Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಅಣ್ಣಾಮಲೈ ರಾಜೀನಾಮೆ ; ಕಾರಣವೇನು..?

---Advertisement---

ಅಣ್ಣಾಮಲೈ ಅಂದ್ರೆನೇ ಅದೆಷ್ಟೋ ಜನ ಗಢಗಢ ಅಂತ ನಡುಗುತ್ತಾ ಇದ್ದರು. ಕರ್ನಾಟಕದ ರಿಯಲ್ ಸಿಂಗಂ ಆಗಿ ಘರ್ಜಿಸಿದ್ದರು. ಆದರೆ ಬಿಜೆಪಿಗೆ ಸೇರಿ ರಾಜಕೀಯ ಪ್ರವೇಶಿಸಿದರು. ತಮಿಳುನಾಡಿದ ಬಿಜೆಪಿ ರಾಜ್ಯಾಧ್ಯಕ್ಷರು ಆಗಿದ್ದರು. ಇದೀಗ ಆ ಸ್ಥಾನಕ್ಕೂ ರಾಜೀನಾಮೆ ನೀಡಿದ್ದಾರೆ.

ಬಿಜೆಪಿಯ ಹೈಕಮಾಂಡ್ ಸೂಚನೆಯ ಮೇರೆಗೆ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಕಳೆದ ಕೆಲವು ದಿನಗಳಿಂದಾನೂ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಅಣ್ಣಾಮಲೈ ರಾಜೀನಾಮೆ ನೀಡುವ ಸಾಧ್ಯತೆ ಇದೆ ಎಂಬ ಸುದ್ದಿಯೇ ಹರಿದಾಡುತ್ತಿತ್ತು. ಕಳೆದ ಎರಡು ದಿನಗಳಿಂದ ರಾಜೀನಾಮೆ ನೀಡುವುದು ಪಕ್ಕ ಎಂಬ ವಿಚಾರ ಹಬ್ಬಿತ್ತು. ಇದೀಗ ಅದು ನಿಜವಾಗಿದೆ. ಹೈಕಮಾಂಡ್ ಸೂಚನೆ ನೀಡಿದ ಬೆನ್ನಲ್ಲೇ ರಾಜೀನಾಮೆಯನ್ನು ನೀಡಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೊಂದಿಗೆ ನಡೆದ ಸಭೆಯಲ್ಲಿ ಅಣ್ಣಾಮಲೈ ಅವರಿಗೆ ನಿರ್ಧಾರವನ್ನು ತಿಳಿಸಲಾಗಿತ್ತು ಎನ್ನಲಾಗಿದೆ. ಅವರ ಸೂಚನೆ ಮೇರೆಗೆ ತಮಿಳುನಾಡಿನ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದಿಂದ ಅಣ್ಣಾಮಲೈ ಕೆಳಗೆ ಇಳಿದಿದ್ದಾರೆ.

ರಾಜೀನಾಮೆ ನೀಡಿದರ ಬಗ್ಗೆ ಮಾತನಾಡಿದ ಅಣ್ಣಾಮಲೈ, ಈಗ ನಾನು ತಮಿಳುನಾಡಿನ ಬಿಜೆಪಿ ರಾಜ್ಯಾಧ್ಯಕ್ಷನಲ್ಲ. ಆದರೆ ತಮಿಳುನಾಡಿನಲ್ಲಿ ಜೀವ ಕೊಟ್ಟು ಬಿಜೆಪಿ ಪಕ್ಷವನ್ನು ಬೆಳೆಸಿದ್ದೇನೆ. ಮುಂದಿನ ರಾಜ್ಯಾಧ್ಯಕ್ಷ ಯಾರಾಗಬೇಕು ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ನಾನು ಯಾರನ್ನು ಸೂಚಿಸಿಲ್ಲ. ಸದ್ಯ ಬಿಜೆಪಿ ರಾಜ್ಯಾಧ್ಯಕ್ಷ ರೇಸ್ ನಲ್ಲಂತೂ ನಾನಿಲ್ಲ. ಈ ಮಣ್ಣನ್ನ ಬಿಟ್ಟು ನಾನು ಎಲ್ಲಿಗೂ ಹೋಗಲ್ಲ. ಯಾಕಂದ್ರೆ ಈ ಪಕ್ಷದಲ್ಲಿ ಎಲ್ಲಾ ಒಳ್ಳೆಯವರೇ ಇದ್ದಾರೆ‌. ಈ ಪಕ್ಷಕ್ಕೆ ಸಾಕಷ್ಟು ಜನ ಉಸಿರು ಕೊಟ್ಟಿದ್ದಾರೆ. ಬಿಜೆಪಿಯ ನೂತನ ರಾಜ್ಯಾಧ್ಯಕ್ಷರ ಆಯ್ಕೆ ಮಾಡುವಾಗ ಇನ್ನಷ್ಟು ಮಾತನಾಡುತ್ತೇನೆ ಎಂದಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment