Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಕರ್ನಾಟಕ ಬಂದ್ ಗೆ ಮಿಶ್ರ ಪ್ರತಿಕ್ರಿಯೆ ; ಯಾವ್ಯಾವ ಜಿಲ್ಲೆಯಲ್ಲಿ ಹೇಗಿದೆ ಪರಿಸ್ಥಿತಿ..?

---Advertisement---

ಬೆಳಗಾವಿಯಲ್ಲಿ ಮರಾಠಿ ಪುಂಡರ ನಡವಳಿಕೆಗೆ ಬೇಸತ್ತ ಕಮ್ನಡಪರ ಸಂಘಟನೆಗಳು ಇಂದು ಕರ್ನಾಟಕ ಬಂದ್ ಗೆ ಕರೆ ನೀಡಿವೆ. ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಬಂದ್ ನಡೆಯುತ್ತಿದೆ. ಆದರೆ ಇಂದಿನ ಬಂದ್ ಗೆ ಎಲ್ಲೆಡೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಯಾವೆಲ್ಲಾ ಜಿಲ್ಲೆಗಳಲ್ಲಿ ಬಂದ್ ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ ಎಂಬ ಮಾಹಿತಿ ಇಲ್ಲಿದೆ.

ಅದರಲ್ಲೂ ಬೆಂಗಳೂರಿನ ಮಂದಿಗಂತು ಯಾವುದೇ ರೀತಿಯ ವ್ಯತ್ಯಾಸವಾಗಿಲ್ಲ.ಕೆಎಸ್ಆರ್ಟಿಸಿ, ಬಿಎಂಟಿಸಿ ಬಸ್ ಸಂಚಾರವೂ ಮೊದಲಿನಂತೆ ಇದೆ. ಮೆಟ್ರೋ ಸಂಚಾರವೂ ಎಂದಿನಂತೆ ಇದೆ. ಹೊಟೇಲ್ ಗಳು ಕೂಡ ತೆರೆದಿವೆ. ಮೈಸೂರು ಹಾಗೂ ಕಲ್ಯಾಣ ಕರ್ನಾಟಕ ಭಾಗದಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಅದರಲ್ಲೂ ಕರಾವಳಿ ಕರ್ನಾಟಕದಲ್ಲಿ ಬಂದ್ ಗೆ ಯಾವುದೇ ಸಂಘಟನೆಕರೆ ನೀಡಿಲ್ಲ.‌ ಜನರು ತಮ್ಮ ದಿನಚರಿಯನ್ನು ಮಾಮೂಲಿಯಂತೆ ನಡೆಸುತ್ತಿದ್ದಾರೆ.

ಇನ್ನು ರಾಮನಗರದಲ್ಲಿ ಬಂದ್ ವಿಫಲವಾಗಿದೆ. ವಾಹನಗಳ ಸಂಚಾರ ಯಥಾ ಸ್ಥಿತಿಯಲ್ಲಿದೆ. ಅಂಗಡಿಗಳು ತೆರೆದಿದ್ದು, ವ್ಯಾಪಾರ ಎಂದಿನಂತೆ ಸಾಗಿದೆ. ಚಿಕ್ಕಮಗಳೂರು ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಚಾಲಕರನ್ನು ತರಾಟೆಗೆ ತೆಗೆದುಕೊಂಡ ಘಟನೆಯೂ ನಡೆದಿದೆ. ಚಾಮರಾಜನಗರದಲ್ಲಿ ಬಂದ್ ಗೆ ನೀರಸ ಪ್ರತಿಕ್ರಿಯೆ ಇತ್ತು. ಕನ್ನಡ ಪರ ಸಂಘಟನೆಗಳ ಪ್ರತಿಭಟನೆಯಿಂದ ಬಂದ್ ಸೀಮಿತವಾಯ್ತು.ವೆಂಇಎಸ್ ಬಿತ್ತಿ ಚಿತ್ರದ ಮೇಲೆ ಟೊಮ್ಯಾಟೋ ಹೊಡೆದು ಪ್ರತಿಭಟನೆ ನಡೆಸಿದರು. ಬೆಂಗಳೂರಿನಲ್ಲಂತು ಎಲ್ಲರ ಜೀವನ ಯಥಾಸ್ಥಿತಿ ಸಾಗುತ್ತಿದೆ. ಬಸ್ ಗಳ ಓಡಾಟ, ಜನರ ಓಡಾಟ ಎಲ್ಲವೂ ಸಾಮಾನ್ಯವಾಗಿ ನಡೆಯುತ್ತಿದೆ. ಅಂಗಡಿಗಳನ್ನು ತೆರೆಯಲಾಗಿದೆ. ವ್ಯಾಪಾರವೂ ನಡೆಯುತ್ತಿದೆ, ಕಚೇರಿಗಳು ಓಪನ್ ಆಗಿವೆ. ಮರಾಠಿಗರ ಪುಂಡಾಟಕ್ಕೆ ಬ್ರೇಕ್ ಹಾಕುವುದಕ್ಕೆ ಕನ್ನಡಪರ ಹೋರಾಟಗಾರರು ಮಾಡುತ್ತಿರುವ ಬಂದ್ ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment