ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್, ಮೊ : 98862 95817

ಸುದ್ದಿಒನ್, ಚಿತ್ರದುರ್ಗ. ಏ.04 : ರಾಜ್ಯ ವ್ಯಾಪ್ತಿ ಬಿಜೆಪಿ ಕರೆ ಕೊಟ್ಟಿರುವ ಹಿನ್ನಲೆಯಲ್ಲಿ ಭ್ರಷ್ಟ ಕಾಂಗ್ರೆಸ್ ಸರ್ಕಾರದ ಬೆಲೆ ಏರಿಕೆ ವಿರುದ್ದ ಬಿಜೆಪಿ ಜಿಲ್ಲಾ ಘಟಕದವತಿಯಿಂದ ಪ್ರತಿಭಟನೆಯನ್ನು ಏ. 5ರ ಶನಿವಾರ ಬೆಳಿಗ್ಗೆ 11ಕ್ಕೆ ಚಿತ್ರದುರ್ಗದ ಓನಕೆ ಒಬವ್ವ ವೃತ್ತದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷರಾದ ಎ.ಮುರಳಿ ತಿಳಿಸಿದ್ದಾರೆ.

ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಬಂದಾಗಿನಿಂದ ಬೆಲೆ ಏರಿಕೆ ನಿರಂತರವಾಗಿದೆ. ಪೆಟ್ರೋಲ್ ಡೀಸೆಲ್, ಸ್ಟಾಂಪ್ ಶುಲ್ಕ, ಹಾಲಿನ ದರ, ಮೆಟ್ರೋದರ ನೀರಿನ ತೆರಿಗೆ ವಿದ್ಯುತ್ ದರ ಬಸ್ ಪ್ರಯಾಣ ದರ ಹೆಚ್ಚಳ ಮಾಡಿ ಬಡವರಿಗೆ ಬರೆ ಎಳೆಯುವ ಭ್ರಷ್ಟ ಕಾಂಗ್ರೆಸ್ ಸರ್ಕಾರದ ಬೆಲೆ ಏರಿಕೆ ವಿರುದ್ದ ಬಿಜೆಪಿ ಜಿಲ್ಲಾ ಘಟಕದವತಿಯಿಂದ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ.
ಈ ಪ್ರತಿಭಟನೆಯಲ್ಲಿ ಮಾಜಿ ಉಪ ಮುಖ್ಯಮಂತ್ರಿಗಳು, ಸಂಸದರಾದ ಗೋವಿಂದ ಕಾರಜೋಳ, ಶಾಸಕರಾದ ಎಂ.ಚಂದ್ರಪ್ಪ, ವಿಧಾನ ಪರಿಷತ್ ಸದಸ್ಯರಾದ ಕೆ.ಎಸ್.ನವೀನ್, ಮಾಜಿ ಶಾಸಕರಾದ ಜಿ.ಎಚ್.ತಿಪ್ಪಾರೆಡ್ಡಿ, ನೇರ‍್ಲುಗುಂಟೆ ತಿಪ್ಪೇಸ್ವಾಮಿ, ಎಸ್.ಕೆ.ಬಸವರಾಜನ್, ಬಿಜೆಪಿ ಮುಖಂಡರಾದ ಎಸ್.ಲಿಂಗಮೂರ್ತಿ, ಎನ್.ಆರ್.ಲಕ್ಷ್ಮೀಕಾಂತ ಸೇರಿದಂತೆ ಬಿಜೆಪಿಯ ಎಲ್ಲಾ ಮಂಡಲ ಹಾಗೂ ಜಿಲ್ಲಾ ಪದಾಧಿಕಾರಿಗಳು ಕಾರ್ಯಕರ್ತರು, ಭಾಗವಹಿಸಲಿದ್ದಾರೆ ಎಂದು ಜಿಲ್ಲಾಧ್ಯಕ್ಷರಾದ ಮುರಳಿ ತಿಳಿಸಿದ್ದಾರೆ.


