Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

500 ಕೋಟಿ ಕಿಕ್ ಬ್ಯಾಕ್ ಪ್ರಕರಣದಲ್ಲಿ ಸಿದ್ದರಾಮಯ್ಯ ಅವರಿಗೆ ಸಂಕಷ್ಟ..!

---Advertisement---

ಮೂಡಾ ಹಗರಣಕ್ಕೆ‌ ಸಂಬಂಧಿಸಿದಂತೆ ಇಡಿಯ ತೂಗುಗತ್ತಿಯಲ್ಲಿಯೇ ಸಿಲುಕಿರುವ ಸಿಎಂ ಸಿದ್ದರಾಮಯ್ಯ ಅವರಿಗೆ ಇದೀಗ ಸಿದ್ದರಾಮಯ್ಯ ವಿರುದ್ಧ ಮತ್ತೊಂದು ಆರೋಪ ಕೇಳಿ ಬಂದಿದೆ. ಅದು 500 ಕೋಟಿ ಕಿಕ್ ಬ್ಯಾಕ್ ಆರೋಪವದು. ಈ ಸಂಬಂಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಬೇಕೆಂದು ಸಾಮಾಜಿಕ ಕಾರ್ಯಕರ್ತ ರಾಮಮೂರ್ತಿ ಗೌಡ ಅವರು ರಾಜ್ಯಪಾಲರಾದ ಥಾವರ್ ಚಂದ್ ಅವರಿಗೆ ಮನವಿ ಮಾಡಿದ್ದಾರೆ.

ಅಷ್ಟಕ್ಕೂ ಏನಿದು ಪ್ರಕರಣ, 2015ರಲ್ಲಿ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದಂತ ಸಂದರ್ಭದಲ್ಲಿ ಎಂಟು ಗಣಿ ಗುತ್ತಿಗೆ ನವೀಕರಣ ಮಾಡಿದ್ದರು. ಹರಾಜು ಹಾಕುವ ಬದಲಿಗೆ ನವೀಕರಣ ಮಾಡಿದ್ದರು. ಗಣಿ ಕಂಪನಿಗಳ ಲೈಸೆನ್ಸ್ ಕೂಡ ನವೀಕರಣ ಮಾಡಲಾಗಿತ್ತು. ಆ ಲೈಸೆನ್ಸ್ ಎಲ್ಲಾ ಸಾಕಷ್ಟು ವರ್ಷಗಳಿಂದ ಬಾಕಿ ಇದ್ದವೇ ಆಗಿದ್ದವು. ಆ ಲೈಸೆನ್ಸ್ ಗಳನ್ನ ಅಂದಿನ ಸರ್ಕಾರದಲ್ಲಿ ನವೀಕರಣ ಮಾಡಿಕೊಡಲಾಗಿತ್ತು. ಹಾಗೇ ಅಂದು ನವೀಕರಣ ಮಾಡಿದ್ದಕ್ಕೆ ಕಿಕ್ ಬ್ಯಾಕ್ ಆರೋಪ ಅವರ ಮೇಲೆ ಬಂದಿದೆ.

 

ಸುಮಾರು 500 ಕೋಟಿ ರೂಪಾಯಿ ಕಿಕ್ ಬ್ಯಾಕ್ ಪಡೆದಿದ್ದಾರೆಂದು ರಾಮಮೂರ್ತಿ ಗೌಡ ಆರೋಪ ಮಾಡಿದ್ದಾರೆ. ಅಷ್ಟೇ ಅಲ್ಲ ಸಿದ್ದರಾಮಯ್ಯ ಅವರ ನಿರ್ಧಾರದಿಂದ ಸರ್ಕಾರಕ್ಕೆ ಐದು ಸಾವಿರ ಕೋಟಿ ನಷ್ಟವಾಗಿದೆ ಎಂದು ದೂರಿನಲ್ಲಿ ಉಲ್ಲೇಖ ಮಾಡಲಾಗಿದೆ. ಭ್ರಷ್ಟಾಚಾರ ನಿಗ್ರಹ ಕಾಯ್ದೆಯಡಿ ಸಿದ್ದರಾಮಯ್ಯ ಅವರನ್ನು ಪ್ರಾಸಿಕ್ಯೂಷನ್ ಗೆ ಒಳಪಡಿಸಲು ಅನುಮತಿ ನೀಡಿ ಎಂದು ದೂರಿನಲ್ಲಿ ಮನವಿ ಮಾಡಲಾಗಿದೆ. ಸಿಎಂ ಸಿದ್ದರಾಮಯ್ಯ ವಿರುದ್ಧ ಭ್ರಷ್ಟಾಚಾರ ಪ್ರತಿಬಂಧಕ ಕಾಯ್ದೆ 1988ರ ಸೆಕ್ಷನ್ 7, 9, 11, 12 ಮತ್ತು 15 ಅಡಿ ಪ್ರಾಸಿಕ್ಯೂಚನ್​ಗೆ ಅನುಮತಿ ಕೊಡಿ ಎಂದು ಕೇಳಲಾಗಿದೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...