ಬೆಂಗಳೂರು; ಜಾತಿ ಗಣತಿ ವರದಿ ಬಗ್ಗೆ ಆಗಾಗ ಚರ್ಚೆಯಾಗುತ್ತಲೇ ಇದೆ. ಅದರಲ್ಲೂ ಜಾತಿ ಗಣತಿ ವರದಿಗೆ ಪರ ವಿರೋಧವೂ ಇತ್ತು. ಇದೀಗ ಜಾತಿ ಗಣತಿ ವರದಿ ಜಾರಿಗೆ ದಿನಾಂಕ ಕೂಡ ಫಿಕ್ಸ್ ಆಗಿದೆ. ಶುಕ್ರವಾರ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಈ ಜಾತಿ ಗಣತಿ ವರದಿ ಮಂಡನೆಯಾಗಲಿದೆ ಎನ್ನಲಾಗಿದೆ. ಪ್ರಮುಖವಾಗಿ ಹಿಂದುಳಿದ ವರ್ಗಗಳ ಸಮಾಜದವರು ಈ ಜಾತಿ ಗಣತಿ ವರದಿ ಸ್ವೀಕರಿಸಿ, ಜಾರಿ ಮಾಡುವಂತೆ ಆಗ್ರಹಿಸುತ್ತಿದ್ದಾರೆ. ಗಣತಿ ವರದಿ ಸ್ವೀಕರಿಸಿ, ಜಾರಿ ಮಾಡುವಂತೆ ಆಗ್ರಹಿಸುತ್ತಿದ್ದಾತೆ.
ಮತ್ತೊಂದೆಡೆ ಲಿಂಗಾಯತ, ಒಕ್ಕಲಿಗ ಸಮುದಾಯಗಳು ಈ ಸಮೀಕ್ಷೆ ಅವೈಜ್ಞಾನಿಕವಾಗಿದ್ದು, ವರದಿ ಸ್ವೀಕರಿಸಬಾರದು ಎಂದು ವಿರೋಧಿಸುತ್ತಿವೆ. ಇದೇ ಕಾರಣದಿಂದಲೇ ಜಾತಿ ಗಣತಿ ವರದಿ ಜಾರಿಗೆ ಸರ್ಕಾರ ಹಿಂದೇಟು ಹಾಕುತ್ತಲೇ ಇತ್ತು. ಆದರೆ ಸಿದ್ದರಾಮಯ್ಯ ಅವರು ಭರವಸೆ ನೀಡಿರುವುದರಿಂದ ಈ ವರದಿ ಜಾರಿಯಾಗುವ ದಿನಗಳು ದಿನಗಳು ಹತ್ತಿರದಲ್ಲಿವೆ ಎಂದೇ ಹೇಳಲಾಗುತ್ತಿದೆ.
ಇನ್ನು ಜಾತಿ ಗಣತಿ ವರದಿಯ ಬಗ್ಗೆ ಇತ್ತೀಚೆಗಷ್ಟೇ ಸಿದ್ದರಾಮಯ್ಯ ಅವರು ಮಾತಮಾಡಿ, ಈ ಗಣತಿ ವೈಜ್ಞಾನಿಕವಾಗಿಯೇ ನಡೆಯುತ್ತದೆ. ಅದನ್ನು ನಮ್ಮ ಸರ್ಕಾರ ಖಂಡಿತ ಜಾರಿ ಮಾಡುತ್ತದೆ. ಇದರಲ್ಲಿ ಯಾವುದೇ ಸಂಶಯ ಬೇಡ. ಸಮಾಜದ ಎಲ್ಲಾ ವರ್ಗಗಳ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಸ್ಥಿತಿಗತಿ ತಿಳಿಯಲು ಅನುಕೂಲಕರವಾಗಿದೆ. ಅದರಂತೆ ಸರ್ಕಾರದ ಕಾರ್ಯಕ್ರಮಗಳನ್ನು ರೂಪಿಸಲು ಸಹಕಾರಿಯಾಗಿದೆ. ತಮಿಳುನಾಡು ಮಾದರಿಯಲ್ಲಿ ಮೀಸಲಾತಿಗೆ ಒತ್ತಾಯ ಕೇಳಿ ಬಂದಿದೆ. ಸಮಾಜದಲ್ಲಿ ಅಸಮಾನತೆ ಹೋಗಬೇಕು. ಜಾತಿ ವ್ಯವಸ್ಥೆಯಿಂದ ನಿರ್ಮಾಣವಾಗಿರುವ ಅಸಮಾನತೆಯಿಂದ ಬಹುಸಂಖ್ಯಾತ ಜನ ಅವಕಾಶ ವಂಚಿತರಾಗಿದ್ದಾರೆ. ಎಲ್ಲರಿಗೂ ಸಮಾನ ಅವಕಾಶ ನೀಡಬೇಕು ಎಂದು ಸಿಎಂ ಸಿದ್ದರಾಮಯ್ಯ ಅವರು ಹೇಳಿದ್ದರು.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.










