Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಬಳ್ಳಾರಿ ಮಹಾನಗರ ಪಾಲಿಕೆ : ಆಸ್ತಿ ತೆರಿಗೆ ಪಾವತಿಸಿ

---Advertisement---

 

ಬಳ್ಳಾರಿ,ಮಾ.27 : ಬಳ್ಳಾರಿ ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಬರುವ ಆಸ್ತಿ ಮಾಲೀಕರು ನಿಗದಿತ ಅವಧಿಯಲ್ಲಿ ಆಸ್ತಿ ತೆರಿಗೆ ಪಾವತಿಸಬೇಕು ಎಂದು ಪಾಲಿಕೆಯ ಆಯುಕ್ತರು ತಿಳಿಸಿದ್ದಾರೆ.

ಕರ್ನಾಟಕ ಪೌರನಿಗಮಗಳ ಅಧಿನಿಯಮ 1976 ನಿಯಮ 108, 109 ಮತ್ತು 109ಎ ನಿಯಮಗಳಿಗೆ ತಿದ್ದುಪಡಿ ಮಾಡಿ ಆಯಾ ವರ್ಷಕ್ಕೆ ಉಪನೊಂದಣಾಧಿಕಾರಿ, ಉಪನೊಂದಣಿ ಕಚೇರಿ ಇವರ ಮಾರುಕಟ್ಟೆ ಮಾರ್ಗಸೂಚಿ ಬೆಲೆಗಳು ಪರಿಷ್ಕರಣೆ ಆಗದಿದ್ದಲ್ಲಿ ಕನಿಷ್ಠ ಶೇ.3  ಕ್ಕಿಂತ ಕಡಿಮೆ ಇಲ್ಲದಂತೆ ಮತ್ತು ಗರಿಷ್ಠ ಶೇ.5 ಕ್ಕಿಂತ ಹೆಚ್ಚಿಗೆ ಮೀರದಂತೆ ಆಸ್ತಿ ತೆರಿಗೆಯನ್ನು ವಿಧಿಸಿ ವಸೂಲಿ ಮಾಡಲು ತಿದ್ದುಪಡಿ ಮಾಡಲಾಗಿದೆ.

2025-26ನೇ ಸಾಲಿಗೆ ಮಾರುಕಟ್ಟೆ ಮೌಲ್ಯದ ಮಾರ್ಗಸೂಚಿ ಬೆಲೆ ಪರಿಷ್ಕರಣೆ ಮಾಡಿರುವುದಿಲ್ಲ ಎಂದು ತಿಳಿಸಿರುವ ಪ್ರಯುಕ್ತ 2025 ರ ಏ.01 ರಿಂದ 2026 ರ ಮಾ.31 ರ ವರೆಗೆ 2024-25ನೇ ಸಾಲಿನ ಆಸ್ತಿ ತೆರಿಗೆಯ ಮೇಲೆ ಶೇ.3 ರಷ್ಟು ನಿಗದಿಪಡಿಸಿ ಹೆಚ್ಚಿಸಿ, 2025-26ನೇ ಸಾಲಿಗೆ ಆಸ್ತಿ ತೆರಿಗೆಯನ್ನು ನಿಗದಿಪಡಿಸಿಕೊಳ್ಳಲು ಮಹಾಪೌರರ ಅಧ್ಯಕ್ಷತೆಯಲ್ಲಿ ಜರುಗಿದ ಸಾಮಾನ್ಯ ಸಭೆಯಲ್ಲಿ ಹಾಜರಿದ್ದು ಸದಸ್ಯರ ಸರ್ವಾನುಮತದಿಂದ ಒಪ್ಪಿ ತೀರ್ಮಾನಿಸಲಾಗಿದೆ.

ಹಾಗಾಗಿ ಸಾರ್ವಜನಿಕರು ನಿಗದಿತ ಅವಧಿಯಲ್ಲಿ ಆಸ್ತಿ ತೆರಿಗೆಯನ್ನು ಪಾವತಿಸಿ ಬಳ್ಳಾರಿ ಮಹಾನಗರ ಪಾಲಿಕೆಯ ಅಭಿವೃದ್ಧಿಗೆ ಸಹಕರಿಸಬೇಕು ಎಂದು ಆಯುಕ್ತರು ಕೋರಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...