ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 19 : ಒಂಬತ್ತು ತಿಂಗಳ ಕಾಲ ಬಾಹ್ಯಾಕಾಶದಲ್ಲಿದ್ದ ಸುನಿತಾ ವಿಲಿಯಮ್ಸ್ ಮತ್ತು ಬುಚ್ ವಿಲ್ಮೋರ್ ಸುರಕ್ಷಿತವಾಗಿ ಭೂಮಿಗೆ ಬಂದಿಳಿದಿದ್ದಾರೆ. ಮಂಗಳವಾರ ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಿಂದ ಹಿಂದಿರುಗಿದ ಸುನಿತಾ ವಿಲಿಯಮ್ಸ್ ಮತ್ತು ವಿಲ್ಮೋರ್, ಭಾರತೀಯ ಕಾಲಮಾನ ಬುಧವಾರ ಬೆಳಗಿನ ಜಾವ 3:27 ಕ್ಕೆ ಫ್ಲೋರಿಡಾ ಕರಾವಳಿಯಲ್ಲಿ ಸುರಕ್ಷಿತವಾಗಿ ಇಳಿದಿದ್ದಾರೆ. ಅವರಿಗೆ ಅಭಿಮಾನದ ಹೃದಯಪೂರ್ವಕ ಸ್ವಾಗತ ಹಾಗೂ ಅಭಿನಂದನೆಗಳನ್ನು ಸಲ್ಲಿಸೋಣ.
ಇವರ ತಾಳ್ಮೆ, ಅನುಭವ ನಿಜಕ್ಕೂ ಮುಂದಿನ ಪೀಳಿಗೆಗೆ ಸ್ಫೂರ್ತಿದಾಯಕವಾಗಿರಲಿ ಎಂದು ಚಿತ್ರದುರ್ಗ ಸೈನ್ಸ್ ಫೌಂಡೇಶನ್, ತಾರಾಮಂಡಲ ಹಾಗೂ ಹವ್ಯಾಸಿ ಖಗೋಳ ವೀಕ್ಷಕರ ವಿಜ್ಞಾನ ಕೇಂದ್ರದ ಪದಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.















