Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

2028ಕ್ಕೆ ಜೆಡಿಎಸ್ ಅಧಿಕಾರ ; ಕಾಂಗ್ರೆಸ್ ವಿರುದ್ಧ ಹರಿಹಾಯ್ದ ನಿಖಿಲ್ ಕುಮಾರಸ್ವಾಮಿ ಹೇಳಿದ್ದೇನು..?

---Advertisement---

ಬೆಂಗಳೂರು; ಬೆಲೆ ಏರಿಕೆ ಸಂಬಂಧ ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳು ಪ್ರತ್ಯೇಕವಾಗಿ ಪ್ರತಿಭಟನೆ ನಡೆಸುತ್ತಿವೆ. ಬಿಜೆಪಿ ಜನಾಕ್ರೋಶ ಯಾತ್ರೆ ನಡೆಸಿದ್ರೆ, ಇತ್ತ ಜೆಡಿಎಸ್ ಸಾಕಪ್ಪ ಸಾಕು ಕಾಂಗ್ರೆಸ್ ಸರ್ಕಾರ ಎಂದು ಪ್ರತಿಭಟನೆಗೆ ಇಳಿದಿದೆ. ಈ ಹೋರಾಟವನ್ನು ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ ನಡೆಸುತ್ತಿದ್ದು, ಇಂದಿನ ಪ್ರತಿಭಟನೆ ವೇಳೆ 2028ಕ್ಕೆ ಜೆಡಿಎಸ್ ಅಧಿಕಾರಕ್ಕೆ ಎಂದು ಅಬ್ಬರಿಸಿದ್ದಾರೆ.

ಸಾಕಪ್ಪ ಸಾಕು ಇದು ಜೆಡಿಎಸ್ ಪಕ್ಷದ ಸ್ಲೋಗನ್ ಅಲ್ಲ. ರಾಜ್ಯದ ಏಳೂವರೆ ಕೋಟೊ ಜನರ ಮನದಾಳದ ಮಾತನ್ನು ನಾವೂ ಹೇಳಿದ್ದೇವೆ. ನಮ್ಮ ಈ ಹೋರಾಟ ಒಂದು ದಿನದ ಹೋರಾಟ ಅಲ್ಲ. ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿ ಇರುವವರೆಗೂ ನಿರಂತರವಾಗಿ ಹೋರಾಟ ಮಾಡುತ್ತೇವೆ. ರಾಜ್ಯದಲ್ಲಿ ಅಭಿವೃದ್ಧಿ ಅನ್ನೋದು ಸಂಪೂರ್ಣ ಸ್ಥಗಿತವಾಗಿದೆ. ಕಾಂಗ್ರೆಸ್ ಪಕ್ಷ ಎರಡು ವರ್ಷಗಳ ಅಧಿಕಾರಾವಧಿಯಲ್ಲಿ ಜನತೆಗೆ ಸಂಕಷ್ಟವನ್ನೇ ತಂದೊಡ್ಡಿದೆ. ಬರ್ತ್ ಸರ್ಟಿಫಿಕೇಟ್ ನಿಂದ ಡೆತ್ ಸರ್ಟಿಫಿಕೇಟ್ ತನಕವೂ ದರ ಹೆಚ್ಚಳ ಮಾಡಿದೆ.

ಸಿಎಂ ಆರ್ಥಿಕ ಸಲಹೆಗಾರರೆ ಕರ್ನಾಟಕ ಭ್ರಷ್ಟಾಚಾರದಲ್ಲಿ ಮೊದಲೇ ಸ್ಥಾನದಲ್ಲಿದೆ ಎಂದು ಹೇಳಿದ್ದಾರೆ. ಬಸವರಾಜ ರಾಯರೆಡ್ಡಿ ಅವರೇ ನಮಗೊಂದು ಅವಕಾಶ ಕೊಡಿ, ಭ್ರಷ್ಟಾಚಾರವನ್ನು ಸಂಪೂರ್ಣವಾಗಿ ತೊಡೆದು ಹಾಕ್ತೀವಿ. ಸ್ವಪಕ್ಷದ ಸಚಿವರ ಕುಟುಂಬಸ್ಥರು ಕಮಿಷನ್ ಏಜೆಂಟ್ ಆಗಿ ಕೆಲಸ ಮಾಡ್ತಿದ್ದಾರೆ. ಕಾಂಗ್ರೆಸ್ ಎರಡೇ ವರ್ಷಕ್ಕೆ ಎರಡು ಲಕ್ಷ ಕೋಟಿ ಸಾಲ ಮಾಡಿದ್ದೀರಿ. ಜನರೇ ಈಗ ನಿಮ್ಮ ಗ್ಯಾರಂಟಿಯನ್ನ ಬೇಡ ಅಂತಿದ್ದಾರೆ. ಜನ 2028ಕ್ಕೆ ಜೆಡಿಎಸ್ ಪಕ್ಷವನ್ನು ಸ್ವತಂತ್ರವಾಗಿ ತರುತ್ತಾರೆ ಎಂಬ ಆತ್ಮವಿಶ್ವಾಸ ನನ್ನಲ್ಲಿದೆ ಎಂದು ನಿಖಿಲ್ ಕುಮಾರಸ್ವಾಮಿ ತಿಳಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment