Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ನಾಯಕನಹಟ್ಟಿ ಜಾತ್ರೆ : ಬಾರಿ ಮೊತ್ತಕ್ಕೆ ಹರಾಜಾದ ಮುಕ್ತಿ ಬಾವುಟ

---Advertisement---

ಸುದ್ದಿಒನ್, ಚಳ್ಳಕೆರೆ, ಮಾರ್ಚ್. 16 : ಮಧ್ಯ ಕರ್ನಾಟಕದ ಪವಾಡ ಪುರುಷ, ಕಾಯಕಯೋಗಿ ನಾಯಕನಹಟ್ಟಿ ಶ್ರೀಗುರು ತಿಪ್ಪೇರುದ್ರಸ್ವಾಮಿ ರಥೋತ್ಸವದ ಅದ್ದೂರಿಯಾಗಿ ನಡೆಯಿತು.

ರಥೋತ್ಸವಕ್ಕೂ ಮುನ್ನ ಶ್ರೀ ಗುರು ತಿಪ್ಪೇರುದ್ರಸ್ವಾಮಿ ಜಾತ್ರೆಯ ವಿಶೇಷಗಳಲ್ಲಿ ಒಂದಾಗಿರುವ ಮುಕ್ತಿ ಬಾವುಟದ ಹರಾಜು ನಡೆಸಲಾಯಿತು. ಈ ಬಾರಿ ರಥದ ಮುಂದೆ ನಡೆದ ಹಟ್ಟಿ ತಿಪ್ಪೇಶನ ಮುಕ್ತಿ ಭಾವುಟ ಭರ್ಜರಿ ಮೊತ್ತಕ್ಕೆ ಹರಾಜಾಯಿತು. ಈ ವರ್ಷದ ಮುಕ್ತಿ ಭಾವುಟವನ್ನು ಬೆಂಗಳೂರು ಮೂಲದ, ನಾಯಕನಹಟ್ಟಿ ಅಳಿಯ ಉದ್ಯಮಿ ತೇಜಸ್ವಿ ಆರಾಧ್ಯ ಅವರು ರೂ.63 ಲಕ್ಷ ಗಳಿಗೆ ಹರಾಜು ಮೂಲಕ ಪಡೆದುಕೊಂಡರು.‌

ಈ ಸಂದರ್ಭದಲ್ಲಿ ಯೋಜನೆ ಮತ್ತು ಸಾಂಖ್ಯಿಕ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್, ಸಂಸದ ಗೋವಿಂದ ಕಾರಜೋಳ, ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಅಧ್ಯಕ್ಷ ಹಾಗೂ ಚಳ್ಳಕೆರೆ ಶಾಸಕ ಟಿ.ರಘುಮೂರ್ತಿ, ಮೊಳಕಾಲ್ಮೂರು ಶಾಸಕ ಎನ್.ವೈ.ಗೋಪಾಲಕೃಷ್ಣ, ಚಿತ್ರದುರ್ಗ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ, ದ್ರಾಕ್ಷಾರಸ ಮಂಡಳಿ ಅಧ್ಯಕ್ಷ ಡಾ.ಬಿ.ಯೋಗೇಶ ಬಾಬು, ಜಿಲ್ಲಾಧಿಕಾರಿ ಟಿ.ವೆಂಕಟೇಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು, ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಉಪವಿಭಾಗಾಧಿಕಾರಿ ಮಹಬೂಬ್ ಜಿಲಾನ್ ಸೇರಿದಂತೆ ಮತ್ತಿತರರು ಇದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...