ಚಿತ್ರದುರ್ಗ. ಎಪ್ರಿಲ್.05: ಚಿತ್ರದುರ್ಗ ನಗರಸಭೆ ಅಧ್ಯಕ್ಷರ ನೇತೃತ್ವದ ಕೌನ್ಸಿಲ್ ಸಭೆ 2025-26ನೇ ಸಾಲಿನ ಮೂಲ ಆಸ್ತಿ ತೆರಿಗೆ ಮೇಲೆ ವಾಸಯೋಗ್ಯ ಮತ್ತು ಖಾಲಿ ನಿವೇಶನಗಳಿಗೆ ಶೇ.3 ರಷ್ಟು ಹಾಗೂ ವಾಣಿಜ್ಯ ಮತ್ತು ಕೈಗಾರಿಕೆಗಳಿಗೆ ಶೇ.4 ರಷ್ಟು ಆಸ್ತಿ ತೆರಿಗೆಯನ್ನು ಹೆಚ್ಚಿಸಿ ಅನುಮೋದನೆ ನೀಡಿದೆ. ಈ ತೆರಿಗೆಯನ್ನು ಏಪ್ರಿಲ್ 1 ರಿಂದ ಜಾರಿ ಮಾಡಲಾಗಿದೆ.
ನಗರಸಭೆ ವ್ಯಾಪ್ತಿಯಲ್ಲಿ ಆಸ್ತಿ ಹೊಂದಿರುವ ಸಾರ್ವಜನಿಕರು ಏಪ್ರಿಲ್ 30ರ ಒಳಗೆ ಆಸ್ತಿ ತೆರಿಗೆ ಪಾವತಿಸಿದರೆ, ಆಸ್ತಿ ತೆರಿಗೆ ಪಾವತಿ ಮೇಲೆ ಶೇ.5 ರಷ್ಟು ರಿಯಾಯಿತಿ ದೊರೆಯಲಿದೆ. ಈ ಅವಕಾಶವನ್ನು ಬಳಿಸಿಕೊಂಡು ಆಸ್ತಿ ತೆರಿಗೆ ಪಾವತಿಸಿ, ನಗರದ ಅಭಿವೃದ್ಧಿಗೆ ಸಹಕರಿಸುವಂತೆ ಸಾರ್ವಜನಿಕರಲ್ಲಿ ಪೌರಾಯುಕ್ತರು ಕೋರಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

















