Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಬಿಜೆಪಿಯಿಂದ ‘ಜನಾಕ್ರೋಶ’.. ಜೆಡಿಎಸ್ ನಿಂದ ‘ಸಾಕಪ್ಪ ಸಾಕು ಕಾಂಗ್ರೆಸ್ ಸರ್ಕಾರ’ ; ಹೇಗಿದೆ ನಿಖಿಲ್ ನೇತೃತ್ವದ ಪ್ರತಿಭಟನೆ..?

---Advertisement---

ಬೆಲೆ ಏರಿಕೆ ಹೆಚ್ಚಳದ ವಿರುದ್ಧ ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಬೇರೆ ಬೇರೆಯಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ. ಈಗಾಗಲೇ ಬಿಜೆಪಿಯಿಂದ ಜನಾಕ್ರೋಶ ಯಾತ್ರೆ ಶುರುವಾಗಿದ್ದು, ಇದೀಗ ಜೆಡಿಎಸ್ ನಿಂದಾನೂ ಸಪರೇಟ್ ಪ್ರತಿಭಟನೆ ಆರಂಭವಾಗಿದೆ. ‘ಸಾಕಪ್ಪ ಸಾಕು ಕಾಂಗ್ರೆಸ್ ಸರ್ಕಾರ’ ಎಂಬ ವಾಕ್ಯದಡಿ ಪ್ರತಿಭಟನೆ ಆರಂಭ ಮಾಡಿದೆ. ಇದರ ನೇತೃತ್ವವನ್ನು ಯುವ ಜನತಾದಳದ ರಾಜ್ಯಾಧ್ಯಕ್ಷ ವಹಿಸಿಕೊಂಡಿದ್ದಾರೆ.

ಅಷ್ಟೇ ಅಲ್ಲ ಸಾಕಪ್ಪ ಸಾಕು ಅನ್ನೋ ವೆಬ್ಸೈಟ್ ಕೂಡ ಆರಂಭಿಸಿದ್ದಾರೆ. ಈ ವೆಬ್ ಮಾಡಿರುವ ಉದ್ದೇಶವೇನೆಂದರೆ ರಾಜ್ಯದ ಮೂಲೆ ಮೂಲೆಯಿಂದ ಯಾರೂ ಬೇಕಾದರೂ ರಿಜಿಸ್ಟರ್ ಆಗುವ ಮೂಲಕ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಬಹುದು. ಈ ಬಗ್ಗೆ ಇಂದ ಸುದ್ದಿಗೋಷ್ಟಿಯಲ್ಲಿ ಮಾಹಿತಿ ನೀಡಿದ ನಿಖಿಲ್ ಕುಮಾರಸ್ವಾಮಿ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಆಡಳಿತಕ್ಕೆ ಬಂದಾಗಿನಿಂದಲೂ ಜನರ ಮೇಲೆ ಬೆಲೆ ಏರಿಕೆ ಬರೆ ಎಳೆಯುತ್ತಿದೆ. ಆರ್ಥಿಕವಾಗಿ ರಾಜ್ಯವನ್ನು ವಿಕೋಪಕ್ಕೆ ತಳ್ಳಿರುವ ಕಾಂಗ್ರೆಸ್ ಸರ್ಕಾರವೂ ರಾಜ್ಯದಲ್ಲಿ ಆರ್ಥಿಕ ತುರ್ತು ಪರಿಸ್ಥಿತಿ ಸೃಷ್ಟಿಸಿದೆ.

ಜನರು ಇದರಿಂದ ರೋಸಿ ಹೋಗಿದ್ದಾರೆ. ಇನ್ನೆಷ್ಟು ದಿನ ಇದನ್ನು ಸಹಿಸಿಕೊಳ್ಳಬೇಕು, ಅದಕ್ಕೆ ನಾವೂ ಹೋರಾಟಕ್ಕೆ ಧುಮುಕ್ಕಿದ್ದೇವೆ. ಸಾಕಪ್ಪ ಸಾಕು ಕಾಂಗ್ರೆಸ್ ಸರ್ಕಾರ ಸಾಕು ಎಂಬ ಹೋರಾಟಕ್ಕೆ ಧುಮುಕ್ಕಿದ್ದೇವೆ ಎಂಬ ಅಭಿಯಾನ ಶುರು ಮಾಡಿದ್ದೇವೆ. ಏಪ್ರಿಲ್ 12ರಂದು ಫ್ರೀಡಂ ಪಾರ್ಕ್ ನಲ್ಲಿ ಜೆಡಿಎಸ್ ಬೃಹತ್ ಪ್ರತಿಭಟನೆ ಮಾಡಲಿದೆ. ಕುಮಾರಸ್ವಾಮಿ ಅವರು ಕೂಡ ಪ್ರತಿಭಟನೆಯಲ್ಲಿ ಭಾಗಿಯಾಗ್ತಾರೆ. ಜೆಡಿಎಸ್ ನಿಂದ ನಿರಂತರವಾಗಿ ಈ ಪ್ರತಿಭಟನೆ ನಡೆಯುತ್ತೆ ಎಂದು ನಿಖಿಲ್ ಕುಮಾರಸ್ವಾಮಿ ಅವರು ಮಾಹಿತಿ ನೀಡಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment