Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ವಿದ್ಯುತ್ ದರ ಏರಿಕೆಯ ಶಾಕ್ ನೀಡಿದ ಇಲಾಖೆ ; ಏರಿಕೆಯಾಗಿದ್ದು ಎಷ್ಟು..?

---Advertisement---

ಬೆಂಗಳೂರು; ಇದ್ದಕ್ಕಿದ್ದ ಹಾಗೇ ವಿದ್ಯುತ್ ಬಿಲ್ ಏರಿಕೆಯಾಗುದ್ದು ಜನರ ಕೋಪಕ್ಕೆ ಕಾರಣವಾಗಿದೆ. ಮೊದಲೇ ಬಿರು ಬೇಸಿಗೆಯಲ್ಲಿ ಬೆವರುತ್ತಿರೋ ಜನರಿಗೆ ವಿದ್ಯುತ್ ಹೆಚ್ಚಾಗಿ ಬಳಕೆಯಾಗುತ್ತದೆ. ಈ ಸಮಯದಲ್ಲಿ ವಿದ್ಯುತ್ ಬಿಲ್ ಏರಿಕೆಯಾಗಿರೋದು ಕೋಪಕ್ಕೆ ಕಾರಣವಾಗಿದೆ. ದಿನನಿತ್ಯದ ವಸ್ತುಗಳು ಏರಿಕೆಯಾಗುತ್ತಿರುವುದು ಜನ ಸಾಮಾನ್ಯರಿಗೆ ಹೊರೆಯಾಗಿದೆ. ಅದರಲ್ಲೂ ವಿದ್ಯುತ್ ದರವನ್ನು ಕೆಇಆರ್ಸಿ ಹೊರಡಿಸಿರುವ ಆದೇಶದಲ್ಲಿ ಯೂನಿಟ್ ಗೆ 36 ಪೈಸೆ ಹೆಚ್ಚಳವಾಗಿದೆ.

ಹೊಸ ವಿದ್ಯುತ್ ದರ ಏಪ್ರಿಲ್ 1ರಿಂದ ಜಾರಿಗೆ ಬರಲಿದೆ. ವಿದ್ಯುತ್ ಪ್ರಸರಣ ಮತ್ತು ಎದ್ಕಾಂಗಳ ಸಿಬ್ಬಂದಿಗಳ ಪಿಂಚಣಿ ಹಾಗೂ ಗ್ರಾಚ್ಯುಟಿ ಪಾವತಿಸಲು ಹಾಗೂ ಉಚಿತ ವಿದ್ಯುತ್ ಯೋಜನೆಗಳ ವೆಚ್ಚ ಭರಿಸಲು ಈ ದರ ಏರಿಕೆ ಮಾಡಲಾಗುತ್ತಿದೆ ಎಂದು ಕೆಇಆರ್ಸಿ ತಿಳಿಸಿದೆ. ಹಂತ ಹಂತವಾಗಿ ದರ ಏರಿಕೆ ಮಾಡಲು ನಿರ್ಧರಿಸಿದ್ದು 2025-26 ಪ್ರತಿ ಯೂನಿಟ್ ಗೆ 36 ಪಯುಸೆ ಹೆಚ್ಚಳ, 2026-27 ಪ್ರತಿ ಯುನಿಟ್ ಗೆ 35 ಪೈಸೆ ಹೆಚ್ಚಳ, 2027-28ಕ್ಕೆ ಪ್ರತಿ ಯೂನಿಟ್ ಗೆ 34 ಪೈಸೆ ಹೆಚ್ಚಳ ಮಾಡುವ ಬಗ್ಗೆ ನಿರ್ಧಾರ ಮಾಡಲಾಗಿದೆ.

ಇನ್ನು ಈ ಹೆಚ್ಚಳದಿಂದಾಗಿ ಮುಂದಿನ ಮೂರು ವರ್ಷಗಳಲ್ಲಿ ಸುಮಾರು 8519 ಕೋಟಿ ರೂಪಾಯಿ ಹೆಚ್ಚುವರಿ ಆದಾಯ ಸಂಗ್ರಹವಾಗುವ ನಿರೀಕ್ಷೆ ಇದೆ. ಆದರೆ ಈಗೀಗ ವಿದ್ಯುತ್ ಸಂಸ್ಥೆಗಳಿಗೆ ಸುಮಾರು 4659 ಕೋಟಿ ರೂಪಾಯಿಯಷ್ಟು ಪಿಂಚಣಿ ಮತ್ತು ಗ್ಯಾಚ್ಯುಟಿ ಬಾಕಿ ಇದೆ. ಇನ್ನು ಗೃಹಜ್ಯೋತಿ ಯೋಜನೆಯಿಂದ ನಮಗೆ ನಷ್ಟ ಆಗಿಲ್ಲ, ಇದರಿಂದಾಗಿ ದರ ಏರಿಕೆ ಮಾಡಿರೋದು ಅಲ್ಲ ಎಂದು ಸಚಿವ ಶರಣ ಪ್ರಕಾಶ್ ಪಾಟೀಲ್ ಸ್ಪಷ್ಟನೆ ನೀಡಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment