Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಇಂದಿನಿಂದ ಶ್ರೀ ಪ್ರಸನ್ನ ಗಣಪತಿ ದೇವಸ್ಥಾನದ 30ನೇ ವರ್ಷದ ವಾರ್ಷಿಕೋತ್ಸವ

---Advertisement---

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಸುದ್ದಿಒನ್, ಚಿತ್ರದುರ್ಗ, ಮಾ. 21 : ನಗರದ ಆನೆ ಬಾಗಿಲ ಬಳಿಯಲ್ಲಿನ ಶ್ರೀ ಪ್ರಸನ್ನ ಗಣಪತಿ ಸೇವಾ ಸಮಿತಿ (ರಿ) ವತಿಯಿಂದ ಶ್ರೀ ಪ್ರಸನ್ನ ಗಣಪತಿ ದೇವಸ್ಥಾನದ 30ನೇ ವರ್ಷದ ವಾರ್ಷಿಕೋತ್ಸವ ಹಾಗೂ ಕಳಸಾಭಿಷೇಕ ಮಾ. 21 ರಿಂದ 23ರವರೆಗೆ ನಡೆಯಲಿದೆ ಎಂದು  ಶ್ರೀ ಪ್ರಸನ್ನ ಗಣಪತಿ ಸೇವಾ ಸಮಿತಿ ತಿಳಿಸಿದೆ.

ಮಾ.21ನೇ ಶುಕ್ರವಾರ ಸಂಜೆ ರಾಕ್ಷೋಘ್ನ ಹೋಮ, ವಾಸ್ತು ಹೋಮ, ದುರ್ಗಾ ದೀಪ ನಮಸ್ಕಾರ ಪೂಜೆ ನಡೆಸಲಾಯಿತು. ಮಾ.22 ರ ಶನಿವಾರ ಬೆಳಿಗ್ಗೆ ನವಗ್ರಹ ಶಾಂತಿ, ಗಂಗಾ ಶಾಂತಿ, ನಾಗಶಾಂತಿ ಸಂಜೆ 5.30ಕ್ಕೆ ಅಧಿವಾಸದ ಹೋಮ, ಬ್ರಹ್ಮಕಲಶ ಸ್ಥಾಪನೆ, ಅಷ್ಟಾವಧಾನ ಸೇವೆ, ನಂತರ ಕಳಸ ಸ್ಥಾಪನೆ ಮಾಡಲಾಗುವುದು. ಕಳಸಕ್ಕೆ ಹಣ ಕೊಟ್ಟವರ ಹೆಸರು ಗೋತ್ರ, ನಕ್ಷತ್ರದ ಮೂಲಕ ಸಂಕಲ್ಪ ಮಾಡಿಸಲಾಗುವುದು ಪುರೋಹಿತರು ಕಳಸವನ್ನು ಮುಟ್ಟಿಸಿ ಮೂಲ ದೇವರಿಗೆ ಅಭಿಷೇಕ ಮಾಡಿ ನಂತರ ಕಳಸವನ್ನು ದಂಪತಿಗಳಿಗೆ ನೀಡಲಾಗುವುದು.

ಮಾ. 23 ನೇ ಭಾನುವಾರ ಕಲಾವೃದ್ಧಿ ಹೋಮ, ಶಾಂತಿ ಪ್ರಾಯಶ್ಚಿತ್ತ, ಹೋಮಾದಿಗಳು ಬ್ರಹ್ಮ ಕಲಶಾಭಿಷೇಕ ಮಹಾಮಂಗಳಾರತಿ, ತೀರ್ಥ ಪ್ರಸಾದ ವಿನಿಯೋಗ ಮಧ್ಯಾಹ್ನ 1.00 ರಿಂದ ಪೂಜಾ ಸೇವಾಕರ್ತರು ಹಾಗೂ ಸಮಸ್ತ ಭಕ್ತಾದಿಗಳಿಗೆ ಅನ್ನಸಂತರ್ಪಣೆ ಪೂಜಾ ಕಾರ್ಯಕ್ರಮ ನಡೆಸಲಾಗುವುದು.

ಈ ಎಲ್ಲಾ ಕಾರ್ಯಕ್ರಮಗಳಿಗೆ ಭಕ್ತಾಧಿಗಳು ಆಗಮಿಸುವುದರ ಮೂಲಕ ವಿನಾಯಕನ ಕೃಪೆಗೆ ಪಾತ್ರರಾಗುವಂತೆ ಶ್ರೀ ಪ್ರಸನ್ನ ಗಣಪತಿ ಸೇವಾ ಸಮಿತಿಯವರು ಕೋರಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...