ವರದಿ ಮತ್ತು ಫೋಟೋ ಕೃಪೆ
ಕೆ.ಎಂ. ಮುತ್ತುಸ್ವಾಮಿ ಕಣ್ಣನ್,
ಮೊ : 78998 64552
ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 18 : ಎರಡು ದಿನಗಳ ಕಾಲ ರಾಜ್ಯದಲ್ಲಿ ನಡೆದ ಸಿ.ಇ.ಟಿ. ಪರೀಕ್ಷೆಯಲ್ಲಿ ಬೀದರ್ ಮತ್ತು ಶಿವಮೊಗ್ಗದಲ್ಲಿ ವಿದ್ಯಾರ್ಥಿಗಳ ಜನಿವಾರ ತೆಗೆಸಿರುವ ಅಧಿಕಾರಿಗಳ ನಡೆಯನ್ನು ಚಿತ್ರದುರ್ಗ ಬ್ರಾಹ್ಮಣ ಸಂಘ ತೀವ್ರವಾಗಿ ಖಂಡಿಸಿದೆ.
ಬೀದರ್‌ನ ಸ್ಥಾಯಿ ಸ್ಪೂರ್ತಿ ಪರೀಕ್ಷಾ ಕೇಂದ್ರ ಹಾಗೂ ಶಿವಮೊಗ್ಗದ ಆದಿಚುಂಚನಗಿರಿ ಕಾಲೇಜಿನ ಪರೀಕ್ಷಾ ಕೇಂದ್ರದಲ್ಲಿ ವಿದ್ಯಾರ್ಥಿಗಳಿಗೆ ಜನಿವಾರ ತೆಗೆಸಿರುವುದು ಮತ್ತು ಜಾತಿ ಗಣತಿ ವಿಚಾರದಲ್ಲಿ ಸರ್ಕಾರದ ನಿರ್ಲಕ್ಷೆಯನ್ನು ಚಿತ್ರದುರ್ಗ ಬ್ರಾಹ್ಮಣ ಸಂಘದ ಪರವಾಗಿ ಕಾರ್ಯಕಾರಿ ಸಮಿತಿಯವರು ವಿರೋಧಿಸಿದ್ದಾರೆ.










