Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಏಪ್ರಿಲ್ 15ರಂದು ಜಿಲ್ಲಾಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕøತಿಕ ಸ್ಪರ್ಧೆಗಳು ಉದ್ಘಾಟನಾ ಸಮಾರಂಭ

---Advertisement---

 

ಚಿತ್ರದುರ್ಗ. ಏ.10:

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಜಿಲ್ಲಾ ಶಾಖೆ ವತಿಯಿಂದ ಇದೇ ಏಪ್ರಿಲ್ 15ರಂದು ಬೆಳಿಗ್ಗೆ 10.30ಕ್ಕೆ ಚಿತ್ರದುರ್ಗ ನಗರದ ವೀರ ವನಿತೆ ಒನಕೆ ಓಬವ್ವ ಕ್ರೀಡಾಂಗಣದಲ್ಲಿ ಚಿತ್ರದುರ್ಗ ಜಿಲ್ಲಾ ಮಟ್ಟದ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕøತಿಕ ಸ್ಪರ್ಧೆಗಳು ಉದ್ಘಾಟನಾ ಸಮಾರಂಭ ಹಮ್ಮಿಕೊಳ್ಳಲಾಗಿದೆ.

 

ಕಾರ್ಯಕ್ರಮದ ಉದ್ಘಾಟನೆಯನ್ನು ಯೋಜನಾ ಮತ್ತು ಸಾಂಖ್ಯಿಕ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ. ಸುಧಾಕರ್ ನೆರವೇರಿಸುವರು. ಸಂಸದ ಗೋವಿಂದ ಎಂ ಕಾರಜೋಳ ಘನ ಉಪಸ್ಥಿತಿ ವಹಿಸುವರು. ಚಿತ್ರದುರ್ಗ ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ಅವರು ಅಧ್ಯಕ್ಷತೆ ವಹಿಸುವರು. ವಿಧಾನ ಪರಿಷತ್ ಶಾಸಕ ಕೆ.ಎಸ್.ನವೀನ್ ಕ್ರೀಡಾಜ್ಯೋತಿ ಸ್ವೀಕಾರ ಮಾಡುವರು. ಮುಖ್ಯ ಅತಿಥಿಗಳಾಗಿ ಹೊಸದುರ್ಗ ಶಾಸಕರು ಹಾಗೂ ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ ಅಧ್ಯಕ್ಷ ಬಿ.ಜಿ. ಗೋವಿಂದಪ್ಪ, ಚಳ್ಳಕೆರೆ ಶಾಸಕರು ಹಾಗೂ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಅಧ್ಯಕ್ಷ ಟಿ. ರಘುಮೂರ್ತಿ, ಮೊಳಕಾಲ್ಮೂರು ಶಾಸಕ ಎನ್.ವೈ. ಗೋಪಾಲಕೃಷ್ಣ, ಹೊಳಲ್ಕೆರೆ ಶಾಸಕ ಡಾ. ಎಂ. ಚಂದ್ರಪ್ಪ, ವಿಧಾನಪರಿಷತ್ ಸದಸ್ಯರುಗಳಾದ ಚಿದಾನಂದ ಎಂ. ಗೌಡ, ಡಿ.ಟಿ. ಶ್ರೀನಿವಾಸ್, ಕರ್ನಾಟಕ ದ್ರಾಕ್ಷಾರಸ ಮಂಡಳಿ ಅಧ್ಯಕ್ಷ ಡಾ. ಬಿ. ಯೋಗೇಶ್ ಬಾಬು, ಕರ್ನಾಟಕ ಆದಿ ಜಾಂಬವ ಅಭಿವೃದ್ಧಿ ನಿಗಮದ ಅಧ್ಯಕ್ಷ ಜಿ.ಎಸ್. ಮಂಜುನಾಥ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಂ.ಕೆ. ತಾಜ್‍ಪೀರ್, ನಗರಸಭೆ ಅಧ್ಯಕ್ಷೆ ಸುಮಿತಾ ರಾಘವೇಂದ್ರ, ಜಿಲ್ಲಾ ಗ್ಯಾರಂಟಿ ಯೋಜನಾ ಪ್ರಾಧಿಕಾರ ಅಧ್ಯಕ್ಷ ಆರ್.ಶಿವಣ್ಣ ಭಾಗವಹಿಸುವರು.

 

ವಿಶೇಷ ಆಹ್ವಾನಿತರಾಗಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಅಮ್ಲಾನ್ ಆದಿತ್ಯ ಬಿಸ್ವಾಸ್, ಜಿಲ್ಲಾಧಿಕಾರಿ ಟಿ.ವೆಂಕಟೇಶ್, ಜಿ.ಪಂ ಸಿಇಒ ಎಸ್.ಜೆ.ಸೋಮಶೇಖರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ, ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಉಪವಿಭಾಗಾಧಿಕಾರಿ ಮಹಿಬೂಬ್ ಜಿಲಾನಿ ಭಾಗವಹಿಸುವರು ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಮಾಲತೇಶ್ ಮುದ್ದಜ್ಜಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕಿ ಸುಚೇತಾ ಎಂ.ನೆಲವಗಿ ತಿಳಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...