ಬೆಳಗಾವಿ: ಸುವರ್ಣಸೌಧದಲ್ಲಿ ನಾಳೆಯಿಂದ 10 ದಿನಗಳ ಕಾಲ ಅಧಿವೇಶನ ಆರಂಭವಾಗಲಿದೆ. ಈ ಹಿನ್ನೆಲೆ ಶಾಸಕಿ ಅಂಜಲಿ ನಿಂಬಾಳ್ಕರ್ ಪಾದಯಾತ್ರೆ ಮಾಡಲು ನಿರ್ಧರಿಸಿದ್ದಾರೆ. ಈ ಮೂಲಕ ಬಿಜೆಪಿಗೆ ಬಿಸಿ ಮುಟ್ಟಿಸಲು ಸಿದ್ಧತೆ ನಡೆಸಿಕೊಂಡಿದ್ದಾರೆ.
ತಮ್ಮ ಕ್ಷೇತ್ರದ ಅಭಿವೃದ್ಧಿಗೆ ಬಿಜೆಪಿ ಸರ್ಕಾರದಿಂದ ಸಹಕಾರ ಸಿಗದೆ ಇರುವುದನ್ನು ಖಂಡಿಸಿ ಪಾದಯಾತ್ರೆ ಮಾಡಲು ರೆಡಿಯಾಗಿದ್ದಾರೆ. ಖಾನಾಂಪುರ ಕ್ಷೇತ್ರದ ಅಭಿವೃದ್ಧಿಗೆ ಸಂಬಂಧಿಸಿದಂತೆ ಅಂಜಲಿ ಲಿಂಬಾಳ್ಕರ್ ಹಲವಾರು ಬೇಡಿಕೆಗಳನ್ನ ಇಟ್ಟಿದ್ದಾರೆ. ಆ ಬೇಡಿಕೆಗಳನ್ನ ಈಡೇರಿಸುವಂತೆ ಪಾದಯಾತ್ರೆ ಹಮ್ಮಿಕೊಂಡಿದ್ದಾರೆ.
ಖಾನಾಂಪುರದಿಂದ ಸುವರ್ಣಸೌಧದವರೆಗೆ ಈ ಪಾದಯಾತ್ರೆ ಮಾಡಲಿದ್ದಾರೆ. ಒಟ್ಟು 40 ಕಿ.ಮೀ ಪಾದಯಾತ್ರೆ ನಡೆಯಲಿದೆ. ಅಂಜಲಿ ಲಿಂಬಾಳ್ಕರ್ ಗೆ ಶಾಸಕರು, ರೈತರು, ಕಾರ್ಮಿಕರು, ವಿದ್ಯಾರ್ಥಿಗಳು ಕೂಡ ಸಾಥ್ ನೀಡಲಿದ್ದಾರೆ. ಶಾಸಕಿಗೆ ಜನರಿಂದ ಹೂಮಳೆ ಸುರಿಸುವ ಮೂಲಕ ಪಾದಯಾತ್ರೆಗೆ ಚಾಲನೆ ಸಿಕ್ಕಿದೆ.