ಚಿಕ್ಕಮಗಳೂರು: ತೀವ್ರ ಜ್ವರದಿಂದ ಬಳಲುತ್ತಿದ್ದ ಪೂರ್ಣಚಂದ್ರ ತೇಜಸ್ವಿ ಅವರ ಪತ್ನಿ ರಾಜೇಶ್ವರಿ ತೇಜಸ್ವಿ, ಚಿಕಿತ್ಸೆ ಫಲಕಾರಿಯಾಗದೆ ಇಂದು ನಿಧನರಾಗಿದ್ದಾರೆ.
ಕಳೆದ ಕೆಲವು ದಿನಗಳಿಂದ ರಾಜೇಶ್ವರಿ ತೇಜಸ್ವಿ ಅವರಿಗೆ ಅನಾರೋಗ್ಯ ಕಾಡುತ್ತಿತ್ತು. ಜ್ವರದಿಂದ ಬಳಲುತ್ತಿದ್ದ ರಾಜೇಶ್ವರಿ ಅವರನ್ನ ಚಿಕ್ಕಮಗಳೂರಿನಿಂದ ಬೆಂಗಳೂರಿಗೆ ಕರೆತರಲಾಗಿತ್ತು. ಅವರನ್ನ ಖಾಸಗಿ ಆಸ್ಪತ್ರೆಯಲ್ಲಿ ಅಡ್ಮಿಟ್ ಮಾಡಲಾಗಿತ್ತು. ಆದ್ರೆ ಚಿಕಿತ್ಸೆ ಫಲಕಾರಿಯಾಗಿಲ್ಲ.
ರಾಜೇಶ್ವರಿ ತೇಜಸ್ವಿ ಅವರ ಪತಿ ಪೂರ್ಣಚಂದ್ರ ತೇಜಸ್ವಿ ಅವರ ನಿಧನದ ಬಳಿಕ ಚಿಕ್ಕಮಗಳೂರಿನ ಮೂಡಿಗೆರೆಯ ಹ್ಯಾಂಡ್ ಪೋಸ್ಟ್ ತೋಟದ ಮನೆಯಲ್ಲಿ ವಾಸ ಮಾಡುತ್ತಿದ್ದರು. ಆದ್ರೆ ಜ್ವರದಿಂದಾಗಿ ಇಹಲೋಕ ತ್ಯಜಿಸಿದ್ದಾರೆ.