Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ದೆಹಲಿಗೆ ತೆರಳುವ ಮುನ್ನ ಸಿಎಂ – ಡಿಸಿಎಂ ಭೇಟಿ ; ಏನೆಲ್ಲಾ ಚರ್ಚೆ ಆಯ್ತು.?

---Advertisement---

ಬೆಂಗಳೂರು; ರಾಜ್ಯ ರಾಜಕಾರಣದಲ್ಲಿ ಸದ್ಯಕ್ಕೆ ಹನಿಟ್ರ್ಯಾಪ್ ಪ್ರಜರಣದ್ದೆ ಜೋರು ಸದ್ದು. ಅದರಲ್ಲೂ ಸಚಿವ ಕೆ.ಎನ್.ರಾಜಣ್ಣ ಹೆಸರು ಕೇಳಿ ಬಂದಿದೆ. ಈ ಸಂಬಂಧ ಸಾಕಷ್ಟು ಚರ್ಚೆಗಳು ನಡೆಯುತ್ತಿವೆ. ಹೈಕಮಾಂಡ್ ವರೆಗೂ ಈ ಸುದ್ದಿ ತಲುಪಿದೆ. ಸಚಿವ ಸತೀಶ್ ಜಾರಕಿಹೊಳಿ ಅವರು ಕೂಡ ಹೈಕಮಾಂಡ್ ನಾಯಕರನ್ನ ಭೇಟಿಯಾಗಿ ಬಂದಿದ್ದಾರೆ. ಹನಿಟ್ರ್ಯಾಪ್ ವಿಚಾರ ಕೂಡ ತಿಳಿಸಿರಬಹುದು ಎನ್ನಲಾಗಿದೆ. ಈ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಕೂಡ ದೆಹಲಿಗೆ ಹಿರಡಲು ರೆಡಿಯಾಗಿದ್ದಾರೆ. ಆದರೆ ಅದಕ್ಕೂ ಮುನ್ನ ಸಭೆಯೊಂದನ್ನ ನಡೆಸಿದ್ದಾರೆ‌.

ಇಂದು ಸಿಎಂ ಕಾವೇರಿ ನಿವಾಸದಲ್ಲಿ ಉಭಯ ನಾಯಕರು ಮಾತುಕತೆ ನಡೆಸಿದ್ದಾರೆ. ರಾಜ್ಯದಲ್ಲಿ ಖಾಲಿ ಇರುವ ವಿಧಾನ ಪರಿಷತ್ ಸ್ಥಾನದ ಭರ್ತಿ ವಿಚಾರವನ್ನು ಹೈಕಮಾಂಡ್ ನಾಯಕರ ಮುಂದೆ ಇಡಬೇಕು ಎಂಬ ವಿಚಾರದ ಬಗ್ಗೆಯೂ ಚರ್ಚೆಯಾಗಿದೆ. ಏಪ್ರಿಲ್ 2 ರಂದು ದೆಹಲಿಗೆ ಪ್ರವಾಸ ಮಾಡಲಿದ್ದಾರೆ. ದೆಹಲಿಗೆ ಹೋಗುವುದಕ್ಕೂ ಮುನ್ನವೇ ರಾಜಣ್ಣ ಹನಿಟ್ರ್ಯಾಪ್ ಹಾಗೂ ರಾಜೇಂದ್ರ ಸುಪಾರಿ ಬಗ್ಗೆ ಗೃಹ ಸಚಿವ ಪರಮೇಶ್ವರ್ ಬಳಿ ಮಾಹಿತಿ ಪಡೆದುಕೊಂಡಿದ್ದಾರೆ ಎನ್ನಲಾಗಿದೆ.

ಕಾಂಗ್ರೆಸ್ ಪಕ್ಷವೇ ಆಡಳಿತ ನಡೆಸುತ್ತಿರುವಾಗಲೇ ಹನಿಟ್ರ್ಯಾಪ್ ಪ್ರಕರಣ ನಡೆದಿರುವುದು ಆಶ್ಚರ್ಯಕ್ಕೆ ಕಾರಣವಾಗಿದೆ. ಹೀಗಾಗಿ ಈ ಪ್ರಕರಣ ಸಾಕಷ್ಟು ಸದ್ದು ಮಾಡುತ್ತಿದೆ. ಹೈಕಮಾಂಡ್ ನಾಯಕರನ್ನು ಭೇಟಿಯಾಗಿ ಚರ್ಚೆ ನಡೆಸಿದ ಬಳಿಕ, ಏನಾಗಲಿದೆ ಎಂಬುದನ್ನು ನೋಡಬೇಕಿದೆ. ಸದ್ಯಕ್ಕೆ ದೂರು ದಾಖಲಿಸಿಕೊಂಡಿರುವ ಗೃಹ ಸಚಿವರು ತನಿಖೆ ನಡೆಸುತ್ತಿದ್ದಾರೆ. ತನಿಖಾಧಿಕಾರಿಗಳು ಮಾಹಿತಿಯನ್ನು ಕಲೆ ಹಾಕುತ್ತಿದ್ದು, ನೀಲಿ ರಾಣಿ ಯಾರೆಂಬ ಹುಡುಕಾಟ ನಡೆಸುತ್ತಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment