Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ನಮ್ಮ ಅವಧಿಯಲ್ಲಿಯೇ ಪಿ.ಬಿ. ರಸ್ತೆ ಅಗಲೀಕರಣ ಪೂರ್ಣಗೊಳ್ಳಬೇಕು : ಸಚಿವ ಡಿ.ಸುಧಾಕರ್

---Advertisement---

ಚಿತ್ರದುರ್ಗ, ಮಾರ್ಚ್. 25 : ನಗರದ ಪಿ.ಬಿ. ರಸ್ತೆ ಅಗಲೀಕರಣ ಕಾರ್ಯ ನಮ್ಮ ಅಧಿಕಾರ ಅವಧಿಯಲ್ಲಿಯೇ ಪೂರ್ಣಗೊಳ್ಳಬೇಕು. ಭೂಸ್ವಾಧೀನಾಧಿಕಾರಿ ವೆಂಕಟೇಶ್ ನಾಯ್ಕ್ ಹಾಗೂ ನಗರಸಭೆ ಅಧಿಕಾರಿಗಳು ಸೂಕ್ತ ದಾಖಲೆಗಳನ್ನು ಸಂಗ್ರಹಿಸಿ, ರಸ್ತೆ ಅಗಲೀಕರಣ ಕಾರ್ಯಕ್ಕೆ ಮುಂದಾಗಬೇಕು ಎಂದು ಸಚಿವ ಡಿ.ಸುಧಾಕರ್ ಸಭೆಯಲ್ಲಿ ನಿರ್ದೇಶನ ನೀಡಿದರು.

ಸೋಮವಾರ ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಜರುಗಿದ ತ್ರೈಮಾಸಿಕ ಕೆಡಿಪಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಸರ್ವೋಚ್ಚ ನ್ಯಾಯಾಲಯವೇ ಧಾರ್ಮಿಕ ಶ್ರದ್ದಾ ಕೇಂದ್ರಗಳನ್ನೇ ರಸ್ತೆ ಅಗಲೀಕರಣಕ್ಕಾಗಿ ಮುಲಾಜು ತೋರದೆ ತೆರವುಗೊಳಿಸುವಂತೆ ಆದೇಶ ನೀಡಿದೆ. ಹಳೆಯ ಪಿ.ಬಿ ರಸ್ತೆಯನ್ನು ಅನಧಿಕೃತವಾಗಿ ಒತ್ತುವರಿ ಮಾಡಿದವರನ್ನು ತೆರವುಗೊಳಿಸಲು ಯಾವುದೇ ಮುಲಾಜು ತೋರಬೇಡಿ ಎಂದು ಶಾಸಕ ಡಾ.ಎಂ.ಚಂದ್ರಪ್ಪ ಹೇಳಿದರು.
ಚಳ್ಳಕೆರೆ ಹಾಗೂ ಹಿರಿಯೂರಿನಿಂದ ಚಿತ್ರದುರ್ಗ ನಗರ ಪ್ರವೇಶ ಮಾಡುವ ಪಿ.ಬಿ. ರಸ್ತೆ ಸರ್ಕಾರಿ ವಿಜ್ಞಾನ ಕಾಲೇಜಿನಿಂದ ಆಸ್ಪತ್ರೆಯವರೆಗೆ ಸಾಕಷ್ಟು ವಿಸ್ತಾರವಾಗಿದೆ. ಅದರೆ ನಗರದ ಮುಖ್ಯಭಾಗದಲ್ಲಿ ಒತ್ತುವಾರಿಯಾಗಿದೆ. ಇದಕ್ಕಿಂತ ಬೇರೆ ನಿದರ್ಶನ ಬೇಕಿಲ್ಲ. ಅಧಿಕಾರಿಗಳು ಒತ್ತುವರಿ ತೆರವಿಗೆ ಮುಂದಾಗಬೇಕು ಎಂದು ಶಾಸಕ ಟಿ.ರಘುಮೂರ್ತಿ ಹೇಳಿದರು.

ದಾವಣಗೆರೆ ಮಹಾನಗರ ಪಾಲಿಕೆ ಒತ್ತುವರಿಯಾಗಿದ್ದ ಪಿ.ಬಿ.ರಸ್ತೆಯನ್ನು ತೆರವುಗಳಿಸಿ ಕ್ರಮ ಕೈಗೊಂಡಿದೆ. ಚಿತ್ರದುರ್ಗ ನಗರಸಭೆ ಅಧಿಕಾರಿಗಳು ದಾವಣಗೆರೆಗೆ ಭೇಟಿ ನೀಡಿ, ಮಾಹಿತಿ ಪಡೆದುಕೊಳ್ಳುವಂತೆ ವಿಧಾನಪರಿಷತ್ ಶಾಸಕ ಕೆ.ಎಸ್.ನವೀನ್ ಸಲಹೆ ನೀಡಿದರು.

1905ರಲ್ಲಿ ನಗರದ ಮುಖ್ಯರಸ್ತೆಯನ್ನು ರಾಷ್ಟ್ರೀಯ ಹೆದ್ದಾರಿ ಎಂದು ಗುರುತಿಸಲಾಗಿತ್ತು. ತದನಂತರ ಹೊಸ ರಾಷ್ಟ್ರೀಯ ಹೆದ್ದಾರಿ ನಿರ್ಮಾಣದ ನಂತರ ಇದನ್ನು ರಾಜ್ಯ ಹೆದ್ದಾರಿಯನ್ನಾಗಿ ಪರಿವರ್ತಿಸಲಾಗಿದೆ. ಆದರೆ ಹೆದ್ದಾರಿ ಅಗಲದ ಅಳೆತೆಯನ್ನು ಕಡಿಮೆ ಮಾಡಿಲ್ಲ.  ಒತ್ತುವರಿಯಾದ ರಸ್ತೆಯನ್ನು ಅಧಿಕಾರಿಗಳು ಗುರುತಿಸಬೇಕು. ಇದರೊಂದಿಗೆ ನಗರದ ರಾಜಕಾಲುವೆ ಮೇಲಿನ ನಿರ್ಮಾಣಗಳ ತೆರವಿಗೂ ಮುಂದಾಗಬೇಕು ಎಂದು ಶಾಸಕ ಕೆ.ಸಿ.ವಿರೇಂದ್ರ ಪಪ್ಪಿ ಈ ಸಂದರ್ಭದಲ್ಲಿ ಹೇಳಿದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...