ಚಿತ್ರದುರ್ಗ, ಮಾರ್ಚ್ 21: ಮಾರ್ಚ್ 21ರಂದು ನಡೆದ ಎಸ್‍ಎಸ್‍ಎಲ್‍ಸಿ ವಾರ್ಷಿಕ ಪರೀಕ್ಷೆ-1ರ ಕನ್ನಡ ವಿಷಯದ ಪರೀಕ್ಷೆಗೆ ಒಟ್ಟು 22,229 ವಿದ್ಯಾರ್ಥಿಗಳು ಹಾಜರಾಗಿದ್ದು, 943 ವಿದ್ಯಾರ್ಥಿಗಳು ಗೈರಾಗಿದ್ದಾರೆ.
ಜಿಲ್ಲೆಯಲ್ಲಿ ಕನ್ನಡ ವಿಷಯದ ಪರೀಕ್ಷೆಗೆ 23,172 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದು, ಈ ಪೈಕಿ ಚಳ್ಳಕೆರೆ ತಾಲ್ಲೂಕಿನಲ್ಲಿ 4,911 ವಿದ್ಯಾರ್ಥಿಗಳು, ಚಿತ್ರದುರ್ಗ-6,276, ಹಿರಿಯೂರು-3,389, ಹೊಳಲ್ಕೆರೆ-2,596, ಹೊಸದುರ್ಗ-2,865 ಹಾಗೂ ಮೊಳಕಾಲ್ಮುರು-2,192 ವಿದ್ಯಾರ್ಥಿಗಳು ಸೇರಿದಂತೆ ಒಟ್ಟು 22,229 ವಿದ್ಯಾರ್ಥಿಗಳು ಹಾಜರಾಗಿ, 943 ವಿದ್ಯಾರ್ಥಿಗಳು ಗೈರಾಗಿದ್ದಾರೆ. ಜಿಲ್ಲೆಯ 82 ಪರೀಕ್ಷೆ ಕೇಂದ್ರಗಳಲ್ಲಿ ಪರೀಕ್ಷೆ ಸುಗಮವಾಗಿ ನಡೆಯಿತು ಎಂದು ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಎಂ.ಆರ್.ಮಂಜುನಾಥ್ ತಿಳಿಸಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.
















