Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಹಿರಿಯೂರಿನಲ್ಲಿ ಗೂಡಂಗಡಿಗಳ ತೆರವುಗೊಳಿಸಿ : ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚನೆ

---Advertisement---

ಹಿರಿಯೂರು, ಏಪ್ರಿಲ್. 17 : ನಗರದ ಒಳ ಬರುವ ಹಾಗೂ ಹೊರ ಬರುವ ರಾಷ್ಟ್ರೀಯ ಹೆದ್ದಾರಿ ರಸ್ತೆಯಲ್ಲಿ ಎಲ್ಲೆಂದರಲ್ಲಿ ಮಾರ್ಗ ಮಧ್ಯದಲ್ಲಿ ಬೃಹತ್ ವಾಹನಗಳು, ಲಾರಿಗಳು ಪಾರ್ಕಿಂಗ್ ಮಾಡುತ್ತಿದ್ದು, ಇದು ಅಪಾಯಕಾರಿ ವಲಯ ಆಗಿ ಮಾರ್ಪಟ್ಟಿದೆ. ಇಲ್ಲಿ ನಿಲ್ಲಿಸುವ ಲಾರಿಗಳಿಗೆ ದಂಡ ವಿಧಿಸಬೇಕು,  ಇಲ್ಲಿ ಗೂಡಂಗಡಿಗಳ ಹಾವಳಿ ಹೆಚ್ಚಾಗಿದ್ದು, ಈ ಅಂಗಡಿಗಳು ಇರುವ ಭೂಮಿ ಕೃಷಿಯೇತರಕ್ಕೆ ಪರಿವರ್ತನೆ ಆಗಿಲ್ಲ, ಇಲ್ಲಿನ ಎಲ್ಲ ಅಂಗಡಿಗಳು ಅನಧಿಕೃತವಾಗಿದ್ದು, ನೋಟಿಸ್ ನೀಡಿ ಕೂಡಲೆ ತೆರವುಗೊಳಿಸಬೇಕು, ಹಾಗೂ ಇಲ್ಲಿನ ಅಂಗಡಿಗಳಿಗೆ ವಿದ್ಯುತ್ ಸಂಪರ್ಕವನ್ನು ತ್ವರಿತವಾಗಿ ಕಡಿತಗೊಳಿಸಬೇಕು ಎಂದು ಹಿರಿಯೂರು ಪೌರಾಯುಕ್ತ ವಾಸೀಂ ಅವರಿಗೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚಿಸಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಟ್ರಕ್ ಟರ್ಮಿನಲ್‍ಗೆ ಈಗಾಗಲೇ ಎರಡು ಕಡೆಗಳಲ್ಲಿ ಜಾಗ ಗುರುತಿಸಲಾಗಿದೆ. 15 ದಿನಗಳೊಳಗಾಗಿ ಹಿರಿಯೂರು ನಗರ ವ್ಯಾಪ್ತಿಯಲ್ಲಿ ಸಂಚಾರಿ ಸೂಚನಾ ಫಲಕಗಳನ್ನು ಅಳವಡಿಸಲು ಕ್ರಮವಹಿಸಲಾಗುವುದು ಎಂದು ಹಿರಿಯೂರು ನಗರಸಭೆ ಪೌರಾಯುಕ್ತ ವಾಸೀಂ ತಿಳಿಸಿದರು.

ಅಪಘಾತ ವಲಯ ಹಾಗೂ ರಾಷ್ಟ್ರೀಯ, ರಾಜ್ಯ ಹಾಗೂ ಜಿಲ್ಲಾ ರಸ್ತೆಗಳನ್ನು ಸಂಪರ್ಕಿಸುವ ರಸ್ತೆಗಳಲ್ಲಿ ಹಾಗೂ ಜಂಕ್ಷನ್ ರಸ್ತೆಗಳಲ್ಲಿ ಕ್ಯಾಟ್‍ಐಸ್ ಅಳವಡಿಕೆ, ಬ್ಲಿಂಕರ್ಸ್, ರಂಬಲ್ ಸ್ಟ್ರಿಪ್ಸ್, ಸೂಚನಾ ಫಲಕಗಳ ಅಳವಡಿಕೆ ಸೇರಿದಂತೆ ಅಗತ್ಯ ರಸ್ತೆ ಸುರಕ್ಷತಾ ಮುನ್ನೆಚ್ಚರಿಕೆ ಕ್ರಮಗಳನ್ನು ಕೂಡಲೆ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment