Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಬಳ್ಳಾರಿಯ ಜೀವನಾಡಿ ತುಂಗಭದ್ರ ಡ್ಯಾಂನಲ್ಲಿ ಮತ್ತೊಂದು ಸಮಸ್ಯೆ..!

---Advertisement---

 

 

ಬಳ್ಳಾರಿ; ತುಂಗಭದ್ರಾ ಡ್ಯಾಂ ನೀರನ್ನ ನಂಬಿಕೊಂಡೆ ಕಲ್ಯಾಣ ಕರ್ನಾಟಕದ ಜೀವನಾಡಿಯಾಗಿದೆ. ಇಲ್ಲಿನ ಜನರ ಪಾಲಿಗೆ ತುಂಗಭದ್ರಾ ಡ್ಯಾಂ ನೀರು ಬಹಳ ಮುಖ್ಯವಾಗಿ ಬೇಕಾಗಿದೆ. ಆದರೆ ಈಗ ನೋಡಿದ್ರೆ ಮತ್ತೊಂದು ಸಮಸ್ಯೆ ಕಾಡಿದ್ದು, ರೈತರಿಗೆ ಆತಂಕ ಶುರುವಾಗಿದೆ. ವರ್ಷದಿಂದ ವರ್ಷಕ್ಕೆ ಬಾರೀ ಪ್ರಮಾಣದ ಹೂಳು ತುಂಬಿಕೊಂಡಿದೆ. ಹೂಳನ್ನ ಎತ್ತುವಂತೆ ಆಗ್ರಹಿಸಿ ರೈತರು ಹಾಗೂ ಅಲ್ಲಿನ ಸ್ಥಳೀಯರು ನಿರಂತರವಾಗಿ ಸರ್ಕಾರದ ವಿರುದ್ಧ ಹೋರಾಟವನ್ನು ಮಾಡ್ತಾನೇ ಇದ್ದಾರೆ. ಆದರೂ ಏನು ಪ್ರಯೋಜನವಾಗಿಲ್ಲ.

ಈ ವರ್ಷವಾದರೂ ಹೂಳು ತೆಗೆಯಲಿ ಎಂಬುದು ರೈತರ ಒತ್ತಾಯವಾಗಿದೆ. ಡ್ಯಾಂ ನಿರ್ಮಾಣವಾದಾಗ ಸುಮಾರು 132 ಟಿಎಂಸಿ ನೀರನ್ನು ಸಂಗ್ರಹ ಮಾಡುವ ಸಾಮರ್ಥ್ಯ ಹೊಂದಿದೆ. ಹೀಗಾಗಿ ವರ್ಷದಿಂದ ವರ್ಷಕ್ಕೆ ತುಂಗಭದ್ರಾ ಡ್ಯಾಂ ನೀರಿನ ಸಂಗ್ರಹದ ಪ್ರಮಾಣ ಕಡಿಮೆ ಆಗುತ್ತಿದೆ. ಇದರಿಂದ ಕುಡಿಯುವ ನೀರಿನ ಸಮಸ್ಯೆ, ರೈತರ ಬೆಳೆಗಳಿಗೆ ನೀರಿನ ಸಮಸ್ಯೆ ಉಂಟಾಗುತ್ತದೆ. ಸರ್ಕಾರ ಕೂಡಲೇ ಹೂಳು ತೆಗೆಯುವ ಕಾರ್ಯಜ್ಕೆ ಮುಂದಾಗಬೇಕು ಎಂಬುದು ರೈತರ ಒತ್ತಾಯವಾಗಿದೆ. ತುಂಗಭದ್ರಾ ಡ್ಯಾಂನ ಸರ್ವೇ ಪ್ರಕಾರ ಸರಿಸುಮಾರು 28 ಟಿಎಂಸಿ ನೀರು ಸಂಗ್ರಹವಾಗುವಷ್ಟು ಹೂಳು ತುಂಬಿದೆ.

 

ಹೀಗಾಗಿ 132 ಟಿಎಂಸಿ ನೀರನ್ನು ಸಂಗ್ರಹ ಮಾಡುವ ಬದಲು 103-105 ಟಿಎಂಸಿ ನೀರನ್ನ ಸಂಗ್ರಹ ಮಾಡುತ್ತಿದೆ. ಹಿಂದಿನ ಸರ್ಕಾರಗಳು ಹೂಳು ತೆಗೆಯಲು ಹಲವು ತಂತ್ರಜ್ಞಾನವನ್ನು ಬಳಸುವುದಕ್ಕೆ ಮುಂದಾಗಿದ್ದವು. ಆದರೆ ಅದರ ಖರ್ಚು ವೆಚ್ಚ ಸಾವಿರಾರು ಕೋಟಿ ರೂಪಾಯಿ ಆಗುವ ಆ ಪ್ರಾಜೆಕ್ಟ್ ಅನ್ನ ಕೈಬಿಡಲಾಗಿತ್ತು. ಆದರೆ ಹೂಳನ್ನ ಎತ್ತದೆ ಹೋದರೆ ನೀರು ರೈತರ ಬಳಕೆಗೆ ಅಇಗುವುದಿಲ್ಲ ಎಂಬುದು ರೈತರ ಗೋಳಾಟವಾಗಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment