ಚಿತ್ರದುರ್ಗ. ಏ.23: ಪ್ರಾದೇಶಿಕ ಸಾರಿಗೆ ಅಧಿಕಾರಿಗಳವರ ಕಚೇರಿ ವತಿಯಿಂದ ಇದೇ ಏ.29 ರಂದು ಸಂಜೆ 4 ರಿಂದ 5.30 ರವರೆಗೆ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿ ಆವರಣದಲ್ಲಿ ಸಾರಿಗೆ ಇಲಾಖೆಗೆ ಸಂಬಂಧಿಸಿದ ಕುಂದುಕೊರತೆ ಆಲಿಸಲು ಹಾಗೂ ಸಾರ್ವಜನಿಕರ ಅನುಕೂಲಕ್ಕಾಗಿ “ಸಾರಿಗೆ ಅದಾಲತ್” ಏರ್ಪಡಿಸಲಾಗಿದೆ.
ಸಾರ್ವಜನಿಕರು ಸಾರಿಗೆ ಅದಾಲತ್ನಲ್ಲಿ ಭಾಗವಹಿಸಿ ಇಲಾಖೆಗೆ ಸಂಬಂಧಿಸಿದ ಕುಂದುಕೊರತೆಗಳನ್ನು ಹಾಗೂ ತಮ್ಮ ಅಹವಾಲುಗಳನ್ನು ಸಲ್ಲಿಸಿ ಪರಿಹಾರ ಪಡೆದುಕೊಳ್ಳಬೇಕು ಹಾಗೂ ಸಾರಿಗೆ ಅದಾಲತ್ನ ಸದುಪಯೋಗವನ್ನು ಸಾರ್ವಜನಿಕರು ಪಡೆದುಕೊಳ್ಳಬೇಕು ಎಂದು ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ಕೋರಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

















