ಬಳ್ಳಾರಿ,ಏ.04 : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ಬಳ್ಳಾರಿ ಇವರ ಸಂಯುಕ್ತಾಶ್ರಯದಲ್ಲಿ ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆ ಕಾರ್ಯಕ್ರಮಗಳನ್ನು ಏ.05 ಮತ್ತು 06 ರಂದು ನಗರದ ಜಿಲ್ಲಾ ಕ್ರೀಡಾಂಗಣ ಮೈದಾನದಲ್ಲಿ ಆಯೋಜಿಸಲಾಗಿದೆ.

ಏ.05 ರಂದು ಬೆಳಿಗ್ಗೆ 10 ಗಂಟೆಗೆ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆ ಕಾರ್ಯಕ್ರಮಗಳ ಉದ್ಘಾಟನೆ ನಡೆಯಲಿದೆ. ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು ಹಾಗೂ ಬಳ್ಳಾರಿ ಉಸ್ತುವಾರಿ ಸಚಿವ ಬಿ.ಝಡ್.ಜಮೀರ್ ಅಹ್ಮದ್ ಖಾನ್ ಅವರು ಕಾರ್ಯಕ್ರಮ ಉದ್ಘಾಟಿಸುವರು. ಸಂಸದರಾದ ಈ.ತುಕಾರಾಂ ಅವರು ಕ್ರೀಡಾ ಧ್ವಜರೋಹಣ ನೆರವೇರಿಸುವರು.

ಬಳ್ಳಾರಿ ಗ್ರಾಮೀಣ ಶಾಸಕ ಬಿ.ನಾಗೇಂದ್ರ ಅವರು ಅಧ್ಯಕ್ಷತೆ ವಹಿಸುವರು. ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷ ಹಾಗೂ ಶಾಸಕ ಜೆ.ಎನ್ ಗಣೇಶ್ ಅವರು ಕ್ರೀಡಾ ಜ್ಯೋತಿ ಸ್ವೀಕಾರ ಮಾಡುವರು. ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಅವರು ಪ್ರತಿಜ್ಞಾ ವಿಧಿ ಭೋದಿಸುವರು. ರಾಜ್ಯ ಸರ್ಕಾರಿ ನೌಕರರ ಸಂಘದ ಉಪಾಧ್ಯಕ್ಷರು ಹಾಗೂ ಜಿಲ್ಲಾಧ್ಯಕ್ಷರಾದ ಎಂ.ಎ.ಆಸೀಫ್ ಅವರು ಪ್ರಾಸ್ತಾವಿಕವಾಗಿ ಮಾತನಾಡುವರು.
ಸಂಸದರಾದ ಕೆ.ರಾಜಶೇಖರ ಬಸವರಾಜ ಹಿಟ್ನಾಳ್, ರಾಜ್ಯಸಭೆ ಸಂಸದರಾದ ಡಾ.ಸೈಯದ್ ನಾಸೀರ್ ಹುಸೇನ್, ವಿಧಾನಪರಿಷತ್ ಶಾಸಕರಾದ ಡಾ.ಚಂದ್ರಶೇಖರ್ ಬಿ.ಪಾಟೀಲ, ಶಾಸಕರಾದ ಬಿ.ಎಂ.ನಾಗರಾಜ, ಈ.ಅನ್ನಪೂರ್ಣ, ವಿಧಾನಪರಿಷತ್ ಶಾಸಕರಾದ ಶಶೀಲ್ ನಮೋಶಿ, ವೈ.ಎಂ.ಸತೀಶ್, ಡಾ.ಬಾಬು ಜಗಜೀವನ್‌ರಾಮ್ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಮುಂಡರಗಿ ನಾಗರಾಜ, ಮಹಾನಗರ ಪಾಲಿಕೆಯ ಮಹಾಪೌರರಾದ ಮುಲ್ಲಂಗಿ ನಂದೀಶ್, ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಜೆ.ಎಸ್.ಆಂಜನೇಯಲು ಸೇರಿದಂತೆ ಇತರರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.
ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ, ಬಳ್ಳಾರಿ ವಲಯ ಪೊಲೀಸ್ ಮಹಾನಿರೀಕ್ಷಕರಾದ ಬಿ.ಎಸ್ ಲೋಕೇಶ್ ಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಶೋಭಾರಾಣಿ.ವಿ.ಜೆ., ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹ್ಯಾರೀಸ್ ಸುಮೈರ್, ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್.ಎನ್, ಬಳ್ಳಾರಿ ವೃತ್ತದ ಲೋಕೋಪಯೋಗಿ ಇಲಾಖೆಯ ಅಧೀಕ್ಷಕ ಅಭಿಯಂತರಾದ ಅಮೀನ್ ಮುಕ್ತಾರ್ ಅಹ್ಮದ್, ಜಿಲ್ಲಾ ಹೆಚ್ಚುವರಿ ಪೋಲಿಸ್ ಅಧೀಕ್ಷಕರಾದ ಕೆ.ಪಿ.ರವಿಕುಮಾರ್, ಎಸ್.ನವೀನ್ ಕುಮಾರ್, ಸಹಾಯಕ ಆಯುಕ್ತ ಪಿ.ಪ್ರಮೋದ್, ಅಬಕಾರಿ ಉಪ ಆಯುಕ್ತ ಮಂಜುನಾಥ.ಎನ್., ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರಾದ ಕೆ.ಗ್ರೇಸಿ ಸೇರಿದಂತೆ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಮಟ್ಟದ ಪದಾಧಿಕಾರಿಗಳು, ವಿವಿಧ ತಾಲ್ಲೂಕುಗಳ ಅಧ್ಯಕ್ಷರು, ಜಿಲ್ಲೆಯ ಎಲ್ಲಾ ಶಾಖೆಯ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿ ಸದಸ್ಯರು ಹಾಗೂ ಎಲ್ಲಾ ಇಲಾಖೆಯ ವೃಂದ ಸಂಘಗಳ ಅಧ್ಯಕ್ಷರು, ಪದಾಧಿಕಾರಿಗಳು, ಜಿಲ್ಲೆಯ ಅಧಿಕಾರಿಗಳು, ನೌಕರರ ಬಾಂಧವರು ಹಾಗೂ ಇತರರು ಉಪಸ್ಥಿತರಿರುವರು ಎಂದು ಪ್ರಕಟಣೆ ತಿಳಿಸಿದೆ.


