Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಬಳ್ಳಾರಿ | ಏಪ್ರಿಲ್ 21 ಮತ್ತು 22 ರಂದು ವಿದ್ಯುತ್ ವ್ಯತ್ಯಯ

---Advertisement---

 

ಬಳ್ಳಾರಿ,ಏ.19 : ಬಳ್ಳಾರಿ ನಗರ ಜೆಸ್ಕಾಂ ಉಪವಿಭಾಗ-1 ರ ವ್ಯಾಪ್ತಿಯ 220/11ಕೆವಿ ಅಲ್ಲಿಪುರ ವಿದ್ಯುತ್ ವಿತರಣಾ ಕೇಂದ್ರದಿಂದ ವಿದ್ಯುತ್ ಸರಬರಾಜು ಆಗುವ ಬ್ಯಾಂಕ್-2ನ ಫೀಡರ್ ಆದ ಎಫ್-36 ರ ತುರ್ತು ನಿರ್ವಹಣಾ ಕಾಮಗಾರಿ ಕೈಗೊಳ್ಳುತ್ತಿರುವುದರಿಂದ ಏ.21 ರಂದು ಬೆಳಿಗ್ಗೆ 09 ಗಂಟೆಯಿAದ ಸಂಜೆ 05 ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ತಿಳಿಸಿದ್ದಾರೆ.

ವಿದ್ಯುತ್ ವ್ಯತ್ಯಯವಾಗುವ ಪ್ರದೇಶಗಳು:
ನಗರದ ಬಂಡಿಹಟ್ಟಿ, ಆಶ್ರಯ ಕಾಲೋನಿ, ಈದ್ಗ ರೋಡ್, ಟೀರ‍್ಸ್ ಕಾಲೋನಿ, ಜಾಗೃತಿ ನಗರ ಸರ್ಕಲ್, ಆಜಾದ್ ನಗರ ಸೇರಿದಂತೆ ಇನ್ನೂ ಮುಂತಾದ ಏರಿಯಾಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಮತ್ತು ವಿದ್ಯುತ್ ಗ್ರಾಹಕರು ಸಹಕರಿಸಬೇಕು ಎಂದು ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಏಪ್ರಿಲ್ 22 ರಂದು ಬಳ್ಳಾರಿ ಗ್ರಾಮೀಣ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯ :

ಬಳ್ಳಾರಿ ಗ್ರಾಮೀಣ ಜೆಸ್ಕಾಂ ವ್ಯಾಪ್ತಿಯ 110ಕೆ.ವಿ ಅಲ್ಲಿಪುರ-ಬಳ್ಳಾರಿ ಉತ್ತರ ಮಾರ್ಗದ ಲಿಲೋ ನಿರ್ಮಾಣ ಕಾರ್ಯ ತುರ್ತಾಗಿ ಕೈಗೊಳ್ಳುತ್ತಿರುವುದರಿಂದ 110/11ಕೆ.ವಿ ಸೋಮಸಮುದ್ರ ವಿದ್ಯುತ್ ಉಪ-ಕೇಂದ್ರ ಮತ್ತು 33/11ಕೆ.ವಿ ಗುಡದೂರು ವಿದ್ಯುತ್ ಉಪಕೇಂದ್ರದಿAದ ವಿದ್ಯುತ್ ಸರಬರಾಜು ಆಗುವ ಎಲ್ಲಾ 11ಕೆ.ವಿ ಮಾರ್ಗಗಳಲ್ಲಿ ಏ.22 ರಂದು ಬೆಳಿಗ್ಗೆ 07 ಗಂಟೆಯಿAದ ಸಂಜೆ 06 ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ತಿಳಿಸಿದ್ದಾರೆ.

ವಿದ್ಯುತ್ ವ್ಯತ್ಯಯವಾಗುವ ಪ್ರದೇಶಗಳು:
110/11ಕೆ.ವಿ ಶ್ರೀಧರಗಡ್ಡೆ ಉಪ-ಕೇಂದ್ರದ 110/11ಕೆ.ವಿ ಶ್ರೀಧರಗಡ್ಡೆ ಉಪ-ಕೇಂದ್ರದಿAದ ಹೊರಡುವ ಎಲ್ಲಾ 11ಕೆ.ವಿ ಫೀಡರ್‌ಗಳು ಮತ್ತು 33/11ಕೆ.ವಿ ಗುಡದೂರು ಉಪ-ಕೇಂದ್ರದ 33/11ಕೆ.ವಿ ಗುಡದೂರು ಉಪ-ಕೇಂದ್ರದಿAದ ಹೊರಡುವ ಎಲ್ಲಾ 11ಕೆ.ವಿ. ಫೀಡರ್‌ಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ವಿದ್ಯುತ್ ಗ್ರಾಹಕರು ಮತ್ತು ಸಾರ್ವಜನಿಕರು ಸಹಕರಿಸಬೇಕು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...