ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 08 :ದ್ವಿತೀಯ ಪಿಯು ಫಲಿತಾಂಶದಲ್ಲಿ ಚಿತ್ರದುರ್ಗದ ಎಸ್. ಆರ್. ಎಸ್. ಪಿಯು ಕಾಲೇಜು ಜಿಲ್ಲೆಯ ಮೊದಲ ಮೂರು ಸ್ಥಾನಗಳನ್ನು ತನ್ನ ಮುಡಿಗೇರಿಸಿಕೊಂಡಿದೆ.
ಕಾಲೇಜಿನ ವಿದ್ಯಾರ್ಥಿನಿ ಕುಮಾರಿ. ಇಶಿತಾ ಬಿ.ಎನ್ 600 ಕ್ಕೆ 592 ಅಂಕಗಳನ್ನು ಪಡೆದು ಜಿಲ್ಲೆಗೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ.
ಕ್ರಮವಾಗಿ ಸಾಕ್ಷಿ ಎಸ್. ಬಿ., ವಿಜೇತ ರೆಡ್ಡಿ ಬಿ.ಸಿ. ಮತ್ತು ರಿಯಾ ಎಸ್. ಕೊಠಾರಿ 589, 589 ಹಾಗೂ 588 ಅಂಕಗಳನ್ನು ಪಡೆದು ಜಿಲ್ಲೆಗೆ ದ್ವಿತೀಯ ಹಾಗೂ ತೃತೀಯ ಸ್ಥಾನವನ್ನು ಪಡೆದುಕೊಳ್ಳುವುದರ ಮೂಲಕ ಜಿಲ್ಲೆಯ ಮೊದಲ ಮೂರು ಸ್ಥಾನಗಳನ್ನು ಎಸ್. ಆರ್. ಎಸ್ ಕಾಲೇಜಿನ ವಿದ್ಯಾರ್ಥಿಗಳೆ ಪಡೆದುಕೊಂಡಿದ್ದಾರೆ.
ವಿಷಯವಾರು 53 ವಿದ್ಯಾರ್ಥಿಗಳು 100ಕ್ಕೆ 100 ಅಂಕಗಳನ್ನು ಪಡೆದುಕೊಂಡಿದ್ದಾರೆ. ಕಾಲೇಜಿನ 444 ವಿದ್ಯಾರ್ಥಿಗಳು ಶೇ. 90 ಕ್ಕೂ ಅಧಿಕ ಅಂಕಗಳನ್ನು ಪಡೆದುಕೊಳ್ಳುವುದರ ಮೂಲಕ ಜಿಲ್ಲೆಗೆ ಹಾಗೂ ಕಾಲೇಜಿಗೆ ಕೀರ್ತಿ ತಂದಿದ್ದಾರೆ.
ಸಾಧಕ ವಿದ್ಯಾರ್ಥಿಗಳನ್ನು ಸಂಸ್ಥೆಯ ಅಧ್ಯಕ್ಷರಾದ ಬಿ.ಎ. ಲಿಂಗಾರೆಡ್ಡಿ, ಕಾರ್ಯದರ್ಶಿಗಳಾದ ಶ್ರೀಮತಿ. ಸುಜಾತ ಲಿಂಗಾರೆಡ್ಡಿ, ಉಪಾಧ್ಯಕ್ಷರು, ಆಢಳಿತಾಧಿಕಾರಿಗಳು, ಪ್ರಾಂಶುಪಾಲರು ಹಾಗೂ ಬೋಧಕ-ಬೋಧಕೇತರ ಸಿಬ್ಬಂದಿ ಅಭಿನಂದಿಸಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.












