Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ತೋಟಪ್ಪ ಉತ್ತಂಗಿಯವರಿಗೆ ವರ್ಷದ ಸಾಧಕ ಪ್ರಶಸ್ತಿ

---Advertisement---

ಸುದ್ದಿಒನ್, ಚಿತ್ರದುರ್ಗ, ಏ. 15 – ನಗರದ ಶ್ರೀ ಜಗದ್ಗುರು ಮುರುಘರಾಜೇಂದ್ರ ಬೃಹನ್ಮಠದ ಜಮುರಾ ಕಲಾಲೋಕದ ಸಂಗೀತ ಕಲಾವಿದರಾದ ತೋಟಪ್ಪ ಉತ್ತಂಗಿಯವರು ಬೆಂಗಳೂರು ಬಸವ ಸಮಿತಿಯ 2025ನೇ ಸಾಲಿನ ವರ್ಷದ ಸಾಧಕ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ ಎಂದು ಅಧ್ಯಕ್ಷ ಅರವಿಂದ ಜತ್ತಿ ಅವರು ತಿಳಿಸಿದ್ದಾರೆ.

ತೋಟಪ್ಪ ಅವರು ಕಳೆದ 35 ವರ್ಷಗಳಿಂದ ವಚನ ಗಾಯಕರಾಗಿ, ವಚನ ಸಂಗೀತ, ರೂಪಕ ಮತ್ತು ನಾಟಕಗಳ ಮೂಲಕ ನಾಡಿನೆಲ್ಲೆಡೆ ಬಸವಪ್ರಜ್ಞೆಯನ್ನು ಹರಡುತ್ತ ಬಂದಿದ್ದಾರೆ. ಗದುಗಿನ ವೀರೇಶ್ವರ ಪುಣ್ಯಾಶ್ರಮದಲ್ಲಿ ಪಂ|| ಪುಟ್ಟರಾಜ ಗವಾಯಿಗಳ ಶಿಷ್ಯರಾಗಿ ಹಿಂದೂಸ್ಥಾನಿ ಸಂಗೀತ ಅಭ್ಯಾಸ ಮಾಡಿ, ವಿದ್ವತ್ ಪದವಿ ಪಡೆದಿದ್ದಾರೆ. ಸಂಗೀತ ನಿರ್ದೇಶಕರಾಗಿ, ಬಸವಾದಿ ಶರಣರು ರಚಿಸಿದ ವಚನಗಳಿಗೆ ರಾಗ ಸಂಯೋಜನೆ ಮಾಡಿದ್ದಾರೆ. ಮುಂಬೈ, ದೆಹಲಿ, ಊಟಿ, ಪೂನಾ, ಗೋವಾ, ಹೈದರಾಬಾದ್, ದುಬೈ ಹಾಗೂ ಕರ್ನಾಟಕದ ಎಲ್ಲಾ ಜಿಲ್ಲೆಗಳಲ್ಲಿ ಸಂಗೀತ ಕಾರ್ಯಕ್ರಮಗಳನ್ನು ನೀಡಿರುವ ಇವರು, ಕನ್ನಡ ಮತ್ತು ಸಂಸ್ಕøತಿ ಇಲಾಖೆ ನಡೆಸಿದ ವಚನ ಸಂಗಿತೋತ್ಸವ, ಹಂಪಿ ಉತ್ಸವ, ದುರ್ಗೋತ್ಸವ, ಹಾವೇರಿ ಜಿಲ್ಲಾ ಉತ್ಸವದಲ್ಲಿ ಸಂಗೀತ ಕಾರ್ಯಕ್ರಮ ನೀಡಿದ್ದಾರೆ.

ಏಪ್ರಿಲ್ 30ರಂದು ಬಸವ ಸಮಿತಿಯಲ್ಲಿ ನಡೆಯುವ ವಿಶ್ವ ಬಸವ ಜಯಂತಿ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಈ ಪ್ರಶಸ್ತಿಯು ಒಂದುಲಕ್ಷ ರೂ. ನಗದು ಮತ್ತು ಪ್ರಶಸ್ತಿ ಫಲಕವನ್ನೊಳಗೊಂಡಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment