Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಕಟ್ಟಡ ಕಾರ್ಮಿಕರ ಸಂಘದ ಕಚೇರಿಯಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಆಚರಣೆ

---Advertisement---

 

ವರದಿ ಮತ್ತು ಫೋಟೋ ಕೃಪೆ
ಕೆ.ಎಂ. ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್ 15 : ಜಿಲ್ಲಾ ಕಟ್ಟಡ ಕಾರ್ಮಿಕರ ಸಂಘದಿಂದ ಡಾ.ಬಿ.ಆರ್.ಅಂಬೇಡ್ಕರ್‍ರವರ ಜಯಂತಿಯನ್ನು ಸೋಮವಾರ ಆಚರಿಸಲಾಯಿತು.

ಡಾ.ಬಿ.ಆರ್.ಅಂಬೇಡ್ಕರ್‍ರವರ ಬೃಹಧಾಕಾರವಾದ ಫೋಟೋಗೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡಿದ ಜಿಲ್ಲಾ ಕಟ್ಟಡ ಕಾರ್ಮಿಕರ ಸಂಘದ ಅಧ್ಯಕ್ಷ ವೈ.ತಿಪ್ಪೇಸ್ವಾಮಿ

ಅಂಬೇಡ್ಕರ್‍ರವರ ಆಸೆಯಂತೆ ಶಿಕ್ಷಣ, ಸಂಘಟನೆ, ಹೋರಾಟದಿಂದ ಮಾತ್ರ ಎಲ್ಲರೂ ತಮಗೆ ಸಿಗಬೇಕಾದ ನ್ಯಾಯಯುತವಾದ ಹಕ್ಕುಗಳನ್ನು ಪಡೆದುಕೊಳ್ಳಬಹುದು. ಬಾಲ್ಯದಲ್ಲಿಯೇ ಹಿಂಸೆ, ಅವಮಾನ, ಅಸ್ಪøಶ್ಯತೆಯನ್ನು ಅನುಭವಿಸಿದ ಡಾ.ಬಿ.ಆರ್.ಅಂಬೇಡ್ಕರ್ ಹೊರದೇಶಗಳಲ್ಲಿ ವ್ಯಾಸಂಗ ಮಾಡಿ ಅಪಾರ ಪಾಂಡಿತ್ಯವನ್ನು ಪಡೆದಿದ್ದರಿಂದ ಸಂವಿಧಾನವನ್ನು ರಚಿಸಲು ಸಾಧ್ಯವಾಯಿತು. ಅದಕ್ಕಾಗಿ ಎಲ್ಲರೂ ಸಂವಿಧಾನದ ಆಶಯಗಳಂತೆ ನಡೆದುಕೊಳ್ಳಬೇಕೆಂದು ಮನವಿ ಮಾಡಿದರು.

ಜಿಲ್ಲಾ ಕಟ್ಟಡ ಕಾರ್ಮಿಕರ ಸಂಘದ ಉಪಾಧ್ಯಕ್ಷ ಎಂ.ಮಲ್ಲಿಕಾರ್ಜುನ್, ತಾಲ್ಲೂಕು ಅಧ್ಯಕ್ಷ ಜಾವೀದ್‍ಭಾಷ, ಮನ್ಸೂರ್‍ಭಾಷ, ಟಿ.ಬಸವರಾಜ್, ಎ.ನಾಗರಾಜ್, ಪಿ.ರಾಜಣ್ಣ,
ಅಶೋಕ್, ಸುರಂಗಿ ತಿಪ್ಪೇಶ್, ಪಿ.ವೀರೇಶ್, ಹನುಮಂತಪ್ಪ, ಡಿ.ಲಕ್ಷ್ಮಣ, ನಾಗಭೂಷಣ, ಎಂ.ಸುರೇಶ್, ರಾಜಣ್ಣ, ಸಂದೀಪ್, ಪಿ.ಲಕ್ಷ್ಮಿದೇವಿ ಇನ್ನು ಮುಂತಾದವರು ಅಂಬೇಡ್ಕರ್ ಜಯಂತಿಯಲ್ಲಿ ಭಾಗವಹಿಸಿದ್ದರು.

 

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment