರಾಗಿದ್ದಾರೆ. ಆದರೆ ಅಧ್ಯಕ್ಷ ಸ್ಥಾನಕ್ಕೆ ಜಮೀರ್ ತಮ್ಮ ಆಪ್ತನನ್ನು ಆಯ್ಕೆ ಮಾಡಬೇಕೆಂಬ ಹಠ ಹಿಡಿದಿದ್ದರು.

ಜಮೀರ್ ಅಹ್ಮದ್ ಖಾನ್ ಆಪ್ತ, ಚಿತ್ರದುರ್ಗದ ಅನ್ವರ್ ಪಾಷಾ ಅವರನ್ನು ಕೂರಿಸಲು ಬಾರೀ ಪ್ರಯತ್ನ ನಡೆದಿತ್ತು. ಇದು ಸಾಧ್ಯವಾಗಿಲ್ಲ. ಕಡೆಗೆ ಸಿಎಂ ಸಿದ್ದರಾಮಯ್ಯ ಅವರು ಮಧ್ಯಪ್ರವೇಶ ಮಾಡಿ 50/50 ಸೂತ್ರದ ಸಲಗೆಯನ್ನು ನೀಡಿದರು. ಇದಕ್ಕೆ ಡಿಕೆ ಶಿವಕುಮಾರ್ ಸಹ ಒಪ್ಪಲಿಲ್ಲ. ಹೀಗಾಗಿ ಹೈಕಮಾಂಡ್ ಕಡೆಗೆ ಸೈಯದ್ ಉಲ್ ಹುಸೇನಿ ಅವರನ್ನೇ ಅಧ್ಯಕ್ಷ ಸ್ಥಾನಕ್ಕೆ ಕೂರಿಸಿದೆ.

ಇದರ ನಡುವೆ ಜಮೀರ್ ಅಹ್ಮದ್ ಖಾನ್ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿಯೂ ಬೆದರಿಕೆ ಹಾಕಿದ್ದರು ಎನ್ನಲಾಗಿದೆ. ಆದರೆ ಹೈಕಮಾಂಡ್ ಇದಕ್ಕೆ ಜಗ್ಗಿಲ್ಲ. ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿರುವ ಜಮೀರ್, ಅಧ್ಯಕ್ಷ ಸ್ಥಾನಕ್ಕೆ ತಮ್ಮ ಆಪ್ತನನ್ನ ಕೂರಿಸಿ ಎಂಬ ಲಾಭಿ ಮಾಡುವ ಪ್ರಯತ್ನ ಮಾಡ್ತಾ ಇದಾರೆ. ಈಗಾಗಲೇ ಅಧಿಕೃತ ಮುದ್ರೆಯನ್ನು ಹೈಕಮಾಂಡ್ ಒತ್ತಿದೆ. ಹೀಗಿರುವಾಗ ಜಮೀರ್ ರಾಜೀನಾಮೆ ಕೊಡ್ತಾರಾ ಎಂಬುದನ್ನು ನೋಡಬೇಕಿದೆ. ಆದರೆ‌ ತಮ್ಮ ಆಪ್ತನಿಗೆ ಅಧ್ಯಕ್ಷ ಸ್ಥಾನ ಕೊಡಿಸಲು ಸಾಕಷ್ಟು ಪ್ರಯತ್ನ ಪಟ್ಟಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...