Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಯುವಕರು ರಂಗಭೂಮಿ ಬಗ್ಗೆ ಹೆಚ್ಚಿನ ಆಸಕ್ತಿ ತೋರಬೇಕು : ಆರ್.ಶೇಷಣ್ಣಕುಮಾರ್

---Advertisement---

ವರದಿ ಮತ್ತು ಫೋಟೋ ಕೃಪೆ                    ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 31 : ಮೊಬೈಲ್, ಟಿ.ವಿ.ಹಾವಳಿಯಿಂದ ಯುವ ಪೀಳಿಗೆ ಒಳ್ಳೆಯ ವಿಚಾರಗಳನ್ನು ಕೇಳುವ, ಪಾಲಿಸುವ ಪರಿಪಾಠ ಕಳೆದುಕೊಂಡಿದೆ ಎಂದು ಹಿರಿಯ ರಂಗ ಕಲಾವಿದ ಹಾಗೂ ಸಂಘಟಕ ಆರ್.ಶೇಷಣ್ಣಕುಮಾರ್ ಬೇಸರ ವ್ಯಕ್ತಪಡಿಸಿದರು.

ಬಹುಮುಖಿ ಕಲಾ ಕೇಂದ್ರ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಇವುಗಳ ಸಹಯೋಗದೊಂದಿಗೆ ವಿಶ್ವ ರಂಗಭೂಮಿ ದಿನಾಚರಣೆ ಅಂಗವಾಗಿ ತಾಲ್ಲೂಕಿನ ಮಾಳೇನಹಳ್ಳಿಯಲ್ಲಿ ಇತ್ತೀಚೆಗೆ ನಡೆದ ರಂಗ ಗೀತೆಗಳ ಗಾಯನ, ರಂಗ ಸನ್ಮಾನ, ನಾಟಕ ಪ್ರದರ್ಶನ ಉದ್ಗಾಟಿಸಿ ಮಾತನಾಡಿದರು.

ಗ್ರಾಮೀಣ ಭಾಗಗಳಲ್ಲಿ ವಿಶ್ವ ರಂಗಭೂಮಿ ದಿನಾಚರಣೆಯನ್ನು ಆಚರಿಸುತ್ತಿರುವುದು ಅತ್ಯಂತ ಸಂತೋಷದ ಸಂಗತಿ. ನೈತಿಕ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಲು ರಂಗಭೂಮಿ, ಸಾಹಿತ್ಯ, ಸಂಸ್ಕøತಿ, ಕಲೆ, ತುಂಬಾ ಪ್ರಯೋಜನಕಾರಿಯಾಗಲಿದೆ. ಅದಕ್ಕಾಗಿ ಯುವಕರು ರಂಗಭೂಮಿ ಬಗ್ಗೆ ಹೆಚ್ಚಿನ ಆಸಕ್ತಿ ತೋರಬೇಕಿದೆ. ತಂತ್ರಜ್ಞಾನಗಳ ಹೆಚ್ಚು ಬಳಕೆಯಿಂದ ಮಾನವ ಪರಸ್ಪರ ಸಂಬಂಧಗಳನ್ನು ಕಳೆದುಕೊಳ್ಳುತ್ತಿದ್ದಾನೆ. ಜಾಗತಿಕರಣದ ಯುಗದಲ್ಲಿ ಯಾವ ದಿಕ್ಕಿನಕಡೆ ಸಾಗುತ್ತಿದ್ದೇವೆನ್ನುವುದೇ ಅರ್ಥವಾಗುತ್ತಿಲ್ಲ ಎಂದು ಹೇಳಿದರು.

ಹಿರಿಯ ರಂಗಕರ್ಮಿ ಎಂ.ಸಿ.ಮಂಜುನಾಥ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮಾಳೆನಹಳ್ಳಿ ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ತಿಪ್ಪೇರುದ್ರಪ್ಪ, ಮುಖಂಡ ಮಲ್ಲಿಕಾರ್ಜುನ ಇವರುಗಳು ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದರು.
ಹಿರಿಯ ರಂಗಭೂಮಿ ಕಲಾವಿದ ಆಯಿತೋಳು ವಿರುಪಾಕ್ಷಪ್ಪನವರನ್ನು ಸನ್ಮಾನಿಸಲಾಯಿತು. ವಿರುಪಾಕ್ಷಪ್ಪ, ಎಸ್.ಚನ್ನಬಸಪ್ಪ, ಆಯಿತೋಳು ಮಾರುತಿ ಇವರುಗಳು ರಂಗಗೀತೆಗಳನ್ನು ಹಾಡಿದರು.

ಲತಾ ಪಾಟೀಲ್ ಹಾವೇರಿ, ಎಸ್.ಚನ್ನಬಸಪ್ಪ, ಬಹುಮುಖಿ ಕಲಾ ಕೇಂದ್ರದ ಕಾರ್ಯದರ್ಶಿ ಟಿ.ಮಧು, ಗುರುಕಿರಣ್, ರಾಘವೇಂದ್ರ, ಶ್ರೀನಿವಾಸ್‍ಮೂರ್ತಿ ಹಾಗೂ ಸಂಗಡಿಗರು ಬಿ.ತಿಪ್ಪೇರುದ್ರಪ್ಪ ರಚಿಸಿರುವ ಕೋಟು ಹಾಸ್ಯ ನಾಟಕ ಪ್ರದರ್ಶಿಸಿದರು.

 

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...