Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಕುಡಿಯುವ ನೀರಿಗಾಗಿ ಜಗಳ : ಮುರಿದು ಬಿದ್ದ ಮದುವೆ

---Advertisement---

ಸುದ್ದಿಒನ್, ಹಿರಿಯೂರು, ಮಾರ್ಚ್. 16  : ಆರತಕ್ಷತೆಯ ನಂತರ ಏರ್ಪಡಿಸಿದ್ದ ಭೋಜನದಲ್ಲಿ ಕೊನೆಗೆ ಬಂದ ಕೆಲವರಿಗೆ ಕುಡಿಯುವ ನೀರು ಸಿಗಲಿಲ್ಲ ಎಂಬ ಕಾರಣಕ್ಕೆ ಆರಂಭವಾದ ಜಗಳ ಮದುವೆ ನಿಲ್ಲುವ ಮಟ್ಟಕ್ಕೆ ತಲುಪಿರುವ ಘಟನೆ ನಗರದ ರಾಷ್ಟ್ರೀಯ ಹೆದ್ದಾರಿ 48ಕ್ಕೆ ಹೊಂದಿಕೊಂಡಿರುವ ಬಲಿಜ ಶ್ರೇಯ ಭವನದಲ್ಲಿ ಭಾನುವಾರ ನಡೆದಿದೆ.

ಶನಿವಾರ ರಾತ್ರಿ ಆರತಕ್ಷತೆ ನಂತರ ಕೆಲವರು ತಡವಾಗಿ ಊಟಕ್ಕೆ ಬಂದಿದ್ದು, ಕ್ಯಾಟರಿಂಗ್ ನವರು ಸಕಾಲಕ್ಕೆ ಕುಡಿಯುವ ನೀರು ಕೊಡಲಿಲ್ಲ ಎಂಬ ಕಾರಣಕ್ಕೆ ಆರಂಭವಾದ ಜಗಳ ವಿಕೋಪಕ್ಕೆ ಹೋಗಿ, ಭಾನುವಾರ ಬೆಳಿಗ್ಗೆ ಮುಹೂರ್ತ ಮುಂದುವರಿಸಲು ಎರಡು ಕಡೆಯವರು ನಡೆಸಿದ ಸಂಧಾನ ವಿಫಲವಾಯಿತು ಎನ್ನಲಾಗಿದೆ.

ತುಮಕೂರು ಜಿಲ್ಲೆ ಶಿರಾ ತಾಲೂಕಿನ ಚಿರತಹಳ್ಳಿಯ ವಧು ಹಾಗೂ ಜಗಳೂರು ಪಟ್ಟಣದ ವರನ ವಿವಾಹ ಇಲ್ಲಿ ನಡೆಯಬೇಕಿತ್ತು. ವಧು ವರ ಇಬ್ಬರು ಇಂಜಿನಿಯರಿಂಗ್ ಪದವೀಧರರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment