ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಸುಮಾರು ಏಳು ತಿಂಗಳ ಕಾಲ ಜೈಲು ವಾಸ ಅನುಭವಿಸಿದ್ದ ದರ್ಶನ್ ಅಂಡ್ ಗ್ಯಾಂಗ್ ಬಳಿಕ ಜಾಮೀನಿನ ಮೇಲೆ ಹೊರ ಬಂದಿದೆ. ಅದರಲ್ಲೂ ಒಂದಷ್ಟು ಮಂದಿಗೆ ಕೆಳಹಂತದ ನ್ಯಾಯಾಲಯದಲ್ಲಿಯೇ ಜಾಮೀನು ಸಿಕ್ಕಿತ್ತು. ಇದೀಗ ರಾಜ್ಯ ಪೊಲೀಸ್ ಇಲಾಖೆ ಜಾಮೀನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದಾರೆ. ಇಂದು ಜಾಮೀನು ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ವಿಚಾರಣೆಯನ್ನು ಏಪ್ರಿಲ್ 22ಕ್ಕೆ ಮುಂದೂಡಿಕೆ ಮಾಡಿದೆ.

ರಾಜ್ಯದ ಪರವಾಗಿ ವಕೀಲ ಸಿದ್ದಾರ್ಥ್ ಲೂಥ್ರಾ ಅವರು ಅರ್ಜಿಯ ಉಲ್ಲೇಖ ಮಾಡಿದರು. ಬಳಿಕ ನ್ಯಾಯಮೂರ್ತಿಗಳು ಪ್ರಕರಣದ ವಿಚಾರಣೆಯನ್ನು ಏಪ್ರಿಲ್ 22ಕ್ಕೆ ಮುಂದೂಡಿಕೆ ಮಾಡಿದ್ದಾರೆ. ಮುಂದಿನ ವಿಚಾರಣೆ ಏಪ್ರಿಲ್ 22ಕ್ಕೆ ನಡೆಯಲಿದ್ದು, ದರ್ಶನ್ ಪರವಾಗಿ ಇಲ್ಲಿಯೂ ವಕೀಲ ನಾಗೇಶ್ ಅವರೇ ವಕಾಲತ್ತು ವಹಿಸಲಿದ್ದಾರೆ. ಸುಪ್ರೀಂಕೋರ್ಟ್ ನಲ್ಲಿ ಕೇಸ್ ಏನಾಗಬಹುದು..? ಜಾಮೀನು ಏನಾದರೂ ರದ್ದಾಗಲಿದೆಯಾ ಎಂಬ ಪ್ರಶ್ನೆಗಳನ್ನು ಜನರನ್ನು ಕಾಡುತ್ತಿವೆ.

ನಟ ದರ್ಶನ್ ಬೆನ್ನು ನೋವಿನ ಸಮಸ್ಯೆಯಿಂದ ಬಳಲುತ್ತಿದ್ದರು. ಹೀಗಾಗಿ ಮೊದಲೇ ಜಾಮೀನು ಪಡೆದಿದ್ದರು. ಸದ್ಯ ಅರ್ಧದಲ್ಲಿಯೇ ನಿಂತು ಹೋಗಿದ್ದ ಡೆವಿಲ್ ಸಿನಿಮಾದ ಶೂಟಿಂಗ್ ನಲ್ಲಿ ಮತ್ತೆ ಭಾಗಿಯಾಗಿದ್ದಾರೆ. ರಾಜಸ್ಥಾನದಲ್ಲಿ ಶೂಟಿಂಗ್ ಗೆಂದು ತೆರಳಿದ್ದಾರೆ. ಡೆವಿಲ್ ಸಿನಿಮಾಗಾಗಿ ಸಾಕಷ್ಟು ಮಂದಿ ಕಾಯುತ್ತಿದ್ದಾರೆ. ಇದೇ ರೇಣುಕಾಸ್ವಾಮಿ ಕೊಲೆ ಪ್ರಕರಣದಿಂದ ಕಳೆದ ವರ್ಷ ದರ್ಶನ್ ಅವರ ಸಿನಿಮಾ ರಿಲೀಸ್ ಆಗಿರಲಿಲ್ಲ. ಈ ವರ್ಷ ದರ್ಶನ್ ಅವರ ಅಭಿಮಾನಿಗಳಿಗೆ ಬಹಳ ನಿರೀಕ್ಷೆ ಇದೆ. ಡೆವಿಲ್ ಸಿನಿಮಾ ತೆರೆಗೆ ಬರಲಿದೆ ಎಂಬ ಕಾತುರ ಇದ್ದು, ನೋಡುವುದಕ್ಕಾಗಿ ಕಾಯುತ್ತಿದ್ದಾರೆ.

