ಚಿತ್ರದುರ್ಗ.ಮಾರ್ಚ್.17:ಬಾಗಲಕೋಟೆ, ಗದಗ, ವಿಜಯಪುರ, ಧಾರವಾಡ, ಉತ್ತರಕನ್ನಡ, ಉಡುಪಿ, ದಾವಣಗೆರೆ, ಹಾವೇರಿ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳ ಅವಿವಾಹಿತ ಪುರುಷ ಅಭ್ಯರ್ಥಿಗಳಿಂದ ಅಗ್ನಿಪಥ್ ಯೋಜನೆಯಡಿ 2025-26ನೇ ಸಾಲಿನ ಅಗ್ನಿವೀರ್ ನೇಮಕಾತಿ ಪರಿಕ್ಷೇಗೆ ಆನ್‌ಲೈನ್ ಮೂಲಕ ಅರ್ಜಿ ಅಹ್ವಾನಿಸಲಾಗಿದೆ.
ಆಸಕ್ತರು ವೆಬ್ ಪೋರ್ಟಲ್-WWW.JOININDIANARMY.NIC.IN
ಮೂಲಕ ಏಪ್ರಿಲ್ 10 ಒಳಗಾಗಿ ಅರ್ಜಿ ಸಲ್ಲಿಸಬಹುದು. ಬರುವ ಜೂನ್‌ನಲ್ಲಿ ಪರೀಕ್ಷೆ ನಡೆಸಲಾಗುವುದು. ಹೆಚ್ಚಿನ ಮಾಹಿತಿಗಾಗಿ ಮಂಗಳೂರು ಸೇನಾ ನೇಮಕಾತಿ ಕಛೇರಿ ದೂರವಾಣಿ ಸಂಖ್ಯೆ- 0824-2951279 ಹಾಗೂ aromangalore2021@gmail.com ಸಂಪರ್ಕಿಸಬಹುದು. ಭಾರತೀಯ ಸೇನೆಯಲ್ಲಿ ಆಯ್ಕೆಯು ‘ನ್ಯಾಯಯುತ ಮತ್ತು ಪಾರದರ್ಶಕ’ ನಡೆಯುತ್ತದೆ. ಅಭ್ಯರ್ಥಿಗಳು ಯಾವುದೇ ಹಂತದಲ್ಲೂ ಲಂಚ ನೀಡಬಾರದು. ಆಮಿಶ ಒಡ್ಡುವ ವ್ಯಕ್ತಿಗಳಿಗೆ ಬಲಿಯಾಗಬಾರದು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಉಪನಿರ್ದೇಶಕ ಡಾ.ಸಿ.ಎ.ಹಿರೇಮಠ ತಿಳಿಸಿರುತ್ತಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.











