Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಜಾತಿಗಣತಿ ವರದಿಗೆ ಶಾಮನೂರು ಶಿವಶಂಕರಪ್ಪ ವಿರೋಧ ; ಡಿಕೆ ಶಿವಕುಮಾರ್ ಏನಂದ್ರು..?

---Advertisement---

ಬೆಂಗಳೂರು; ಜಾತಿ ಗಣತಿ ವರದಿಗೆ ಮೊದಲಿನಿಂದಾನೂ ಪರ – ವಿರೋಧ ಇದ್ದದ್ದೆ. ಇದೀಗ ವರದಿಯೂ ಸಚಿವ ಸಂಪುಟದಲ್ಲಿ ಮಂಡನೆಯಾಗಿದೆ. ಶಾಮನೂರು ಶಿವಶಂಕರಪ್ಪ ಅವರು ವರದಿಯನ್ನು ವಿರೋಧಿಸಿದ್ದರ ಬಗ್ಗೆ ಡಿಸಿಎಂ ಡಿಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ವೀರಶೈವ ಮಹಾಸಭಾದವರು ಅವರ ಸಮಾಜ ರಕ್ಷಣೆ ಮಾಡಿಕೊಳ್ಳಲು ಹೊರಟಿದ್ದು, ಅವರನ್ನು ನಾವೂ ಯಾಕೆ ಟೀಕೆ ಮಾಡಬೇಕು. ಪ್ರಜಾಪ್ರಭುತ್ವ, ಸಂವಿಧಾನದನ ಪ್ರಕಾರವಾಗಿ ಅವರುಗಳು ತಮ್ಮ ನಿಲುವನ್ನು ಪ್ರತಿಪಾದನೆ ಮಾಡಲಿ ಎಂದಿದ್ದಾರೆ.

ಮುಖ್ಯಮಂತ್ರಿಗಳು ಜಾತಿ ಗಣತಿ ವರದಿಯ ಬಗ್ಗೆ ಚರ್ಚೆ ನಡೆಸಲು ಜನಪ್ರತಿನಿಧಿಗಳಿಗೂ ವಿಧಾನಸಭೆಯಲ್ಲಿ ಅವಕಾಶ ನೀಡಲಾಗುವುದು ಎಂದು ಹೇಳಿದ್ದಾರೆ. ಇದಕ್ಕಿಂತ ಮುಕ್ತವಾಗಿ ಇನ್ನೇನು ಮಾಡಲು ಸಾಧ್ಯ ಎಂದಿದ್ದಾರೆ. ಇದೇ ವೇಳೆ ಚುನಾವಣೆ ಪೂರ್ವದಲ್ಲಿ ಒಕ್ಕಲಿಗ ಸಮುದಾಯದ ಬೆನ್ನಿಗೆ ನಿಲ್ಲಬೇಕು ಎಂದು ಈ ಹಿಂದೆ ನೀಡಿದ್ದ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್, ಅದು ಬೇರೆ ವಿಚಾರ. ಈಗ ನಾನು ಕಾಂಗ್ರೆಸ್ ಪಕ್ಷದ ಅಧ್ಯಕ್ಷನಾಗಿದ್ದೇನೆ. ಎಲ್ಲರಿಗೂ ನ್ಯಾಯ ಕೊಡಿಸುವುದು ನನ್ನ ಕರ್ತವ್ಯ. ಧ್ವನಜ, ಧ್ಯೇಯ, ಉದ್ದೇಶ,‌ ಸಂಕಲ್ಪ ಎಲ್ಲವೂ.

 

ಸದ್ಯಕ್ಕೆ ಜಾತಿ ಗಣತಿ ವರದಿ ಬಹಿರಂಗವಾಗಿದೆ. ಅದರಲ್ಲಿ ಮುಸ್ಲಿಮರೇ ಹೆಚ್ಚಿನ ಜನಸಂಖ್ಯೆಯನ್ನು ಹೊಂದಿದ್ದಾರೆ. ಲಿಂಗಾಯತರಲ್ಲಿ ವೀರಶೈವ ಪ್ರತ್ಯೇಕವಾಗಿಲ್ಲದೆ ಹೋಗಿದ್ದರೆ ಅವರೇ ಜಾತಿ ಗಣತಿಯಲ್ಲಿ ನಂಬರ್ ಒನ್ ಸ್ಥಾನದಲ್ಲಿ ಇರುತ್ತಿದ್ದರು. ಲಿಂಗಾಯತರು 66 ಲಕ್ಷ ಇದ್ದು, ವೀರಶೈವ 10 ಲಕ್ಷ ಇದ್ದಾರೆ. ಎರಡನ್ನು ಸೇರಿಸಿದ್ದರೆ 76 ಲಕ್ಷ ಜನಸಂಖ್ಯೆ ಆಗ್ತಾ ಇದ್ದರು. ಮುಸ್ಲಿಮರು ಸದ್ಯಕ್ಕೆ 75 ಲಕ್ಷ ಮಂದಿ ಇದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment