Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಉಮೇಶ್ ಅವರಿಗೆ ಸರಸ್ವತಿ ಸಾಧಕ ಸಿರಿ ರಾಷ್ಟ್ರೀಯ ಪ್ರಶಸ್ತಿ : 27 ರಂದು ದಾವಣಗೆರೆಯಲ್ಲಿ ಪ್ರದಾನ

---Advertisement---

ಸುದ್ದಿಒನ್, ಹೊಳಲ್ಕೆರೆ, ಏಪ್ರಿಲ್. 24 : ತಾಲ್ಲೂಕಿನ ತೊಡರನಾಳಿನ ಸಾಹಿತಿ, ರಾಷ್ಟ್ರಪ್ರಶಸ್ತಿ ಪುರಸ್ಕೃತ ಶಿಕ್ಷಕರಾದ ಡಾ.ಉಮೇಶ್ ಟಿ.ಪಿ.ರವರ ಸಾಹಿತ್ಯಿಕ ಸೇವೆ ಗುರುತಿಸಿ ದಾವಣಗೆರೆಯ ಕಲಾಕುಂಚ ಸಾಂಸ್ಕೃತಿಕ ಸಂಸ್ಥೆಯವರು ಸರಸ್ವತಿ ಸಾಹಿತ್ಯ ಸಿರಿ ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಮಾಡಿದ್ದಾರೆ.

ಏಪ್ರಿಲ್ 27 ರಂದು ದಾವಣಗೆರೆಯಲ್ಲಿ ನಡೆಯುವ ಸಮಾರಂಭದಲ್ಲಿ ಸಾಧಕರನ್ನು ಗೌರವಿಸಲಾಗುವುದು ಎಂದು ಸಂಸ್ಥೆಯ ಸ್ಥಾಪಕ ಅಧ್ಯಕ್ಷರಾದ ಸಾಲಿಗ್ರಾಮ ಗಣೇಶ ಶೆಣೈ ತಿಳಿಸಿದ್ದಾರೆ. ಡಾ.ಉಮೇಶ್ ಟಿ.ಪಿ.ರವರು ಇದುವರೆಗೆ ಫೋಟೋಕ್ಕೊಂದು ಫ್ರೇಮು, ದೇವರಿಗೆ ಬೀಗ, ಅಪ್ಪನು ಕೊಡಿಸಿದ ಮೊದಲ ಪುಸ್ತಕ, ನನ್ನಯ ಸೈಕಲ್ ಟ್ರಿಣ್ ಟ್ರಿಣ್, ವಚನವಾಣಿ, ವಚನಾಂಜಲಿ, ಅಳಿಗೊಂಡಿಹರೆಂದು ಅಂಜದೇಕೆ?, ಗಂಡಸಾಗಿ ಕವಿತೆ ಬರೆಯುವುದು ಸುಲಭ! ಎಂಬ ಸಾಹಿತ್ಯಿಕ, ಸಂಸ್ಕೃತಿ ಚಿಂತನ ಕೃತಿಗಳನ್ನು ರಚಿಸಿದ್ದು ನಾಡಿನ ಸಾಹಿತ್ಯ ಸಹೃದಯರ ಗಮನ ಸೆಳೆದಿವೆ.
ಉಮೇಶ ಪ್ರಿಯ ವಿಶ್ವಗುರು ಬಸವೇಶ್ವರ ಎಂಬ ಅಂಕಿತನಾಮದಲ್ಲಿ ಸಾವಿರಕ್ಕೂ ಹೆಚ್ಚಿನ ವಚನಗಳ ರಚನೆಯ ಮೂಲಕ ಆಧುನಿಕ ವಚನಕಾರರಾಗಿ ಖ್ಯಾತಿ ಗಳಿಸಿದ್ದಾರೆ.

ಶೈಕ್ಷಣಿಕವಾಗಿ ಅಮೃತಾಪುರ ಪ್ರಾಥಮಿಕ ಶಾಲೆಯನ್ನು ಭೌತಿಕವಾಗಿ ಗುಣಾತ್ಮಕವಾಗಿ ಅಭಿವೃದ್ಧಿಗೊಳಿಸಲು ಶ್ರಮಿಸಿರುತ್ತಾರೆ. ನೂರಾರು ಶೈಕ್ಷಣಿಕ ಕಾರ್ಯಕ್ರಮಗಳ ಮೂಲಕ ವಿದ್ಯಾರ್ಥಿಗಳ ಕಲಿಕಾ ಪ್ರಗತಿಗೆ ಸೇವೆ ಸಲ್ಲಿಸಿರುತ್ತಾರೆ.

ಸರಸ್ವತಿ ಸಾಧಕ ಸಿರಿ ರಾಷ್ಟ್ರೀಯ ಪುರಸ್ಕಾರ ಲಭಿಸಿರುವ ಈ ಸಂದರ್ಭದಲ್ಲಿ ತೊಡರನಾಳು, ಅಮೃತಾಪುರ ಹಾಗು ತುಪ್ಪದಹಳ್ಳಿ ಗ್ರಾಮಸ್ಥರು, ವಿದ್ಯಾರ್ಥಿಗಳು, ಸ್ನೇಹಿತರು ಹಾಗು ಶಿಕ್ಷಕ ವೃತ್ತಿ ಬಂಧುಗಳು ಅಭಿನಂದನೆ ಸಲ್ಲಿಸಿರುತ್ತಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment